ETV Bharat / bharat

ಕರ್ನಾಟಕ, ಉತ್ತರ ಪ್ರದೇಶ ಸೇರಿದಂತೆ ಮಕ್ಕಳಿಗೆ ಮೊದಲ ಹಂತದ ಲಸಿಕಾ ಅಭಿಯಾನ ಪ್ರಾರಂಭ

author img

By

Published : Jan 3, 2022, 10:46 AM IST

ಜನವರಿ 3 ರಿಂದ ದೇಶಾದ್ಯಂತ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದರು. ಆದರಂತೆ ಎಲ್ಲ ರಾಜ್ಯಗಳಲ್ಲಿ ಇಂದು ಬೆಳಗ್ಗೆಯಿಂದಲೇ ಲಸಿಕೆ ನೀಡಿಕೆ ಕಾರ್ಯ ಆರಂಭವಾಗಿದೆ.

ಲಸಿಕಾ ಅಭಿಯಾನ ಪ್ರಾರಂಭ
ಲಸಿಕಾ ಅಭಿಯಾನ ಪ್ರಾರಂಭ

ನವದೆಹಲಿ: ಗುಜರಾತ್‌, ಉತ್ತರ ಪ್ರದೇಶ, ಕರ್ನಾಟಕ ಸೇರಿದಂತೆ ದೇಶಾದ್ಯಂತ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಿದೆ. ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಇಂದು ಕೊಬಾನಿ ಜಿಡಿಎಂ ಕೊಬಾವಾಲಾ ಪ್ರೌಢಶಾಲೆಯಲ್ಲಿ ರಾಜ್ಯಾದ್ಯಂತ ಕೊರೊನಾ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.

ಗಾಂಧಿನಗರ ಪುರಸಭೆ ವ್ಯಾಪ್ತಿಯ 93 ಶಾಲೆಗಳ ಸುಮಾರು 20,000 ಮಕ್ಕಳಿಗೆ ಲಸಿಕೆ ನೀಡಲು 50 ಆರೋಗ್ಯ ಕಾರ್ಯಕರ್ತರ ತಂಡಗಳು ಕಾರ್ಯನಿರ್ವಹಿಸಲಿವೆ.

ಲಸಿಕಾ ಅಭಿಯಾನ ಪ್ರಾರಂಭ
ಲಸಿಕಾ ಅಭಿಯಾನ ಪ್ರಾರಂಭ

ಲಸಿಕಾ ಅಭಿಯಾನದ ಮೊದಲ ದಿನವಾದ ಇಂದು ಗಾಂಧಿನಗರ ಪುರಸಭೆ ವ್ಯಾಪ್ತಿಯ 13 ಶಾಲೆಗಳ ಐದು ಸಾವಿರ ಮಕ್ಕಳಿಗೆ ಕೋವಿಡ್ ವ್ಯಾಕ್ಸಿನ್​ ಡೋಸ್ ನೀಡಲು ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಯೋಜನೆ ರೂಪಿಸಿದೆ.

ಗುಜರಾತ್ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ 35 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ರೋಗನಿರೋಧಕ ಶಕ್ತಿ ಹೆಚ್ಚಿಸುವ ಜೊತೆಗೆ ಕೋವ್ಯಾಕ್ಸಿನ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಅಹಮದಾಬಾದ್‌ನಲ್ಲಿ ಸಹ ವ್ಯಾಕ್ಸಿನೇಷನ್ ಪ್ರಾರಂಭವಾಗಿದೆ.

ಓದಿ: ಇಂದಿನಿಂದ 15-18 ವರ್ಷದೊಳಗಿನ ಮಕ್ಕಳಿಗೆ ಕೊರೊನಾ ಲಸಿಕೆ ಪ್ರಾರಂಭ

ಉತ್ತರ ಪ್ರದೇಶದಲ್ಲಿ ಲಸಿಕೆ ನೀಡಿಕೆ ಪ್ರಾರಂಭ:

ಉತ್ತರ ಪ್ರದೇಶದಲ್ಲಿ ಸಹ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಪ್ರಾರಂಭಿಸಲಾಗಿದೆ. ರಾಜ್ಯದಲ್ಲಿ 15-18 ವರ್ಷದೊಳಗಿನ 1.4 ಕೋಟಿ ಮಕ್ಕಳಿದ್ದಾರೆ. ಲಸಿಕೆ ಹಾಕಲು ರಾಜ್ಯಾದ್ಯಂತ 2,150 ಬೂತ್‌ಗಳನ್ನು ಸ್ಥಾಪಿಸಲಾಗಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಇನ್ನು ಕರ್ನಾಟಕದಲ್ಲಿ ಸಹ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಮೊದಲ ಹಂತದಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾಗಿದೆ. ಪ್ರಸ್ತುತ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದ್ದು, Co-WIN ಪೋರ್ಟಲ್‌ನಲ್ಲಿ ಶನಿವಾರದಿಂದವೇ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.