ETV Bharat / bharat

ದೇಶಾದ್ಯಂತ ಕೋವಿಡ್‌ ಪ್ರಕರಣದಲ್ಲಿ ಹೆಚ್ಚಳ: ಮುಂಬೈನ ಆಸ್ಪತ್ರೆಗಳಲ್ಲಿ ಮಾಸ್ಕ್ ಕಡ್ಡಾಯ - ಕೋವಿಡ್ ಪ್ರಕರಣ

ದೇಶದಲ್ಲಿ 5,676 ಕೋವಿಡ್ ಕೇಸ್​ ಪತ್ತೆ.. 21 ಮಂದಿ ಸಾವು.. 37 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣಗಳು.

representative image
ಪ್ರಾತಿನಿಧಿಕ ಚಿತ್ರ
author img

By

Published : Apr 11, 2023, 12:17 PM IST

ನವದೆಹಲಿ: ದೇಶಾದ್ಯಂತ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 5,676 ಹೊಸ ಕೋವಿಡ್​ - 19 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 37,093ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ರಾಷ್ಟ್ರೀಯ ಕೋವಿಡ್​​ ಚೇತರಿಕೆ ದರ ಶೇ 98.73ರಷ್ಟಿದೆ. ಈವರೆಗೆ 4,42,00,079 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದೇ ಅವಧಿಯಲ್ಲಿ 21 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ದೆಹಲಿ, ಪಂಜಾಬ್ ಮತ್ತು ರಾಜಸ್ಥಾನದಲ್ಲಿ ತಲಾ ಮೂವರು, ಕರ್ನಾಟಕದಲ್ಲಿ ಎರಡು ಮತ್ತು ಗುಜರಾತ್, ಹರಿಯಾಣ, ಮಹಾರಾಷ್ಟ್ರ ಮತ್ತು ತಮಿಳುನಾಡಿನಲ್ಲಿ ತಲಾ ಒಂದು ಹಾಗೂ ಕೇರಳದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ರಕೂನ್ ತಳಿಯ ನಾಯಿಗಳಿಂದ ಕೋವಿಡ್ ಸೋಂಕು ಹರಡಿರುವ ಸಾಧ್ಯತೆ!: ಅಧ್ಯಯನ

ದೇಶದಲ್ಲಿ ಈವೆರೆಗೆ 5,31,000 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ. ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4.47 ಕೋಟಿ (4,47,68,172) ದಾಖಲಾಗಿದೆ. ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದಡಿ ದೇಶದಲ್ಲಿ ಇದುವರೆಗೆ 220.66 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.

ದೇಶಾದ್ಯಂತ ಕೋವಿಡ್‌ ಕೇಸ್ ಹೆಚ್ಚಳ: ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಯಾವುದೇ ಪರಿಸ್ಥಿತಿ ಎದುರಿಸಲು ಆಸ್ಪತ್ರೆಗಳ ಸನ್ನದ್ಧತೆ ಮತ್ತು ಮೂಲ ಸೌಕರ್ಯ ಪರೀಕ್ಷಿಸಲು ಸೋಮವಾರ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು. 2 ದಿನಗಳ ಅಣಕು ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದ್ದು, ಇಂದು ಸಹ ಕಾರ್ಯಾಚರಣೆ ನಡೆಯಲಿದೆ.

ಏ.7ರಂದು ಸಭೆ ನಡೆಸಿದ್ದ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ದೇಶದಲ್ಲಿ ಕೋವಿಡ್‌ ಪರಿಸ್ಥಿತಿಯ ಅವಲೋಕನಕ್ಕಾಗಿ ಎಲ್ಲಾ ಆರೋಗ್ಯ ಸಚಿವರು ಆಸ್ಪತ್ರೆಗಳಿಗೆ ಭೇಟಿ ನೀಡಿ ಅಣಕು ಕಾರ್ಯಾಚರಣೆ ಪರಿಶೀಲಿಸಬೇಕು ಎಂದು ಮನವಿ ಮಾಡಿದ್ದರು. ಅಲ್ಲದೇ ಜಿಲ್ಲಾಡಳಿತಗಳ ಜತೆಗೆ ಸಭೆ ನಡೆಸಿ ಸನ್ನದ್ಧತೆಯ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಕೋರಿದ್ದರು. ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಸೂಕ್ತ ನಿರ್ವಹಣೆ ಮಾಡಲು ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪಂಚ ಸೂತ್ರ ಅನುಸರಿಸುವಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ, ಐಸಿಯು, ವೆಂಟಿಲೇಟರ್‌, ಆಕ್ಸಿಜನ್‌, ಔಷಧ ಮತ್ತು ಸಿಬ್ಬಂದಿ ಲಭ್ಯತೆ ಬಗ್ಗೆ ತಿಳಿದುಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ದೇಶದಲ್ಲಿ 35,199ಕ್ಕೆ ಏರಿಕೆಯಾದ ಕೋವಿಡ್​ ಸಕ್ರಿಯ ಪ್ರಕರಣ: ಸೋಂಕು ನಿರ್ವಹಣೆಗೆ ಇಂದು, ನಾಳೆ ಮಾಕ್‌ ಡ್ರಿಲ್‌

ಮಾಸ್ಕ್ ಕಡ್ಡಾಯ: ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ಮುಂಬೈನ ಎಲ್ಲಾ ಆಸ್ಪತ್ರೆಗಳಲ್ಲಿ ನೌಕರರು, ರೋಗಿಗಳು ಮತ್ತು ಸಂದರ್ಶಕರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಸೋಮವಾರ ಪ್ರಕಟಿಸಿದೆ. ದಕ್ಷಿಣ ಮುಂಬೈನ ನಾಗರಿಕ ಪ್ರಧಾನ ಕಚೇರಿಯಲ್ಲಿ ಮುನ್ಸಿಪಲ್ ಕಮಿಷನರ್ ಇಕ್ಬಾಲ್ ಸಿಂಗ್ ಚಾಹಲ್ ಅವರು ನಡೆಸಿದ ಕೋವಿಡ್​​ ವೈರಸ್ ಕುರಿತು ಪರಿಶೀಲನಾ ಸಭೆಯ ನಂತರ ಸುರಕ್ಷತಾ ಕ್ರಮವಾಗಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಎಂಸಿ ಹೇಳಿಕೆ ನೀಡಿದೆ.

ಇದನ್ನೂ ಓದಿ: ಕೋವಿಡ್ ಮನುಷ್ಯರಿಂದಲೇ ಹುಟ್ಟಿಕೊಂಡಿರಬಹುದು ಎಂದ ಚೀನಾದ ವಿಜ್ಞಾನಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.