ನವದೆಹಲಿ: ದೇಶದಲ್ಲಿ ದಿನೇ ದಿನೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 22,775 ಮಂದಿಗೆ ವೈರಸ್ ದೃಢಪಟ್ಟಿದ್ದರೆ, 406 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಕೋವಿಡ್ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 1,431ಕ್ಕೆ ಏರಿಕೆಯಾಗಿದೆ. ಇದು 23 ರಾಜ್ಯಗಳಿಗೆ ಹರಡಿದೆ. ಮಹಾರಾಷ್ಟ್ರವು 454 ಪ್ರಕರಣಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, 351 ಪ್ರಕರಣಗಳೊಂದಿಗೆ ದೆಹಲಿ ನಂತರದ ಸ್ಥಾನದಲ್ಲಿದೆ ಎಂದು ಹೇಳಿದೆ.
ಕಳೆದ 24 ಗಂಟೆಗಳಲ್ಲಿ 8,949 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಪ್ರಸ್ತುತ 1,04,781ಕ್ಕೆ ಏರಿಕೆಯಾಗಿದೆ. ಒಟ್ಟು ಪ್ರಕರಣಗಳ ಪೈಕಿ ಸಕ್ರಿಯ ಪ್ರಕರಣಗಳ ಶೇ.1 ಕ್ಕಿಂತ ಕಡಿಮೆ, ಪ್ರಸ್ತುತ ಶೇಕಡಾ 0.30 ರಷ್ಟಿದೆ ಎಂದು ಸಚಿವಾಲಯ ಹೇಳಿದೆ. ಒಟ್ಟು ಚೇತರಿಕೆಯ ಸಂಖ್ಯೆಯನ್ನು 3,42,75,312 ಕ್ಕೆ ತಲುಪಿದೆ. ಭಾರತದಲ್ಲಿ ಒಟ್ಟು ಚೇತರಿಕೆಯ ಪ್ರಮಾಣವು ಶೇ. 98.32 ರಷ್ಟಿದೆ.
ನಿನ್ನೆ 58,11,487 ಡೋಸ್‌ಗಳನ್ನು ನೀಡಲಾಗಿದ್ದು, ಬೆಳಗ್ಗೆ 7 ಗಂಟೆಯವರೆಗೆ ಒಟ್ಟು 145.16 ಕೋಟಿ (1,45,16,24,150) ಡೋಸ್‌ಗಳನ್ನು ನೀಡಲಾಗಿದೆ. ಕೇಂದ್ರ ಮತ್ತು ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ನಿರಂತರ ಮತ್ತು ಸಹಯೋಗದ ಪ್ರಯತ್ನಗಳು ಕಳೆದ 187 ದಿನಗಳಿಂದ ವರದಿಯಾಗುತ್ತಿರುವ ದೈನಂದಿನ 50,000 ಕ್ಕಿಂತ ಕಡಿಮೆ ಹೊಸ ಪ್ರಕರಣಗಳು ದಾಖಲಾಗುತ್ತಿವೆ ಎಂದು ಸಚಿವಾಲಯ ಹೇಳಿದೆ.
ದೇಶಾದ್ಯಂತ ಕೋವಿಡ್ ಪರೀಕ್ಷಾ ಸಾಮರ್ಥ್ಯ ವಿಸ್ತರಿಸಲಾಗುತ್ತಿದೆ. ನಿನ್ನೆ ಒಂದೇ ದಿನ 11,10,855 ಪರೀಕ್ಷೆಗಳನ್ನು ನಡೆಸಲಾಗಿದೆ. ಇದುವರೆಗೆ 67.89 ಕೋಟಿ (67,89,89,110) ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ.
ಇದನ್ನೂ ಓದಿ: ಮಹಾರಾಷ್ಟ್ರ, ರಾಜಸ್ತಾನದಲ್ಲಿ ಒಮಿಕ್ರಾನ್ ಸೋಂಕಿನಿಂದ ಇಬ್ಬರು ಸಾವನ್ನಪ್ಪಿರುವ ಶಂಕೆ