ETV Bharat / bharat

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 32 ಸಾವಿರ ಹೊಸ ಕೋವಿಡ್ ಪ್ರಕರಣ ಪತ್ತೆ; 417 ಸಾವು - ಭಾರತದ ಕೊರೊನಾ ಸುದ್ದಿ

ಭಾರತದ ಪ್ರಸ್ತುತ ಕೊರೊನಾ ಪ್ರಕರಣಗಳ ಸಂಖ್ಯೆ 3,22,25,513ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಪ್ರಸ್ತುತ 3,81,947 ಸಕ್ರಿಯ ಪ್ರಕರಣಗಳಿವೆ.

India logs close to 33K fresh cases; 417 deaths
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 32,937 ಹೊಸ ಕೋವಿಡ್ ಪ್ರಕರಣಗಳು ವರದಿ
author img

By

Published : Aug 16, 2021, 11:37 AM IST

ಹೈದರಾಬಾದ್: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 32,937 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಮಾರಕ ಸೋಂಕಿನಿಂದ 35,909 ಜನರು ಗುಣಮುಖರಾಗಿದ್ದು, 417 ಮಂದಿ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಪ್ರಸ್ತುತ ಕೊರೊನಾ ಪ್ರಕರಣಗಳ ಸಂಖ್ಯೆ 3,22,25,513 ಮತ್ತು ಒಟ್ಟು ಗುಣಮುಖರಾದವರ ಸಂಖ್ಯೆ 3,14,11,924 ಕ್ಕೆ ಏರಿಕೆಯಾಗಿದೆ. 4,31,642 ಜನ ಇದುವರೆಗೆ ಕೊರೊನಾಗೆ ಬಲಿಯಾಗಿದ್ದಾರೆ.

  • " class="align-text-top noRightClick twitterSection" data="">

ದೇಶದಲ್ಲಿ ಪ್ರಸ್ತುತ 3,81,947 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 49,48,05,652 ಮಾದರಿಗಳನ್ನು ಪರೀಕ್ಷಿಸಲಾಗಿದೆ ಮತ್ತು 11,81,212 ಮಾದರಿಗಳನ್ನು ಭಾನುವಾರ ಪರೀಕ್ಷಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

56 ಕೋಟಿ ಲಸಿಕೆಯ ಡೋಸ್‌ ವಿತರಣೆ

56.81 ಕೋಟಿಗೂ ಹೆಚ್ಚು ಡೋಸ್‌ ಲಸಿಕೆಯನ್ನು ಇದುವರೆಗೆ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸಲಾಗಿದೆ. 2.89 ಕ್ಕಿಂತ ಹೆಚ್ಚು ಕೋಟಿ ಉಳಿಕೆ ಮತ್ತು ಬಳಕೆಯಾಗದ ಲಸಿಕೆ ಪ್ರಮಾಣಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ ಲಭ್ಯವಿದೆ ಎಂದು ಸರ್ಕಾರ ಹೇಳಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.