ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟ ದೇಶದಲ್ಲಿ ಮುಂದುವರೆದಿದ್ದು, ಇದೀಗ ಕೇಂದ್ರ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ.
ಲಭ್ಯವಾಗಿರುವ ಮಾಹಿತಿ ಪ್ರಕಾರ ಏಪ್ರಿಲ್ 11ರಿಂದ ಸರ್ಕಾರಿ ಹಾಗೂ ಖಾಸಗಿ ಇಲಾಖೆ ಸಿಬ್ಬಂದಿಗೆ ಅವರು ಕೆಲಸ ಮಾಡುವ ಸ್ಥಳಗಳಲ್ಲೇ ಕೋವಿಡ್ ವ್ಯಾಕ್ಸಿನ್ ನೀಡುವ ಅಭಿಯಾನಕ್ಕೆ ಚಾಲನೆ ನೀಡುವ ಸಾಧ್ಯತೆ ಇದೆ. 45 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ವ್ಯಾಕ್ಸಿನ್ ನೀಡುವ ಇರಾದೆಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಈಗಾಗಲೇ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಇದರ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಒಡಹುಟ್ಟಿದ ತಂಗಿಯನ್ನೂ ಬಿಡದ ಕಾಮುಕ ಸಹೋದರರು.. ಬಾಲ್ಯದಿಂದಲೂ ಲೈಂಗಿಕ ಕಿರುಕುಳ!
ದೇಶದಲ್ಲಿ ಕೋವಿಡ್ ವ್ಯಾಕ್ಸಿನ್ ಡೋಸ್ ನೀಡುವಿಕೆ ಹೆಚ್ಚಿಗೆ ಮಾಡುವ ಉದ್ದೇಶ ಹೊಂದಲಾಗಿದ್ದು, ಅದೇ ಕಾರಣಕ್ಕಾಗಿ ಕೆಲಸ ಮಾಡುವ ಸ್ಥಳಗಳಲ್ಲೇ ಲಸಿಕೆ ನೀಡುವುದರಿಂದ ಹೆಚ್ಚಿನ ಲಾಭ ಆಗುತ್ತದೆ ಎನ್ನಲಾಗಿದೆ.