ಶ್ರೀನಗರ: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 34 ಗಂಟೆಗಳ ಕರ್ಫ್ಯೂ ಘೋಷಣೆ ಮಾಡಿ ಜನರ ಸಂಚಾರಕ್ಕೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರಾಡಳಿತ ಪ್ರದೇಶದ ಎಲ್ಲಾ ಹತ್ತು ಜಿಲ್ಲೆಗಳಲ್ಲಿ ನಿನ್ನೆ ಸಂಜೆ 8 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ನಿರ್ಬಂಧ ಹೇರಲಾಗಿದೆ. ಜನರ ಸಂಚಾರವನ್ನು ತಡೆಗಟ್ಟಲು ಭದ್ರತಾ ಪಡೆಗಳು ನಗರದ ಅನೇಕ ಸ್ಥಳಗಳಲ್ಲಿ ಮತ್ತು ಕಣಿವೆಯ ಇತರ ಜಿಲ್ಲಾ ಕೇಂದ್ರಗಳ ರಸ್ತೆಗಳಿಗೆ ಬ್ಯಾರಿಕೇಡ್‌ಗಳನ್ನು ಅಳವಡಿಸಿದೆ. ಇನ್ನು ಅಗತ್ಯ ಮತ್ತು ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಕೊರೊನಾ ಪ್ರಕರಣಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಹೇರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಏ.24ರಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಕೇಂದ್ರಾಡಳಿತ ಪ್ರದೇಶದಲ್ಲಿ ಸಂಪೂರ್ಣ ಕೊರೊನಾ ಕರ್ಫ್ಯೂ ಘೋಷಿಸಿದ್ದರು.