ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,628 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 4,31,44,820 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಇದು ನಿನ್ನೆ ದಾಖಲಾದ ಪ್ರಕರಣಗಳಿಗಿಂತ 23.7% ಹೆಚ್ಚಾಗಿದೆ.
ದೇಶಾದ್ಯಂತ ಕಳೆದೊಂದು ದಿನದಲ್ಲಿ 18 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,525 ಮಂದಿ ಸಾವನ್ನಪ್ಪಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ.0.58 ರಷ್ಟಿದ್ದು, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 0.51ರಷ್ಟಿದೆ. ಚೇತರಿಕೆಯ ಪ್ರಮಾಣ ಶೇ.98.75 ಇದೆ. ಸದ್ಯಕ್ಕೆ ದೇಶದಲ್ಲಿ 15,414, ಸಕ್ರಿಯ ಪ್ರಕರಣಗಳಿವೆ. ಕಳೆದೊಂದು ದಿನದಲ್ಲಿ 2,167 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,26,04,881 ಮಂದಿ ಗುಣಮುಖರಾಗಿದ್ದಾರೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಕಳೆದ 24 ಗಂಟೆಗಳಲ್ಲಿ 4,52,580 ಮಾದರಿಗಳನ್ನು ಪರೀಕ್ಷಿಸಲಾಗಿದೆ. ರಾಷ್ಟ್ರವ್ಯಾಪಿ ಕೋವಿಡ್ 19 ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 1,92,82,03,555 ಡೋಸ್ ಲಸಿಕೆ ನೀಡಲಾಗಿದ್ದು, ನಿನ್ನೆ 13,13,687 ಡೋಸ್ ನೀಡಲಾಗಿದೆ. ಭಾರತದಲ್ಲಿ, ಕೇರಳ, ಮಹಾರಾಷ್ಟ್ರ, ದೆಹಲಿ, ಹರಿಯಾಣ ಮತ್ತು ಕರ್ನಾಟಕದಲ್ಲಿ ಗರಿಷ್ಠ ಕೊರೊನಾ ಪ್ರಕರಣಗಳು ವರದಿಯಾಗಿವೆ.
ಇದನ್ನೂ ಓದಿ: ಮಹಾರಾಷ್ಟ್ರ ಸಾರಿಗೆ ಸಚಿವ ಅನಿಲ್ ಪರಬ್ಗೆ ಸೇರಿದ 7 ಸ್ಥಳಗಳ ಮೇಲೆ ಇಡಿ ದಾಳಿ