ETV Bharat / bharat

Omicron scare: ನಾಳೆಯಿಂದ ಶಾಲಾ-ಕಾಲೇಜು, ಥಿಯೇಟರ್, ಸಲೂನ್ ಬಂದ್! - ಒಮಿಕ್ರಾನ್

Education institutes, theaters, parks shutdown in West Bengal: ಕೋವಿಡ್, ಒಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಶಾಲಾ, ಕಾಲೇಜು ಸೇರಿದಂತೆ ಜನ ಸೇರುವಂತಹ ತಾಣಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

COVID19
COVID19
author img

By

Published : Jan 2, 2022, 7:29 PM IST

ಕೋಲ್ಕತ್ತಾ: ದೇಶಾದ್ಯಂತ ಮತ್ತೆ ಕೋವಿಡ್ ಹೆಚ್ಚುತ್ತಿದೆ. ಜೊತೆಗೆ ಒಮಿಕ್ರಾನ್ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳು ಮುನ್ನೆಚ್ಚರಿಕಾ ಕ್ರಮವಾಗಿ ಕಠಿಣ ಕ್ರಮಗಳನ್ನು ಜಾರಿಗೊಳಿಸುತ್ತಿವೆ. ಅಂತೆಯೇ ಪಶ್ಚಿಮ ಬಂಗಾಳ ಸರ್ಕಾರವು ನಾಳೆಯಿಂದ (ಸೋಮವಾರ) ಶಾಲೆ, ಕಾಲೇಜು, ಸಿನಿಮಾ ಮಂದಿರ, ಮನರಂಜನಾ ತಾಣ, ಸಲೂನ್, ಸ್ಪಾಗಳನ್ನು ಬಂದ್ ಮಾಡಲು ನಿರ್ಧರಿಸಿದೆ.

ಈ ಬಗ್ಗೆ ಅಧಿಕೃತವಾಗಿ ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೆಚ್​.ಕೆ.ದ್ವಿವೇದಿ ಅವರು ಟ್ವೀಟ್ ಮಾಡಿ, ಒಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ನಾಳೆಯಿಂದ ಶಾಲಾ, ಕಾಲೇಜು, ಥಿಯೇಟರ್ ಹಾಗೂ ಸಲೂನ್, ಸ್ಪಾಗಳನ್ನು ಬಂದ್ ಮಾಡುವುದಾಗಿ ತಿಳಿಸಿದ್ದಾರೆ.

ಅಲ್ಲದೇ ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳು ಶೇ. 50 ರಷ್ಟು ಪ್ರಮಾಣದಲ್ಲಿ ನೌಕರರೊಂದಿಗೆ ಕಾರ್ಯನಿರ್ವಹಿಸಲಿವೆ. ಇದರೊಂದಿಗೆ ಪಶ್ಚಿಮ ಬಂಗಾಳ ಭಾಗಶಃ ಲಾಕ್‌ಡೌನ್‌ ಹಂತಕ್ಕೆ ತಲುಪಿದೆ.

ಈಗಾಗಲೇ ಕರ್ನಾಟಕ ಸೇರಿದಂತೆ ಹಲವೆಡೆ ನೈಟ್ ಕರ್ಫ್ಯೂ ಜಾರಿಯಯಲ್ಲಿದೆ. ಜೊತೆಗೆ ದೆಹಲಿ ಸೇರಿ ಕೆಲವಡೆ ಥಿಯೇಟರ್​ನಲ್ಲಿ ಶೇ.50 ರಷ್ಟು ಮಾತ್ರ ಆಸನ ಭರ್ತಿಗೆ ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕದಲ್ಲೂ ಟಫ್ ರೂಲ್ಸ್ ಜಾರಿ ಮಾಡುವ ಬಗ್ಗೆ ಇಂದು ಸಿಎಂ ಬೊಮ್ಮಾಯಿ ಸುಳಿವು ನೀಡಿದ್ದಾರೆ.

(ಇದನ್ನೂ ಓದಿ: ಜನ ಸಹಕಾರ ಕೊಟ್ರೆ ಲಾಕ್​ಡೌನ್ ಆಗಲ್ಲ.. ಟಫ್​ ರೂಲ್ಸ್​ ಬಗ್ಗೆ ಸಿಎಂ ಹೇಳಿದ್ದಿಷ್ಟು!)

ETV Bharat Logo

Copyright © 2025 Ushodaya Enterprises Pvt. Ltd., All Rights Reserved.