ETV Bharat / bharat

ಭೋಪಾಲ್, ಇಂದೋರ್‌ನಲ್ಲಿ ನೈಟ್​ ಕರ್ಫ್ಯೂ ಜಾರಿ: ಶಿವರಾಜ್ ಸಿಂಗ್

ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಕಾರಣ ಭೋಪಾಲ್ ಮತ್ತು ಇಂದೋರ್‌ನಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್​​ ತಿಳಿಸಿದ್ದಾರೆ.

author img

By

Published : Mar 13, 2021, 1:44 PM IST

ಶಿವರಾಜ್ ಸಿಂಗ್ ಚೌಹಾನ್
ಶಿವರಾಜ್ ಸಿಂಗ್ ಚೌಹಾನ್

ಭೋಪಾಲ್: ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಅಥವಾ ಸೋಮವಾರದಿಂದ ಭೋಪಾಲ್ ಮತ್ತು ಇಂದೋರ್‌ನಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗುವುದು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್​​ ಹೇಳಿದ್ದಾರೆ.

ರಾಜ್ಯದ ಕೊರೊನಾ ಪರಿಸ್ಥಿತಿ ಕುರಿತು ನಿನ್ನೆ ಪರಿಶೀಲನೆ ಸಭೆ ನಡೆಸಲಾಗಿದ್ದು, ಈ ವೇಳೆ ನೈಟ್​ ಕರ್ಫ್ಯೂ ಜಾರಿ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ ಮಹಾರಾಷ್ಟ್ರದಲ್ಲಿ ಸಹ ದಿನದಿಂದ ದಿನಕ್ಕೆ ಕೋವಿಡ್​ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ಹಾಗೂ ಪ್ರತಿಯೊಬ್ಬರಿಗೂ ಥರ್ಮಲ್​ಸ್ಕ್ಯಾನಿಂಗ್​ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಪ್ರತಿಯೊಬ್ಬರು ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನೋಡಿಕೊಳ್ಳಬೇಕೆಂದು ಚೌಹಾಣ್​ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಿನ್ನೆ ಮಧ್ಯಪ್ರದೇಶದಲ್ಲಿ 603 ಹೊಸ ಕೋವಿಡ್​ -19 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಇಂದೋರ್‌ನಲ್ಲಿ 219 ಹಾಗೂ ಭೋಪಾಲ್​ನಲ್ಲಿ 138 ಹೊಸ ಪ್ರಕರಣಗಳು ದೃಢಪಟ್ಟಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.