ETV Bharat / bharat

ದೇಶದಲ್ಲಿ 129 ದಿನಗಳ ನಂತರ 1,000ಕ್ಕೂ ಹೆಚ್ಚು ಕೋವಿಡ್‌ ಸೋಂಕಿತರು ಪತ್ತೆ

ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 1,071 ಹೊಸ ಕೋವಿಡ್​​ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ.

India Covid Update
ಪ್ರಾತಿನಿಧಿಕ ಚಿತ್ರ
author img

By

Published : Mar 19, 2023, 12:25 PM IST

ನವದೆಹಲಿ: ದೇಶದಲ್ಲಿ 129 ದಿನಗಳ ಬಳಿಕ ಸಾವಿರಕ್ಕೂ ಅಧಿಕ ಹೊಸ ಕೋವಿಡ್​-19 ಪ್ರಕರಣಗಳು ದಾಖಲಾಗಿವೆ. ಒಂದೇ ದಿನದಲ್ಲಿ 1,071 ಹೊಸ ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 5,915ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜಸ್ಥಾನ, ಮಹಾರಾಷ್ಟ್ರ ಮತ್ತು ಕೇರಳದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಒಟ್ಟು ಸಾವಿನ ಸಂಖ್ಯೆ 5,30,802ಕ್ಕೆ ಏರಿದೆ. ದೇಶದಲ್ಲಿ ಈವರೆಗೆ 4.46 ಕೋಟಿ (4,46,95,420) ಮಂದಿಗೆ ಸೋಂಕು ತಗುಲಿದೆ. ಪಾಸಿಟಿವಿಟಿ ದರ ಶೇ. 0.01 ರಷ್ಟಿದೆ. ರಾಷ್ಟ್ರೀಯ ಕೋವಿಡ್​​-19 ಚೇತರಿಕೆ ದರ 98.8 ಪ್ರತಿಶತದಷ್ಟು ದಾಖಲಾಗಿದೆ.

ಇದನ್ನೂ ಓದಿ: ಕೋವಿಡ್​ ಪ್ರಕರಣಗಳು ಏರಿಕೆ: ಕರ್ನಾಟಕ ಸೇರಿದಂತೆ ಇತರ ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಆರೋಗ್ಯ ಕಾರ್ಯದರ್ಶಿ

ವ್ಯಾಕ್ಸಿನೇಷನ್ ಅಂಕಿಅಂಶ: 4,41,58,703,ಮಂದಿ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ. ಸಾವಿನ ಪ್ರಮಾಣ ಶೇ. 1.19 ರಷ್ಟಿದೆ. ರಾಷ್ಟ್ರವ್ಯಾಪಿ ಕೊರೊನಾ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ ದೇಶದಲ್ಲಿ 220.65 ಕೋಟಿ ಕೋವಿಡ್ ಲಸಿಕೆ ನೀಡಲಾಗಿದೆ.

ರಕೂನ್ ನಾಯಿಗಳಿಂದ ಸೋಂಕು?: ವಿಶ್ವವನ್ನೇ ತಲ್ಲಣಗೊಳಿಸಿದ ಕೋವಿಡ್‌-19 ಸಾಂಕ್ರಾಮಿಕದ ಮೂಲ ಯಾವುದು ಎಂಬುದು ಸಂಶೋಧಕರನ್ನು ಗೊಂದಲಕ್ಕೀಡು ಮಾಡಿದೆ. ಇದೀಗ ಚೀನಾದ ವುಹಾನ್‌ನಲ್ಲಿರುವ ಸಮುದ್ರ ಖಾದ್ಯ ಮಾರುಕಟ್ಟೆಯಲ್ಲಿ ಅಕ್ರಮವಾಗಿ ಮಾರಾಟವಾಗುತ್ತಿರುವ ಸೋಂಕಿತ ರಕೂನ್ ನಾಯಿಗಳಿಂದ ವೈರಸ್ ಹರಡಿರಬಹುದು ಎಂದು ಅಂತಾರಾಷ್ಟ್ರೀಯ ತಜ್ಞರ ತಂಡವೊಂದು ವರದಿ ಮಾಡಿದೆ. "ಸಾಂಕ್ರಾಮಿಕ ರೋಗ ಹೇಗೆ ಪ್ರಾರಂಭವಾಯಿತು ಎಂಬುದಕ್ಕೆ ಈ ದತ್ತಾಂಶಗಳು ನಿರ್ಣಾಯಕ ಉತ್ತರ ನೀಡುವುದಿಲ್ಲ. ಆದರೆ, ಆ ಉತ್ತರಕ್ಕೆ ಹತ್ತಿರವಾಗಲು ಪ್ರತಿಯೊಂದು ದತ್ತಾಂಶವೂ ಮುಖ್ಯವಾಗಿದೆ" ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಶುಕ್ರವಾರ ಹೇಳಿದ್ದಾರೆ.

ಅಂತಾರಾಷ್ಟ್ರೀಯ ವೈರಸ್ ತಜ್ಞರ ತಂಡದ ಪ್ರಕಾರ, "ಮಾರಣಾಂತಿಕ ಕೋವಿಡ್ ಸಾಂಕ್ರಾಮಿಕ ಚೀನಾದ ವುಹಾನ್ ಮಾರುಕಟ್ಟೆಯಲ್ಲಿ ರಕೂನ್ ನಾಯಿಗಳಿಂದ ಹರಡಿರುವ ಸಾಧ್ಯತೆ ಇದೆ. ಸಾಂಕ್ರಾಮಿಕ ರೋಗದ ಸುಮಾರು 3 ವರ್ಷಗಳ ನಂತರವೂ ಕೋವಿಡ್​​ನ ಮೂಲ ಸ್ಪಷ್ಟವಾಗಿಲ್ಲ. ವೈರಸ್ ಬಾವಲಿಗಳಿಂದ ಅಥವಾ ಪ್ರಯೋಗಾಲಯದಿಂದ ಸೋರಿಕೆಯಾಗಿದೆ" ಎಂದು ಜಾಗತಿಕವಾಗಿ ವಿಜ್ಞಾನಿಗಳು ಮತ್ತು ರಾಜಕಾರಣಿಗಳೊಂದಿಗೆ ರಾಜಕೀಯ ಮತ್ತು ವೈಜ್ಞಾನಿಕವಾಗಿ ಚರ್ಚೆ ನಡೆದಿತ್ತು, ಅದು ಈಗಲೂ ಮುಂದುವರೆದಿದೆ. ಈ ಮಧ್ಯೆ ಬಂದ ಈ ಹೊಸ ಅಧ್ಯಯನ ಇನ್ನೂ ಪ್ರಕಟವಾಗಬೇಕಿದೆ. ಇದು ಅರಿಝೋನಾ, ಉತಾಹ್ ಮತ್ತು ಸಿಡ್ನಿ ವಿಶ್ವವಿದ್ಯಾನಿಲಯಗಳು ಮತ್ತು ಸ್ಕ್ರಿಪ್ಸ್ ರಿಸರ್ಚ್ ಇನ್ಸ್ಟಿಟ್ಯೂಟ್ ಸೇರಿದಂತೆ ತಜ್ಞರ ನೇತೃತ್ವದ ತಂಡ 2020ರ ಜನವರಿಯಲ್ಲಿ ಹುವಾನಾನ್ ಸಮುದ್ರ ಖಾದ್ಯ ಸಗಟು ಮಾರುಕಟ್ಟೆಯಿಂದ ಮತ್ತು ಅದರ ಸುತ್ತಮುತ್ತಲಿನ ಸ್ವ್ಯಾಬ್‌ಗಳಿಂದ ಪಡೆದ ಅನುವಂಶಿಕ ಡೇಟಾವನ್ನು ಆಧರಿಸಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ರಕೂನ್ ತಳಿಯ ನಾಯಿಗಳಿಂದ ಕೋವಿಡ್ ಸೋಂಕು ಹರಡಿರುವ ಸಾಧ್ಯತೆ!: ಅಧ್ಯಯನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.