ನವದೆಹಲಿ: ಕೋವಿಡ್ ಬೂಸ್ಟರ್ ಡೋಸ್ ಪಡೆದುಕೊಳ್ಳುವ ಅಂತರದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಇಳಿಕೆ ಮಾಡಿದೆ. ಕೋವಿಡ್ ವ್ಯಾಕ್ಸಿನೇಷನ್ ಪಡೆದುಕೊಂಡ 9 ತಿಂಗಳ ಬದಲಾಗಿ ಆರು ತಿಂಗಳಿಗೆ ಬೂಸ್ಟರ್ ಡೋಸ್ ಪಡೆದುಕೊಳ್ಳುವ ಅಧಿಸೂಚನೆ ಹೊರಡಿಸಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಹೊಸ ಮಾರ್ಗಸೂಚಿ ಪ್ರಕಾರ 9 ತಿಂಗಳು ಅಥವಾ 39 ವಾರಗಳ ಬದಲಾಗಿ 6 ತಿಂಗಳು ಅಥವಾ 26 ವಾರಗಳಲ್ಲಿ ಇದೀಗ 18-59 ವಯಸ್ಸಿನ ಫಲಾನುಭವಿಗಳು ಕೋವಿಡ್ ಬೂಸ್ಟರ್ ಡೋಸ್ ಪಡೆದುಕೊಳ್ಳಬಹುದಾಗಿದೆ ಎಂದಿದೆ.
ಇದನ್ನೂ ಓದಿರಿ: ಪಂಚಾಯ್ತಿ ಉಪಚುನಾವಣೆ: 130 ಸೀಟುಗಳ ಪೈಕಿ 102ರಲ್ಲಿ ಬಿಜೆಪಿ ಅವಿರೋಧ ಆಯ್ಕೆ
ಕೋವಿಡ್ನ ಎರಡನೇ ಡೋಸ್ ಪಡೆದ ಆರು ತಿಂಗಳ ಬಳಿಕ ಫಲಾನುಭವಿಗಳು ಮುನ್ನೆಚ್ಚರಿಕೆ ಡೋಸ್ ಪಡೆದುಕೊಳ್ಳಬಹುದಾಗಿದೆ. ಖಾಸಗಿ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಈ ಸೋಂಕು ಲಭ್ಯವಿರುತ್ತದೆ ಎಂದು ತಿಳಿಸಿದೆ. ಜೂನ್ ತಿಂಗಳಲ್ಲಿ ನಡೆದ ಸ್ಥಾಯಿ ತಾಂತ್ರಿಕ ಉಪಸಮಿತಿ ಸಭೆಯಲ್ಲಿ ಬೂಸ್ಟರ್ ಡೋಸ್ ನೀಡುವ ಅಂತರದಲ್ಲಿ ಇಳಿಕೆ ಮಾಡಲು ಶಿಫಾರಸು ಮಾಡಿತ್ತು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.