ನವದೆಹಲಿ: ಭಾರತದಲ್ಲಿ ಮತ್ತೆ ಹೊಸ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 18,840 ಹೊಸ ಕೇಸ್ಗಳು ದೃಢಪಟ್ಟಿವೆ. 43 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಶುಕ್ರವಾರಕ್ಕೆ ಹೋಲಿಸಿದರೆ ಶನಿವಾರ 25 ಹೊಸ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದೊಂದು ದಿನದಲ್ಲಿ 16,104 ಜನರು ಕೋವಿಡ್ನಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 4,29,53,980 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ ದೇಶದಲ್ಲಿ 1,25,028 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸಾವಿನ ಸಂಖ್ಯೆ 5,25,386ಕ್ಕೆ ಏರಿಕೆಯಾಗಿದೆ. ಈವರೆಗೆ ದೃಢಪಟ್ಟ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 4,36,04,394 ತಲುಪಿದೆ.
-
#AmritMahotsav#Unite2FightCorona#LargestVaccineDrive
— Ministry of Health (@MoHFW_INDIA) July 9, 2022 " class="align-text-top noRightClick twitterSection" data="
𝗖𝗢𝗩𝗜𝗗 𝗙𝗟𝗔𝗦𝗛https://t.co/2yc8qHQsem pic.twitter.com/sYhl5mEWuR
">#AmritMahotsav#Unite2FightCorona#LargestVaccineDrive
— Ministry of Health (@MoHFW_INDIA) July 9, 2022
𝗖𝗢𝗩𝗜𝗗 𝗙𝗟𝗔𝗦𝗛https://t.co/2yc8qHQsem pic.twitter.com/sYhl5mEWuR#AmritMahotsav#Unite2FightCorona#LargestVaccineDrive
— Ministry of Health (@MoHFW_INDIA) July 9, 2022
𝗖𝗢𝗩𝗜𝗗 𝗙𝗟𝗔𝗦𝗛https://t.co/2yc8qHQsem pic.twitter.com/sYhl5mEWuR
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಈವರೆಗೆ 86.61 ಕೋಟಿ ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಕಳೆದ 24 ಗಂಟೆಗಳಲ್ಲಿ 4,54,778 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಪ್ರಸ್ತುತ ದೇಶದಲ್ಲಿ ಚೇತರಿಕೆಯ ಪ್ರಮಾಣವು ಪ್ರಸ್ತುತ 98.51% ರಷ್ಟಿದ್ದು, ದೈನಂದಿನ ಪಾಸಿಟಿವಿಟಿ ದರವು 4.14% ರಷ್ಟಿದೆ. ಸಕ್ರಿಯ ಪ್ರಕರಣಗಳ ದರ 0.29% ಇದ್ದು, ವಾರದ ಪಾಸಿಟಿವಿಟಿ ದರ 4.09 % ಇದೆ. ರಾಷ್ಟ್ರವ್ಯಾಪಿ ಕೋವಿಡ್ ಲಸಿಕಾ ಅಭಿಯಾನದಡಿ ಈವರೆಗೆ 1,98,65,36,288 ಡೋಸ್ ವ್ಯಾಕ್ಸಿನ್ ನೀಡಲಾಗಿದ್ದು, ನಿನ್ನೆ 12,26,795 ಡೋಸ್ ಲಸಿಕೆ ನೀಡಲಾಗಿದೆ.
ಇದನ್ನೂ ಓದಿ: ದೇಶಾದ್ಯಂತ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಹೇಗಿದೆ? ಇಲ್ಲಿದೆ ಮಾಹಿತಿ