ಕಣ್ಣೂರು, ಕೇರಳ : ಸಿಪಿಎಂ ಕೇಂದ್ರ ಸಮಿತಿ ಸದಸ್ಯೆ ಎಂಸಿ ಜೋಸೆಫೀನ್ (71) ನಿಧನರಾಗಿದ್ದಾರೆ. ಹೃದಯಾಘಾತದಿಂದ ಕಣ್ಣೂರು ಎಕೆಜಿ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿದ್ದ ಅವರು ನಿಧನರಾಗಿದ್ದಾರೆ. ಶನಿವಾರ ಹೃದಯಾಘಾತದಿಂದ ಕುಸಿದುಬಿದ್ದಿದ್ದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಂಸಿ ಜೋಸೆಫಿನ್ ಅವರು ಕೇರಳ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ಜೋಸೆಫೀನ್ ಅವರು 25ನೇ ಮೇ 2017ರಿಂದ 25ನೇ ಜೂನ್ 2021ರವರೆಗೆ ಕೇರಳ ಮಹಿಳಾ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಕಚೇರಿಯಲ್ಲಿ ತಮ್ಮ ಅಧಿಕಾರಾವಧಿಯಲ್ಲಿ ಹಲವಾರು ವಿವಾದಗಳನ್ನು ಎದುರಿಸಿದ್ದಾರೆ. ಟಿವಿ ನೇರಪ್ರಸಾರ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಅವರು ಹುದ್ದೆಗೆ ರಾಜೀನಾಮೆ ನೀಡಿದ್ದರು.
ಅವರು 2006ರಲ್ಲಿ ಮಟ್ಟಂಚೇರಿ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರು ಮತ್ತು ವಿಕೆ ಇಬ್ರಾಹಿಂ ಕುಂಜು ಅವರ ವಿರುದ್ಧ ಸೋಲನ್ನು ಅನುಭವಿಸಿದ್ದರು. ಜೋಸೆಫೀನ್ ಅವರ ಪತಿ ಪಿಎ ಮಥಾಯ್ ಟ್ರೇಡ್ ಯೂನಿಯನ್ನ ನಾಯಕರಾಗಿದ್ದು, ಅವರು ಮಾರ್ಚ್ 30, 2020ರಂದು ನಿಧನರಾಗಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿ- ಆರ್ಎಸ್ಎಸ್ ಮುಖ್ಯಸ್ಥ ಭಾಗವತ್ ಬಗ್ಗೆ ಆಕ್ಷೇಪಾರ್ಹ ಚಿತ್ರಗಳ ಫೋಸ್ಟ್