ಪಾಟ್ನಾ (ಬಿಹಾರ): ಭಾರತ್ ಬಯೋಟೆಕ್ ತಯಾರಿಸಿದ ಕೋವಿಡ್-19 ಲಸಿಕೆಯಾದ ಕೋವಾಕ್ಸಿನ್ನ ಕ್ಲಿನಿಕಲ್ ಪ್ರಯೋಗಗಳನ್ನು ಮಕ್ಕಳ ಮೇಲೆ ನಡೆಸಲು ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಮುಂದಾಗಿದೆ.
2ರಿಂದ 18 ವರ್ಷದೊಳಗಿನ ಮಕ್ಕಳ ಮೇಲೆ ಕೋವಾಕ್ಸಿನ್ನ 2 ಮತ್ತು 3ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಮೇ 11ರಂದು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮೋದನೆ ನೀಡಿತ್ತು. ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿರುವ ಹಿನ್ನೆಲೆ ದೇಶದಲ್ಲಿ ಮಕ್ಕಳಿಗೆ ಆದಷ್ಟು ಬೇಗ ವ್ಯಾಕ್ಸಿನೇಷನ್ ಆರಂಭಿಸುವುದು ಅಗತ್ಯವಿದೆ.
ಇದನ್ನೂ ಓದಿ: 2-18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ: ಕ್ಲಿನಿಕಲ್ ಪ್ರಯೋಗ ನಡೆಸಲು ಭಾರತ್ ಬಯೋಟೆಕ್‌ಗೆ DCGI ಒಪ್ಪಿಗೆ
ಭಾರತದಲ್ಲಿ ಜನವರಿ 16ರಂದು ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನ ಆರಂಭವಾಗಿದ್ದು, ಆರಂಭದಲ್ಲಿ ಆರೋಗ್ಯ ಕಾರ್ಯಕರ್ತರು ಹಾಗೂ ಕೊರೊನಾ ಹೋರಾಟದಲ್ಲಿನ ಮುಂಚೂಣಿ ಕಾರ್ಮಿಕರಿಗೆ ಲಸಿಕೆ ನೀಡಲಾಯಿತು. ಮಾರ್ಚ್ 1ರಿಂದ 65 ವರ್ಷ ಮೇಲ್ಪಟ್ಟವರಿಗೆ, ಏಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೇ 1ರಿಂದ 18 ರಿಂದ 44 ವರ್ಷದವರಿಗೆ ವ್ಯಾಕ್ಸಿನ್ ನೀಡಲಾಗುತ್ತಿದೆ. ಈವರೆಗೆ 22 ಕೋಟಿಗೂ ಅಧಿಕ ಮಂದಿ ಲಸಿಕೆ ಪಡೆದಿದ್ದಾರೆ.
ಇನ್ನು ಅಮೆರಿಕದಲ್ಲಿ ಈಗಾಗಲೇ ಫೈಜರ್ ಹಾಗೂ ಬಯೋಎನ್ಟೆಕ್ ಸಂಸ್ಥೆ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೋವಿಡ್ ಲಸಿಕೆಯನ್ನು 12ರಿಂದ 15 ವರ್ಷ ವಯಸ್ಸಿನ ಮಕ್ಕಳಿಗೆ ನೀಡಲಾಗುತ್ತಿದೆ.