ನವದೆಹಲಿ: ಭಾರತ್ ಬಯೋಟೆಕ್ನಿಂದ ಅಭಿವೃದ್ಧಿಗೊಂಡಿರುವ ಕೋವ್ಯಾಕ್ಸಿನ್ ಲಸಿಕೆ ಭಾರತ ಹಾಗೂ ಬ್ರಿಟನ್ನಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್ (ಮೊದಲ ಬಾರಿಗೆ ಪತ್ತೆ) ವಿರುದ್ಧ ಬಹಳಷ್ಟು ಪರಿಣಾಮಕಾರಿಯಾಗಿದೆ ಎಂದು ಅಧ್ಯಯನದಲ್ಲಿ ತಿಳಿದು ಬಂದಿದೆ.
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR) ಸಹಯೋಗದಲ್ಲಿ ನಡೆದ ಅಧ್ಯಯನದಿಂದ ಈ ಮಾಹಿತಿ ತಿಳಿದು ಬಂದಿರುವುದಾಗಿ ಲಸಿಕೆ ಉತ್ಪಾದನಾ ಸಂಸ್ಥೆ ಭಾರತ್ ಬಯೋಟೆಕ್ ಮಾಹಿತಿ ಹಂಚಿಕೊಂಡಿದೆ.
ಭಾರತದಲ್ಲಿ ಈಗಾಗಲೇ ಪತ್ತೆಯಾಗಿರುವ ಬಿ.1.617 ಹಾಗೂ ಬ್ರಿಟನ್ನ ಬಿ.1.1.7 ಕೋವಿಡ್ ರೂಪಾಂತರಿ ವಿರುದ್ಧ ಕೋವ್ಯಾಕ್ಸಿನ್ ಪರಿಣಾಮಕಾರಿಯಾಗಿ ಹೋರಾಟ ನಡೆಸಲಿದೆ ಎಂದು ಅದು ಭಾನುವಾರ ತಿಳಿಸಿದೆ. ಸಂಶೋಧನಾ ಮಾಹಿತಿಯ ಪ್ರಕಾರ ಕೋವ್ಯಾಕ್ಸಿನ್ ಕೊರೊನಾ ರೂಪಾಂತರಿ ವಿರುದ್ಧ ಲಸಿಕೆ ಪರಿಣಾಮಕಾರಿಯಾಗಿದ್ದು, ಬಿ.617 ಮಾದರಿ ತೊಡೆದು ಹಾಕುವಲ್ಲಿ ಯಶಸ್ವಿಯಾಗಿದೆ. ಇದರ ಜತೆಗೆ ಬ್ರಿಟನ್ನ ಬಿ.1.1.7 ವಿರುದ್ಧ ಕೂಡ ಪರಿಣಾಮಕಾರಿಯಾಗಿದೆ ಎಂದು ಹೇಳಿದೆ.
ಇದನ್ನೂ ಓದಿ: 'ಮೋದಿಜೀ ನಮ್ಮನ್ನು ಅರೆಸ್ಟ್ ಮಾಡಿ', ಪ್ರಿಯಾಂಕಾ, ರಾಹುಲ್ ಗಾಂಧಿ ಟ್ವೀಟ್
ಭಾರತದಲ್ಲಿ ಕೊರೊನಾ ವೈರಸ್ ವಿರುದ್ಧ ನೀಡಲಾಗುತ್ತಿರುವ ಲಸಿಕೆಗಳ ಪೈಕಿ ಕೋವ್ಯಾಕ್ಸಿನ್ ಕೂಡ ಒಂದಾಗಿದ್ದು, ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ ದೇಶದಲ್ಲಿ ಇಲ್ಲಿಯವರೆಗೆ ಒಟ್ಟು 18,22,20,164 ಡೋಸ್ ಲಸಿಕೆ ನೀಡಲಾಗಿದೆ.