ETV Bharat / bharat

ಸಿಪಿಎಂ ತಿರುವನಂತಪುರ ಜಿಲ್ಲಾ ಸಮಿತಿ ಕಚೇರಿ ಮೇಲೆ ಕಲ್ಲು ತೂರಾಟ.. ವಿಡಿಯೋ - ಈಟಿವಿ ಭಾರತ್​ ಕರ್ನಾಟಕ

ಶನಿವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಸಿಪಿಎಂ ತಿರುವನಂತಪುರಂ ಜಿಲ್ಲಾ ಸಮಿತಿ ಕಚೇರಿಗೆ ಕಲ್ಲು ತೂರಾಟ ನಡೆದಿದೆ. ದಾಳಿಯ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಅಣವೂರು ನಾಗಪ್ಪನ್ ಆರೋಪಿಸಿದ್ದಾರೆ.

CPI(M) office attacked in Thiruvananthapuram
ಸಿಪಿಎಂ ತಿರುವನಂತಪುರ ಜಿಲ್ಲಾ ಸಮಿತಿ ಕಚೇರಿ ಮೇಲೆ ಕಲ್ಲು ತೂರಾಟ
author img

By

Published : Aug 27, 2022, 12:08 PM IST

ತಿರುವನಂತಪುರಂ(ಕೆರಳ) : ಸಿಪಿಎಂ ತಿರುವನಂತಪುರ ಜಿಲ್ಲಾ ಸಮಿತಿ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿದೆ. ಶನಿವಾರ ಬೆಳಗಿನ ಜಾವ ಎರಡು ಗಂಟೆ ಸುಮಾರಿಗೆ ಕಚೇರಿ ಮೇಲೆ ದಾಳಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ದಾಳಿಯಲ್ಲಿ ಕಚೇರಿ ಎದುರು ನಿಲ್ಲಿಸಿದ್ದ ಜಿಲ್ಲಾ ಕಾರ್ಯದರ್ಶಿಗಳ ವಾಹನಕ್ಕೆ ಹಾನಿಯಾಗಿದೆ.

ಸಿಪಿಎಂ ತಿರುವನಂತಪುರ ಜಿಲ್ಲಾ ಸಮಿತಿ ಕಚೇರಿ ಮೇಲೆ ಕಲ್ಲು ತೂರಾಟ

ಬೈಕ್​ನಲ್ಲಿ ಬಂದು ಕಲ್ಲು ಎಸೆಯುವ ದೃಶ್ಯ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೂರು ಬೈಕ್‌ಗಳಲ್ಲಿ ಬಂದ ಆರು ಮಂದಿಯ ತಂಡ ಈ ದಾಳಿ ನಡೆಸಿದೆ. ಕರ್ತವ್ಯ ನಿರತ ಪೊಲೀಸರು ಬೈಕ್ ನಲ್ಲಿ ಬಂದು ಕಚೇರಿಗೆ ಕಲ್ಲು ತೂರಾಟ ನಡೆಸಿದವರ ಹಿಂದೆ ಓಡಿದರೂ ಹಿಡಿಯಲು ಸಾಧ್ಯವಾಗಲಿಲ್ಲ. ನಗರ ಪೊಲೀಸ್ ಆಯುಕ್ತ ಸ್ಪರ್ಜನ್ ಕುಮಾರ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ದಾಳಿ ಹಿಂದೆ ಬಿಜೆಪಿ ಕೈವಾಡ: ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಅನವೂರು ನಾಗಪ್ಪನ್ ದಾಳಿಯ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ನಿನ್ನೆ ಸಂಜೆ ವಂಜಿಯೂರಿನಲ್ಲಿ ನಡೆದ ಸಂಘರ್ಷದ ಮುಂದುವರಿದ ಭಾಗವೇ ಸಿಪಿಎಂ ಕಚೇರಿ ಮೇಲೆ ದಾಳಿ ಎಂದು ಸಿಪಿಎಂ ಆರೋಪಿಸಿದೆ. ಬಿಜೆಪಿ ಆರೋಪಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ : ಚೆನ್ನೈನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್​ ಬೆದರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.