ETV Bharat / bharat

ಕೊರೊನಾ ಅಬ್ಬರ: ಇಂದಿನಿಂದ ಮಹಾರಾಷ್ಟ್ರದಲ್ಲಿ ನೈಟ್​ ಕರ್ಫ್ಯೂ; ರಾತ್ರಿ 8ರಿಂದ ಬೆಳಗ್ಗೆ 7ರವರೆಗೆ ಬಂದ್​!

ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ, ಇಂದಿನಿಂದ ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿಗೊಳ್ಳಲಿದೆ.

Maharashtra night curfew from tonight
Maharashtra night curfew from tonight
author img

By

Published : Mar 28, 2021, 4:52 AM IST

ಮುಂಬೈ: ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆ ಮಹಾರಾಷ್ಟ್ರದಲ್ಲಿ ಜೋರಾಗಿ ಬೀಸುತ್ತಿರುವ ಕಾರಣ ಇಂದಿನಿಂದ ರಾಜ್ಯದಾದ್ಯಂತ ನೈಟ್​ ಕರ್ಫ್ಯೂ ವಿಧಿಸಲಾಗಿದೆ. ರಾತ್ರಿ 8 ಗಂಟೆಯಿಂದ ಬೆಳಗ್ಗೆ 7ರವರೆಗೆ ಬಹುತೇಕ ಎಲ್ಲ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ. ಆದರೆ ತುರ್ತು ಸೇವೆಗೆ ಅವಕಾಶ ನೀಡಲಾಗಿದೆ.

ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಅತಿ ಹೆಚ್ಚಿನ ಕೊರೊನಾ ಸೋಂಕಿತ ಪ್ರಕರಣ ದಾಖಲಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಎಲ್ಲ ಮಾಲ್​​ಗಳು ರಾತ್ರಿ 8ರಿಂದ ಬೆಳಗ್ಗೆ 7ರವರೆಗೆ ಬಂದ್​​ ಆಗಿರಲಿವೆ. ಪ್ರಮುಖ ಪ್ರದೇಶಗಳಲ್ಲಿ ಜನದಟ್ಟಣೆ ತಡೆಗಟ್ಟುವ ಉದ್ದೇಶದಿಂದ ರಾತ್ರಿ ಕರ್ಫ್ಯೂ ವಿಧಿಸಲಾಗಿದ್ದು, ಪ್ರಮುಖವಾಗಿ ಶಾಪಿಂಗ್​ ಸೆಂಟರ್​, ಅಂಗಡಿಗಳು ಬಂದ್ ಇರಲಿದ್ದು, ಜನನಿಬೀಡ ಪ್ರದೇಶಗಳಲ್ಲಿ ಜನರು ಸುತ್ತಾಡುವುದನ್ನ ನಿಷೇಧಿಸಲಾಗಿದೆ.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ಫೋನ್​​ ಮಾಡಿ ಸಹಾಯ ಕೇಳಿದ್ರು... ಬಿಜೆಪಿ ಮುಖಂಡನಿಂದ ಆಡಿಯೋ ರಿಲೀಸ್​!

ಮಹಾರಾಷ್ಟ್ರದಲ್ಲಿ ಕಳೆದ ಕೆಲ ದಿನಗಳಿಂದ 30 ಸಾವಿರಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗುತ್ತಿರುವುದು ಅಲ್ಲಿನ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದ್ದು, ಇಂದಿನಿಂದ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಿದೆ. ಜತೆಗೆ ಕಡ್ಡಾಯವಾಗಿ ಮಾಸ್ಕ್​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದ್ದು, ರಾತ್ರಿ 8 ಗಂಟೆಯ ನಂತರ ಮನೆಯಿಂದ ಹೊರಬಿದ್ದರೆ ದಂಢ ವಿಧಿಸಲಾಗುವುದು ಎಂದು ತಿಳಿಸಿದೆ.

ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗಿರುವ ಕಾರಣ ನಾಗ್ಪುರ್, ಬೀಡ್, ಔರಂಗಾಬಾದ್​​​ ಸೇರಿದಂತೆ ಕೆಲವೊಂದು ಪ್ರದೇಶಗಳಲ್ಲಿ ಈಗಾಗಲೇ ಲಾಕ್​ಡೌನ್​ ಜಾರಿಗೊಳಿಸಲಾಗಿದ್ದು, ಸೋಂಕಿತ ಪ್ರಕರಣ ಹತೋಟಿಗೆ ಬರದೇ ಹೋದರೆ ಸಂಪೂರ್ಣ ಮಹಾರಾಷ್ಟ್ರ ಲಾಕ್​ಡೌನ್​ ಆಗುವ ಸಾಧ್ಯತೆ ಕೂಡ ದಟ್ಟವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.