ETV Bharat / bharat

ಕೇರಳದಲ್ಲಿ ಕೋವಿಡ್ ಉಲ್ಬಣ, ಹೈ ಅಲರ್ಟ್​.. ಕರ್ನಾಟಕಕ್ಕೆ ಎಚ್ಚರಿಕೆ ಗಂಟೆ - etv bharath kannada news

ಕೇರಳ ರಾಜ್ಯದಲ್ಲಿ ಒಟ್ಟು 1026 ಕೊರೊನಾ ಸಕ್ರಿಯ ಪ್ರಕರಣಗಳು ದಾಖಲಾಗಿದೆ. ಇದೀಗ 111 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಕರ್ನಾಟಕಕ್ಕೂ ಆತಂಕಕ್ಕೆ ಕಾರಣವಾಗಿದೆ.

ಕೊರೊನಾ
ಕೊರೊನಾ
author img

By

Published : Mar 22, 2023, 5:19 PM IST

ತಿರುವನಂತಪುರಂ (ಕೇರಳ) : ಕರ್ನಾಟಕದ ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್​ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಪ್ರತಿದಿನ ಕೋವಿಡ್ ಪ್ರಕರಣಗಳು 200 ರ ಸಮೀಪ ತಲುಪಿದೆ. ನಿನ್ನೆ 172 ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆ ಕೇರಳ ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ರಾಜ್ಯಕ್ಕೆ ಹೈಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಕರ್ನಾಟಕಕ್ಕೂ ಇದರಿಂದ ಭೀತಿ ಎದುರಾಗಿದೆ.

ಕೇರಳದಲ್ಲಿ ಒಟ್ಟು 1,026 ಸಕ್ರಿಯ ಪ್ರಕರಣಗಳಿವೆ ಮತ್ತು 111 ಜನರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಎಚ್ಚರಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಕೋವಿಡ್​ ಹರಡುವಿಕೆ ತಡೆಯಲು ಎಲ್ಲಾ ಜಿಲ್ಲೆಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ಯಾವುದೇ ಕೋವಿಡ್ ಕ್ಲಸ್ಟರ್‌ಗಳು ರಚನೆಯಾಗಿಲ್ಲ. ಕೋವಿಡ್ -19 ರೋಗಿಗಳ ಸಂಖ್ಯೆಯಲ್ಲಿನ ಹೆಚ್ಚಳದ ದೃಷ್ಟಿಯಿಂದ, ಐಸಿಯು ಮತ್ತು ವೆಂಟಿಲೇಟರ್ ಆಸ್ಪತ್ರೆಯ ವ್ಯವಸ್ಥೆಗಳನ್ನು ಮತ್ತಷ್ಟು ಹೆಚ್ಚಿಸಲು ಸೂಚನೆ ನೀಡಲಾಗಿದೆ. ಕೋವಿಡ್‌ನ ಹೊಸ ರೂಪಾಂತರವು ಹೆಚ್ಚು ಸಾಂಕ್ರಾಮಿಕವಾಗಿರುವುದರಿಂದ ಸ್ವಯಂ ರಕ್ಷಣೆ ಅತ್ಯಂತ ಮುಖ್ಯವಾಗಿದೆ ಎಂದಿದ್ದಾರೆ.

ಕೋವಿಡ್ ತಡೆಗಟ್ಟಲು ಮಾಸ್ಕ್ ಧರಿಸಬೇಕು. ಇತರೆ ಕಾಯಿಲೆ ಇರುವವರು, ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ವಿಶೇಷ ಕಾಳಜಿ ವಹಿಸಬೇಕು. ಸಾರ್ವಜನಿಕ ಸ್ಥಳಗಳಿಗೆ ಹೋಗುವಾಗ ಸರಿಯಾಗಿ ಮಾಸ್ಕ್ ಧರಿಸಬೇಕು. ಆಸ್ಪತ್ರೆಗಳಿಗೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಕೇರಳ ಸೇರಿದಂತೆ ಆರು ರಾಜ್ಯಗಳಿಗೆ ಕೋವಿಡ್ ಜಾಗರೂಕ ನಿರ್ದೇಶನವನ್ನು ನೀಡಿದೆ. ಇದರ ಆಧಾರದ ಮೇಲೆ ಪರಿಶೀಲನಾ ಸಭೆ ನಡೆಸಲಾಯಿತು.

ರಾಜ್ಯದಲ್ಲಿ ಎಚ್ಚರಿಕೆಯ ಗಂಟೆ : ಕೋವಿಡ್ -19 ಪ್ರಕರಣಗಳ ಹೆಚ್ಚಳವು ಕರ್ನಾಟಕದಲ್ಲಿ ಎಚ್ಚರಿಕೆಯ ಗಂಟೆಯನ್ನು ಬಾರಿಸಿದೆ ಮತ್ತು ಆರೋಗ್ಯ ವ್ಯವಸ್ಥೆಯನ್ನು ಹೈ ಅಲರ್ಟ್‌ನಲ್ಲಿ ಇರಿಸಿದೆ.

ರಾಜ್ಯದ ಆಸ್ಪತ್ರೆಗಳಲ್ಲಿ ಲಸಿಕೆಗಳ ಕೊರತೆ: ಸೋಮವಾರದಂದು ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 616 ಆಗಿದ್ದು, ಅದರಲ್ಲಿ 394 ಬೆಂಗಳೂರಿನಿಂದ ಬಂದಿವೆ. ಮುನ್ನೆಚ್ಚರಿಕೆ ಡೋಸ್ ತೆಗೆದುಕೊಳ್ಳಲು ಮತ್ತು ಕೋವಿಡ್ -19 ಹರಡುವಿಕೆಯನ್ನು ತಡೆಗಟ್ಟಲು ಲಸಿಕೆ ಪೂರೈಕೆಯನ್ನು ಹೆಚ್ಚಿಸುವಂತೆ ಆರೋಗ್ಯ ಇಲಾಖೆ ಕೇಂದ್ರಕ್ಕೆ ಪತ್ರ ಬರೆದಿದೆ.

ಮಾರ್ಚ್ 19 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿಕೆ ಅನಿಲ್ ಕುಮಾರ್ ಅವರು, ಕೋವಿಡ್ -19 ನಿಯಂತ್ರಣ ಕ್ರಮಗಳನ್ನು ಜಾರಿಗೆ ತರಬೇಕಾಗಿದೆ ಎಂದು ಸುತ್ತೋಲೆ ಹೊರಡಿಸಿದ್ದಾರೆ.

ಇತರೆ ಜಿಲ್ಲೆಗಳಲ್ಲಿಯೂ ಕೋವಿಡ್​ ಹೆಚ್ಚಳ: ಮಾರ್ಚ್ ಮೊದಲ ವಾರದಲ್ಲಿ 493 ಕೊರೊನಾ ಪ್ರಕರಣಗಳು ವರದಿಯಾಗಿವೆ. ನಂತರದ ವಾರದಲ್ಲಿ ಪ್ರಕರಣಗಳು 604 ಕ್ಕೆ ಏರಿದೆ. ಇದು ರಾಜ್ಯದ ಕೋವಿಡ್​ ಸಕಾರಾತ್ಮಕ ದರವನ್ನು 0.6% ರಿಂದ 2.7% ಕ್ಕೆ ಏರಿಸಿದೆ. ಶಿವಮೊಗ್ಗ, ಮೈಸೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚು ಪಾಸಿಟಿವ್ ಪ್ರಕರಣಗಳು ಕಂಡುಬಂದಿವೆ.

ಇದನ್ನೂ ಓದಿ : ಕೋವಿಡ್‌: 1,134 ಸೋಂಕಿತರು ಪತ್ತೆ; 7 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.