ETV Bharat / bharat

ಡಿಸೆಂಬರ್ ವೇಳೆಗೆ ದೇಶದ ಎಲ್ಲರಿಗೂ ಕೋವಿಡ್​ ಲಸಿಕೆ ಲಭ್ಯ: ಜೆ.ಪಿ ನಡ್ಡಾ - ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ

ಇದುವರೆಗೆ 18 ಕೋಟಿ ಭಾರತೀಯರಿಗೆ ವ್ಯಾಕ್ಸಿನ್​ ನೀಡಲಾಗಿದ್ದು, ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲರಿಗೂ ಲಸಿಕೆ ಲಭ್ಯವಾಗಲಿದೆ ಎಂದು ಜೆ.ಪಿ ನಡ್ಡಾ ಭರವಸೆ ನೀಡಿದ್ದಾರೆ.

Nadda
ನಡ್ಡಾ
author img

By

Published : May 20, 2021, 8:37 AM IST

ಜೈಪುರ (ರಾಜಸ್ಥಾನ): ಈ ವರ್ಷದ ಡಿಸೆಂಬರ್ ವೇಳೆಗೆ ದೇಶದ ಎಲ್ಲ ಜನರಿಗೂ ಕೊರೊನಾ ಲಸಿಕೆ ಲಭ್ಯವಾಗಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ.

ರಾಜಸ್ಥಾನದ ಕೋವಿಡ್​ ಪರಿಸ್ಥಿತಿ ಪರಿಶೀಲಿಸಲು ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಹಾಗೂ ಪಕ್ಷದ ಸಂಸದರೊಂದಿಗೆ ವರ್ಚುವಲ್​ ಸಭೆ ನಡೆಸಿ ಬಳಿಕ ಮಾತನಾಡಿದ ನಡ್ಡಾ, "ಭಾರತವು ಕೇವಲ 9 ತಿಂಗಳಲ್ಲಿ ಮೊದಲ ಬಾರಿಗೆ ಎರಡು ದೇಶೀಯ ಲಸಿಕೆಗಳನ್ನು ಅಭಿವೃದ್ಧಿಪಡಿಸಿದೆ. ಇದುವರೆಗೆ 18 ಕೋಟಿ ಭಾರತೀಯರಿಗೆ ವ್ಯಾಕ್ಸಿನ್​ ನೀಡಲಾಗಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲರಿಗೂ ಲಸಿಕೆ ಲಭ್ಯವಾಗಲಿದೆ ಮತ್ತು ಅದರ ಕ್ಯಾಲೆಂಡರ್ ಅನ್ನು ನಿಗದಿಪಡಿಸಲಾಗಿದೆ" ಎಂದು ಹೇಳಿದರು.

ಇದನ್ನೂ ಓದಿ: ಮನೆಯಲ್ಲೇ ಕುಳಿತು ರ್‍ಯಾಪಿಡ್ ಕೋವಿಡ್ ಟೆಸ್ಟ್ ಮಾಡಿಸಲು ಸಿಕ್ತು ಕಿಟ್: ಯಾರ‍್ಯಾರು ಪರೀಕ್ಷೆಗೆ ಒಳಪಡಬಹುದು?

ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಎಲ್ಲಾ ರಾಜ್ಯಗಳಿಗೆ ಆಮ್ಲಜನಕ ಮತ್ತು ಔಷಧಿಗಳ ಲಭ್ಯತೆ ಮತ್ತು ಪೂರೈಕೆಯನ್ನು ಖಚಿತಪಡಿಸಿದೆ. ಆದರೆ ಕಾಂಗ್ರೆಸ್​ ಪಕ್ಷವು ದೇಶದಲ್ಲಿ ಅರಾಜಕತೆ ಮತ್ತು ಗೊಂದಲ ಹರಡಲು ಪ್ರಯತ್ನಿಸುತ್ತಿದೆ. ಜನರ ಆತ್ಮ ಸ್ಥೈರ್ಯವನ್ನು ನಾಶಮಾಡುವ ಕೆಲಸ ಮಾಡುತ್ತಿದೆ ಎಂದು ನಡ್ಡಾ ಆರೋಪಿಸಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.