ಬದೌನ್ (ಉತ್ತರ ಪ್ರದೇಶ): ದೇಶದಲ್ಲಿ ಕೊರೊನಾ ಪರಿಸ್ಥಿತಿ ತೀರಾ ಹದಗೆಟ್ಟಿದ್ದರೆ, ಇತ್ತ ಉತ್ತರ ಪ್ರದೇಶದ ಬದೌನ್ನಲ್ಲಿ ಸಾವಿರಾರು ಜನರು ಮುಸ್ಲಿಂ ಧರ್ಮಗುರುವಿನ ಅಂತಿಮ ಯಾತ್ರೆ, ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು ಕಂಡುಬಂತು.
ಉತ್ತರ ಪ್ರದೇಶದಲ್ಲಿ ಲಾಕ್ಡೌನ್ ಮಾದರಿಯ ಕಠಿಣ ಕರ್ಫ್ಯೂ ಜಾರಿಯಲ್ಲಿದೆ. ಅಲ್ಲದೇ ರಾಜ್ಯದಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಜನರ ಸಂಖ್ಯೆಯನ್ನು 20ಕ್ಕೆ ಸೀಮಿತಗೊಳಿಸಲಾಗಿದೆ. ಆದ್ರೆ, ಈ ನಿಯಮಗಳನ್ನು ನಿರ್ಲಕ್ಷಿಸಿ ಭಾನುವಾರ ನಡೆದ ಅಬ್ದುಲ್ ಹಮೀದ್ ಮೊಹಮ್ಮದ್ ಸಲೀಮುಲ್ ಖಾದ್ರಿ ಅವರ ಅಂತಿಮ ಯಾತ್ರೆಗೆ ಜನಸಮೂಹವೇ ಸೇರಿತ್ತು.
ಇದನ್ನೂ ಓದಿ: ಬೆಳಗಾವಿ: ಲಾಕ್ಡೌನ್ ನಿಯಮ ಬ್ರೇಕ್... 679 ಬೈಕ್ ಸೀಜ್, ಒಟ್ಟು ₹ 16 ಲಕ್ಷ ದಂಡ ವಸೂಲಿ
ಕೋವಿಡ್ ನಿಯಮ ಉಲ್ಲಂಘಿಸಿದ ಜನರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬದೌನ್ ಪೊಲೀಸ್ ವರಿಷ್ಠಾಧಿಕಾರಿ ಸಂಕಲ್ಪ್ ಶರ್ಮಾ ತಿಳಿಸಿದ್ದಾರೆ.