ETV Bharat / bharat

ದೇಶದಲ್ಲಿ 7,633 ಹೊಸ ಕೋವಿಡ್​ ಕೇಸ್​ ಪತ್ತೆ.. 11 ಮಂದಿ ಬಲಿ

ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳು 61,233 ಕ್ಕೆ ಏರಿಕೆಯಾಗಿದೆ.

representative image
ಪ್ರಾತಿನಿಧಿಕ ಚಿತ್ರ
author img

By

Published : Apr 18, 2023, 1:06 PM IST

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 7,633 ಹೊಸ ಕೋವಿಡ್​ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 61,233ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. ಇದೇ ಅವಧಿಯಲ್ಲಿ 11 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಈವರೆಗೆ 5,31,152 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇಂದು ಬೆಳಗ್ಗೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದೆಹಲಿ ಮತ್ತು ಕೇರಳದಲ್ಲಿ ತಲಾ ನಾಲ್ವರು, ಹರಿಯಾಣ, ಕರ್ನಾಟಕ ಮತ್ತು ಪಂಜಾಬ್‌ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕೋವಿಡ್​ ಲಸಿಕೆ ಅಂಕಿ ಅಂಶ: ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4.47 ಕೋಟಿ (4,48,34,859) ದಾಖಲಾಗಿದೆ. ರಾಷ್ಟ್ರೀಯ ಕೋವಿಡ್​ ಚೇತರಿಕೆ ದರ 98.68 ಪ್ರತಿಶತದಷ್ಟು ದಾಖಲಾಗಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,42,42,474ಕ್ಕೆ ಏರಿದೆ. ಸಾವಿನ ಪ್ರಮಾಣ ಶೇ. 1.18 ರಷ್ಟಿದೆ. ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 220.66 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.

ಮಾಸ್ಕ್​ ಧರಿಸುವಂತೆ ಸೂಚನೆ: ದೇಶದಲ್ಲಿ ಕೋವಿಡ್-19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಮಾಸ್ಕ್​ ಧರಿಸುವುದು, ನಿಯಮಿತವಾಗಿ ಕೈ ತೊಳೆಯುವುದು ಮತ್ತು ಕಚೇರಿ ಸಂಸ್ಥೆಗಳ ನೈರ್ಮಲ್ಯೀಕರಣದ ಅಗತ್ಯವನ್ನು ಒತ್ತಿ ಹೇಳಿದರು. ಕ್ಯಾಬಿನೆಟ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೋವಿಡ್-19 ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಮತ್ತು ಮುಖ್ಯ ಕಾರ್ಯದರ್ಶಿ ಹೆಚ್‌.ಕೆ ದ್ವಿವೇದಿ ಅವರಿಗೆ ಈ ಸಂಬಂಧ ಆದೇಶ ಹೊರಡಿಸುವಂತೆ ಸೂಚಿಸಿದರು. ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸ್ಯಾನಿಟೈಸೇಶನ್ ಡ್ರೈವ್‌ ನಡೆಸಲಾಗುವುದು ಮತ್ತು ನೌಕರರು ಮಾಸ್ಕ್ ಧರಿಸಲು ನಿರ್ದೇಶಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಿ ಸೆಲ್​ ಆಧಾರಿತ ಲಸಿಕೆ ಉತ್ತಮ: ಕೋವಿಡ್​ ಲಸಿಕೆ ಪಡೆದಿದ್ದರೂ ಹಲವು ಬಾರಿ ಕೊರೊನಾ ರೂಪಾಂತರ ಸೋಂಕಿಗೆ ತುತ್ತಾಗುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆ ವೈರಸ್ ಎದುರಿಸಲು ರೋಗ ನಿರೋಧಕ ಶಕ್ತಿ ಜೊತೆಗೆ ಪ್ರತಿಕಾಯದ ಅವಶ್ಯಕತೆ ಇದೆ. ಹೀಗಾಗಿ, ಕೋವಿಡ್​ಗೆ ಟಿ ಸೆಲ್​ ಆಧಾರಿತ ಲಸಿಕೆ ಉತ್ತಮ ಪರಿಹಾರ ಎಂದು ಹೊಸ ಅಧ್ಯಯನವೊಂದು ತಿಳಿಸಿದೆ. ಟಿ ಸೆಲ್​ ಆಧಾರಿತ ಕೋವಿಡ್​ ಲಸಿಕೆಗಳು ಪ್ರಸ್ತುತ ಲಸಿಕೆಗಳಿಂದ ಹೆಚ್ಚು ಕಾಲ ಉಳಿಯುವ ಸಾಮರ್ಥ್ಯ ಹೊಂದಿದೆ. ಪ್ರಸ್ತುತ ಕೋವಿಡ್​ ಲಸಿಕೆಗಳನ್ನು ಸಾರ್ಸ್​ ಕೋವ್ ​- 2 ಸ್ಪೈಕ್​ ಪ್ರೊಟೀನ್​ ವಿರುದ್ಧದ ರೋಗ ನಿರೋಧಕ ಶಕ್ತಿಯಾಗಿ ಬಳಕೆ ಮಾಡಲಾಗುತ್ತಿದೆ. ಈ ಸಾರ್ಸ್ - ಕೋವ್​​ 2 ಹೆಚ್ಚು ರೂಪಾಂತರಿಯಾಗಿದ್ದು, ಒಂದು ಅವಧಿ ಮುಗಿದ ಬಳಿಕ ಲಸಿಕೆ ಪರಿಣಾಮ ಕಡಿಮೆಯಾಗಿತ್ತದೆ ಎಂದು ಭಾರತೀಯ ಅಮೆರಿಕನ್​ ಸಂಶೋಧಕರು ತಿಳಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ : 9,111 ಹೊಸ ಸೋಂಕಿತರು ಪತ್ತೆ, 27 ಜನ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.