ಮಧುರೈ, ತಮಿಳುನಾಡು : ಒಮಿಕ್ರಾನ್ ಆತಂಕದ ನಡುವೆ ದೇಶದ ಎಲ್ಲಾ ರಾಜ್ಯಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿವೆ. ಕರ್ನಾಟಕವೂ ಇತ್ತೀಚೆಗೆ ಕಠಿಣ ನಿಯಮಗಳನ್ನು ಕೈಗೊಂಡಿದೆ. ಈಗ ತಮಿಳುನಾಡಿನ ಮಧುರೈ ಜಿಲ್ಲಾಡಳಿತ ಕೂಡ ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಕೋವಿಡ್ ಲಸಿಕೆ ಹಾಕಿಕೊಳ್ಳದ ವ್ಯಕ್ತಿಗಳಿಗೆ ಹೋಟೆಲ್‌ಗಳು, ಶಾಪಿಂಗ್ ಮಾಲ್‌ಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಿಸಲು ಅನುಮತಿ ನೀಡದಿರಲು ಮಧುರೈ ಜಿಲ್ಲಾಡಳಿತ ನಿರ್ಧರಿಸಿದೆ. ಸಾರ್ವಜನಿಕ ಸ್ಥಳಗಳಿಗೆ ತೆರಳಲು ಕನಿಷ್ಠ ಒಂದು ಡೋಸ್ ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ.
ಕನಿಷ್ಠ ಒಂದು ಡೋಸ್ ಪಡೆಯಲು ಒಂದು ವಾರದ ಅವಧಿಯನ್ನು ಜನರಿಗೆ ನೀಡಲಾಗಿದೆ ಎಂದು ಮಧುರೈ ಜಿಲ್ಲಾಧಿಕಾರಿ ಅನೀಶ್ ಶೇಖರ್ ಹೇಳಿದ್ದು, ವ್ಯಾಕ್ಸಿನೇಷನ್ ಪ್ರಮಾಣ ಪತ್ರ ಇದ್ದರೆ ಮಾತ್ರ ಅವರಿಗೆ ಅನುಮತಿ ನೀಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮಧುರೈನಲ್ಲಿ 3 ಲಕ್ಷ ಮಂದಿ ಇನ್ನೂ ಕೋವಿಡ್ ಲಸಿಕೆಯಿಂದ ದೂರ ಉಳಿದಿದ್ದಾರೆ. ಶೇ.71.6ರಷ್ಟು ಮಂದಿ ಮೊದಲ ಡೋಸ್ ಪಡೆದಿದ್ದಾರೆ. ಶೇ.32.8 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಅನೀಶ್ ಶೇಖರ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ದೇಶದಲ್ಲಿ ಹೊಸದಾಗಿ ಎಂಟೂವರೆ ಸಾವಿರ ಸೋಂಕಿತರು ಪತ್ತೆ, 415 ಸಾವು