ETV Bharat / bharat

ಕೋವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳನ್ನು ಕಂಡರೆ ಹೃದಯ ಕಲಕುತ್ತದೆ: ಸುಪ್ರೀಂಕೋರ್ಟ್​

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ‘ಬಾಲ ಸ್ವರಾಜ್’ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾದ ಮಾಹಿತಿಯ ಪ್ರಕಾರ, 2020 ರ ಏಪ್ರಿಲ್ 1ರಿಂದ ಈ ವರ್ಷದ ಆಗಸ್ಟ್‌ವರೆಗೆ 2,38,161 ಮಕ್ಕಳು ಅನಾಥರಾಗಿದ್ದಾರೆ, 92,475 ಮಕ್ಕಳು ತಮ್ಮ ಒಬ್ಬ ಪೋಷಕರನ್ನು ಕಳೆದುಕೊಂಡಿದ್ದಾರೆ.

SC
ಸುಪ್ರೀಂಕೋರ್ಟ್​
author img

By

Published : Aug 30, 2021, 1:19 PM IST

ನವದೆಹಲಿ: ಕೋವಿಡ್​-19 ಸಾಂಕ್ರಾಮಿಕವು ಅನೇಕ ಜೀವಗಳ ಬಲಿ ಪಡೆದಿದೆ. ಮಹಾಮಾರಿಯಿಂದ ಎಳೆ ವಯಸ್ಸಿನ ಮಕ್ಕಳು ತಂದೆ ಅಥವಾ ತಾಯಿ, ಅಥವಾ ಇಬ್ಬರನ್ನೂ ಕಳೆದುಕೊಂಡ ಮಕ್ಕಳನ್ನು ನೋಡಿದರೆ ಹೃದಯ ಕಲಕುತ್ತದೆ ಎಂದು ಸುಪ್ರೀಂಕೋರ್ಟ್​ ಬೇಸರ ವ್ಯಕ್ತಪಡಿಸಿದೆ.

ಆದರೆ, ಸಾಂಕ್ರಾಮಿಕದ ಸಮಯದಲ್ಲಿ ಅನಾಥರಾಗಿರುವ ಮಕ್ಕಳನ್ನು ಗುರುತಿಸಿ, ಅವರಿಗಾಗಿ ನೂತನ ಯೋಜನೆಗಳನ್ನು ಘೋಷಿಸಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡೆ ತೃಪ್ತಿದಾಯಕವಾಗಿದೆ ಎಂದು ಸರ್ವೋಚ್ಛ ನ್ಯಾಯಾಲಯ ಸಂತಸ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ವಿಳಂಬ ಮಾಡದೇ ಮಕ್ಕಳ ಅಗತ್ಯತೆಗಳನ್ನು ಪೂರೈಸುವ ಕಾರ್ಯ ಮಾಡಲಿದ್ದಾರೆ ಎಂಬ ಭರವಸೆಯಿದೆ ಎಂದು ತಿಳಿಸಿದೆ.

ಪೋಷಕರನ್ನೂ ಕಳೆದುಕೊಂಡ ಲಕ್ಷಕ್ಕೂ ಅಧಿಕ ಮಕ್ಕಳು

'ಮಕ್ಕಳ ರಕ್ಷಣೆ ವಿಚಾರದಲ್ಲಿ ಕೋವಿಡ್ -19 ಸಾಂಕ್ರಾಮಿಕದ ಪರಿಣಾಮ' ಎಂಬ ವಿಷಯದ ಬಗ್ಗೆ ಸು-ಮೋಟೋ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಲ್.ನಾಗೇಶ್ವರ ರಾವ್ ಮತ್ತು ನ್ಯಾ.ಅನಿರುದ್ಧ್ ಬೋಸ್ ಅವರ ನ್ಯಾಯಪೀಠ, ಒಂದು ಲಕ್ಷಕ್ಕೂ ಹೆಚ್ಚು ಮಕ್ಕಳು ತಮ್ಮ ಒಬ್ಬ ಅಥವಾ ಇಬ್ಬರೂ ಪೋಷಕರನ್ನು ಕಳೆದುಕೊಂಡಿದ್ದಾರೆ. ಬಾಲ ನ್ಯಾಯ (ಮಕ್ಕಳ ಕಾಳಜಿ ಮತ್ತು ರಕ್ಷಣೆ) ಕಾಯ್ದೆ-2015 ರ ಅನುಸಾರವಾಗಿ ಆರೈಕೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳನ್ನು ಗುರುತಿಸುವ ಕಾರ್ಯವನ್ನು ಸರ್ಕಾರ ಮತ್ತಷ್ಟು ತ್ವರಿತಗೊಳಿಸಬೇಕು ಎಂದು ಹೇಳಿದೆ.

ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಪ್ರಾಥಮಿಕ ಶಿಕ್ಷಣದ ಸಾಂವಿಧಾನಿಕ ಹಕ್ಕಿದೆ. ಇದನ್ನು ಪೂರೈಸುವ ಕರ್ತವ್ಯ ಮತ್ತು ಬಾಧ್ಯತೆಯನ್ನು ರಾಜ್ಯ ಸರ್ಕಾರಗಳು ಹೊಂದಿರುತ್ತದೆ. ಪೋಷಕರನ್ನು ಕಳೆದುಕೊಂಡು ಅರ್ಧಕ್ಕೆ ನಿಂತು ಹೋಗಿರುವ ಮಕ್ಕಳ ಶಿಕ್ಷಣದ ಮಹತ್ವವನ್ನು ರಾಜ್ಯವು ಅರಿತುಕೊಳ್ಳುವುದರಲ್ಲಿ ನಮಗೆ ಯಾವುದೇ ಸಂದೇಹವಿಲ್ಲ ಎಂದು ಕೋರ್ಟ್​ ಹೇಳಿದೆ.

ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್

ಕೇಂದ್ರ ಸರ್ಕಾರದ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ, ಕೋವಿಡ್ ಪರಿಹಾರವಾಗಿ ಆರಂಭಿಸಿದ 'ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್' ಯೋಜನೆಯಡಿ ಶಿಕ್ಷಣ ಒದಗಿಸಲು ಈಗಾಗಲೇ 2,600 ಮಕ್ಕಳನ್ನು ವಿವಿಧ ರಾಜ್ಯಗಳಿಂದ ನೋಂದಾಯಿಸಲಾಗಿದೆ ಎಂದು ತಿಳಿಸಿದರು. ಹೀಗಾಗಿ ಉಳಿದ ಮಕ್ಕಳ ಅರ್ಜಿಗಳ ಅನುಮೋದನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ನ್ಯಾಯಾಲಯವು ಆಯಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ‘ಬಾಲ ಸ್ವರಾಜ್’ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾದ ಮಾಹಿತಿಯ ಪ್ರಕಾರ, 2020 ರ ಏಪ್ರಿಲ್ 1, ರಿಂದ ಈ ವರ್ಷದ ಆಗಸ್ಟ್‌ವರೆಗೆ 2,38,161 ಮಕ್ಕಳು ಅನಾಥರಾಗಿದ್ದಾರೆ, 92,475 ಮಕ್ಕಳು ತಮ್ಮ ಒಬ್ಬ ಪೋಷಕರನ್ನು ಕಳೆದುಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.