ಅಮೃತಸರ (ಪಂಜಾಬ್): ಕಳೆದ ಕೆಲ ದಿನಗಳಿಂದ ಕೊರೊನಾ ಪ್ರಕರಣಗಳಲ್ಲಿ ಹೆಚ್ಚಳ ಕಂಡು ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಮೃತಸರದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.
ಮಾರ್ಚ್ 18 ರಂದು ಅಮೃತಸರದಲ್ಲಿ ಒಂದೇ ದಿನ ಸುಮಾರು 230 ಕೊರೊನಾ ಪ್ರಕರಣಗಳು ವರದಿಯಾಗಿದ್ದವು. ಈ ಸಂಬಂಧ ರಾತ್ರಿ 11 ರಿಂದ ಬೆಳಗ್ಗೆ 5 ರ ನಡುವೆ ನಗರದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಿ ಮುಖ್ಯಮಂತ್ರಿ ಆದೇಶ ಹೊರಡಿಸಿದ್ದಾರೆ ಎಂದು ಸಹಾಯಕ ಪೊಲೀಸ್ ಆಯುಕ್ತ ಪರ್ವೇಶ್ ಚೋಪ್ರಾ ತಿಳಿಸಿದ್ದಾರೆ.
ಓದಿ: ಇಂದು ಕೊರೊನಾ ವ್ಯಾಕ್ಸಿನ್ ಪಡೆಯಲಿರುವ ಯುಕೆ ಪ್ರಧಾನಿ ಬೋರಿಸ್ ಜಾನ್ಸನ್
ಕಳೆದ 24 ಗಂಟೆಗಳಲ್ಲಿ ಪಂಜಾಬಿನಲ್ಲಿ ಹೊಸದಾಗಿ 2,387 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 2,05,418 ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.
ಜಲಂಧರ್ ಜಿಲ್ಲಾಧಿಕಾರಿ ಘಾನಶ್ಯಾಮ್ ಥೋರಿ ಮತ್ತು ಲೂಧಿಯಾನ ಜಿಲ್ಲಾಧಿಕಾರಿ ವರೀಂದರ್ ಶರ್ನಾ ಗುರುವಾರ ರಾತ್ರಿಯಿಂದ ಆಯಾ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ವಿಧಿಸಿದ್ದಾರೆ. ಮುಂದಿನ ಆದೇಶದವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ.