ETV Bharat / bharat

ನಾಳೆಯಿಂದ ಮಕ್ಕಳಿಗೆ ಕೊರೊನಾ ಲಸಿಕೆ: ಕೋ-ವಿನ್​ ವೆಬ್​ಸೈಟ್​ನಲ್ಲಿ ನೋಂದಣಿ ಪ್ರಕ್ರಿಯೆ ಆರಂಭ - ಮಕ್ಕಳಿಗೆ ಮೊದಲ ಹಂತದಲ್ಲಿ ಕೋವ್ಯಾಕ್ಸಿನ್‌ ಲಸಿಕೆ ನೀಡಿಕೆ

ನಾಳೆಯಿಂದ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಮೊದಲ ಹಂತದಲ್ಲಿ ಕೋವ್ಯಾಕ್ಸಿನ್‌ ಲಸಿಕೆ ನೀಡಲು ತೀರ್ಮಾನಿಸಲಾಗಿದ್ದು, ನಿನ್ನೆಯಿಂದಲೇ ಕೋ-ವಿನ್​ ವೆಬ್​ಸೈಟ್​ನಲ್ಲಿ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.

Covid-19 Vaccination for Children
Covid-19 Vaccination for Children
author img

By

Published : Jan 2, 2022, 11:27 AM IST

ನವದೆಹಲಿ: ದೇಶದಲ್ಲಿ ಕೋವಿಡ್ ಮೂರನೇ ಅಲೆಯ ಆತಂಕ ಹೆಚ್ಚುತ್ತಿರುವಾಗಲೇ ಕೇಂದ್ರ ಸರ್ಕಾರ ಮಕ್ಕಳಿಗೆ ಕೊರೊನಾ ಲಸಿಕೆ ಹಾಗೂ ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ನೀಡುವ ಮಹತ್ವದ ಘೋಷಣೆ ಮಾಡಿತ್ತು. ಹೀಗಾಗಿ, ಜನವರಿ 3 ರಿಂದ (ನಾಳೆ) ದೇಶಾದ್ಯಂತ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ನೀಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಈ ಕುರಿತು ಮಾಹಿತಿ ನೀಡಿರುವ ಅಧಿಕಾರಿಗಳು, ಪ್ರಸ್ತುತ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತದೆ. Co-WIN ಪೋರ್ಟಲ್‌ನಲ್ಲಿ ಶನಿವಾರದಿಂದವೇ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮಕ್ಕಳಿಗೆ ಚುಚ್ಚುಮದ್ದು ನೀಡುವ ಕುರಿತು ಸಿದ್ಧತೆಗಳು ನಡೆಯುತ್ತಿವೆ. ಕೇಂದ್ರ ಆರೋಗ್ಯ ಸಚಿವಾಲಯವು ಹೊರಡಿಸಿದ ಮಾರ್ಗಸೂಚಿಗಳ ಅನ್ವಯ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ದೇಶಾದ್ಯಂತ ಕೊರೊನಾ ಆತಂಕ: ಕಳೆದ 24 ತಾಸಲ್ಲಿ 27 ಸಾವಿರ ಹೊಸ ಸೋಂಕಿತರು ಪತ್ತೆ

ಮಕ್ಕಳಿಗೆ ನೀಡುವ ಲಸಿಕೆ ಹೇಗೆ ಲಭ್ಯ?:

- 15-18 ವರ್ಷ ವಯಸ್ಸಿನವರು Co-WIN ನಲ್ಲಿ ಅಸ್ತಿತ್ವದಲ್ಲಿರುವ ಖಾತೆಯ ಮೂಲಕ ಅಥವಾ ಬೇರೆ ಮೊಬೈಲ್ ಸಂಖ್ಯೆಯ ಮೂಲಕ ಹೊಸ ಖಾತೆಯನ್ನು ರಚಿಸಿ ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.

- ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಗುರುತಿನ ಚೀಟಿಗಳನ್ನು ಬಳಸಿಕೊಂಡು ಪೋರ್ಟಲ್‌ನಲ್ಲಿ ಲಸಿಕೆಗಾಗಿ ಹೆಸರು ನೋಂದಾಯಿಸಿಕೊಳ್ಳಬಹುದು.

- 2007 ರಲ್ಲಿ ಹಾಗೂ ಅದಕ್ಕಿಂತ ಮುನ್ನ ಜನಿಸಿದ ಎಲ್ಲಾ ಮಕ್ಕಳಿಗೂ ಲಸಿಕೆ ನೀಡಲಾಗುತ್ತಿದೆ.

- 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಲು ಜನವರಿ 1 ರಿಂದ ನೋಂದಣಿ ಪ್ರಾರಂಭವಾಗಿದೆ.

- ಜನವರಿ 3, 2022 ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆ ಪ್ರಾರಂಭಿಸಲಾಗುವುದು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.