ETV Bharat / bharat

ಕರ್ನಾಟಕ ಸೇರಿ 5 ರಾಜ್ಯಗಳಿಗೆ ಕೋವ್ಯಾಕ್ಸಿನ್ ಪೂರೈಕೆ: ಭಾರತ್ ಬಯೋಟೆಕ್ - ಸುಚಿತ್ರಾ ಎಲ್ಲಾ

ನಮ್ಮ ಕೆಲಸಗಳಿಗೆ ಯಾವಾಗಲೂ ಕೃತಜ್ಞರಾಗಿರಬೇಕು. ಭರವಸೆಯಿಡೋಣ ಎಂದು ತಿಳಿಸಿದ್ದಾರೆ. ಆದರೆ, ಯಾವ ರಾಜ್ಯಕ್ಕೆ ಎಷ್ಟು ಲಸಿಕೆಗಳನ್ನು ಪೂರೈಕೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಸುಚಿತ್ರಾ ಬಹಿರಂಗಪಡಿಸಿಲ್ಲ..

Covaxin
ಭಾರತ್ ಬಯೋಟೆಕ್
author img

By

Published : May 14, 2021, 2:28 PM IST

ನವದೆಹಲಿ : ಗುಜರಾತ್, ಅಸ್ಸೋಂ ತಮಿಳುನಾಡು, ಕರ್ನಾಟಕ ಮತ್ತು ಒಡಿಶಾ ರಾಜ್ಯಗಳಿಗೆ ಕೋವ್ಯಾಕ್ಸಿನ್ ಲಸಿಕೆಗಳನ್ನು ಪೂರೈಸಲಾಗಿದೆ ಎಂದು ಭಾರತ್ ಬಯೋಟೆಕ್ ಸ್ಪಷ್ಟನೆ ನೀಡಿದೆ.

ಕೋವ್ಯಾಕ್ಸಿನ್ ಲಸಿಕೆ ಸರಬರಾಜು ಸಂಬಂಧ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಭಾರತ್ ಬಯೋಟೆಕ್ ಸಹ-ಸಂಸ್ಥಾಪಕಿ ಹಾಗೂ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಸುಚಿತ್ರಾ ಎಲ್ಲಾ, ಗುಜರಾತ್, ಅಸ್ಸೋಂ, ತಮಿಳುನಾಡು, ಕರ್ನಾಟಕ ಮತ್ತು ಒಡಿಶಾ ರಾಜ್ಯಗಳಿಗೆ ಕೋವ್ಯಾಕ್ಸಿನ್ ಲಸಿಕೆಗಳನ್ನು ಕಳುಹಿಸಲಾಗಿದೆ. ಕೇರಳ ಹಾಗೂ ಉತ್ತರಾಖಂಡ ರಾಜ್ಯಗಳಿಗೂ ಮುಂದಿನ ದಿನಗಳಲ್ಲಿ ಪೂರೈಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಗಾಂಧಿನಗರ, ಗುವಾಹಟಿ, ಚೆನ್ನೈ, ಹೈದರಾಬಾದ್, ಬೆಂಗಳೂರು ಮತ್ತು ಭುವನೇಶ್ವರಕ್ಕೂ ಲಸಿಕೆಯನ್ನು ರವಾನಿಸಲಾಗಿದೆ ಎಂದರು. ಈ ಬಗ್ಗೆ ಟ್ವೀಟ್ ಮಾಡಿದ್ದ ಸುಚಿತ್ರಾ ಅವರು, ಕೇರಳ ಮತ್ತು ಉತ್ತರಾಖಂಡ್ ರಾಜ್ಯಗಳಿಗೆ ಕೋವ್ಯಾಕ್ಸಿನ್ ರವಾನಿಸಲಾಗಿದೆ.

ನಮ್ಮ ಕೆಲಸ ಅತ್ಯಂತ ಕಠಿಣವಾಗಿದೆ. ನಮ್ಮ ಎಲ್ಲ ಉದ್ಯೋಗಿಗಳನ್ನು ಸುರಕ್ಷಿತೆಯಿಂದ ನೋಡಿಕೊಳ್ಳಲಾಗುತ್ತದೆ. ನಮ್ಮ ಕೆಲಸಗಳಿಗೆ ಯಾವಾಗಲೂ ಕೃತಜ್ಞರಾಗಿರಬೇಕು. ಭರವಸೆಯಿಡೋಣ ಎಂದು ತಿಳಿಸಿದ್ದಾರೆ. ಆದರೆ, ಯಾವ ರಾಜ್ಯಕ್ಕೆ ಎಷ್ಟು ಲಸಿಕೆಗಳನ್ನು ಪೂರೈಕೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಸುಚಿತ್ರಾ ಬಹಿರಂಗಪಡಿಸಿಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.