ETV Bharat / bharat

ಕಲ್ಲಿದ್ದಲು ಗಣಿಯಲ್ಲಿ ಅಪ್ರಾಪ್ತ ಬಾಲಕಿಯ ಶವ ಪತ್ತೆ ಪ್ರಕರಣ: 7 ಆರೋಪಿಗಳ ಬಂಧನ.. ರಾಜಸ್ಥಾನ ಸಿಎಂ ಗೆಹ್ಲೋಟ್ ಮಾಹಿತಿ - ಬಾಲಕಿಯ ಶವ ಪತ್ತೆ ಪ್ರಕರಣ

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ 14 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರತಿಕ್ರಿಯೆ ನೀಡಿದ್ದಾರೆ.

Crime 7 accused arrested in Bhilwara gangrape case: Rajasthan CM Gehlot

author img

By

Published : Aug 5, 2023, 8:35 PM IST

ಭಿಲ್ವಾರಾ (ರಾಜಸ್ಥಾನ): ಇಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಏಳು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶನಿವಾರ ತಿಳಿಸಿದ್ದಾರೆ. ಆ. 4ರ ರಾತ್ರಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ ಎಂದು ಅವರು ಮಾಧ್ಯಮದವರಿಗೆ ಮಾಹಿತಿ ನೀಡಿದರು.

ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ರಾಜಸ್ಥಾನ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಆದರೆ, ಮಣಿಪುರದ ಘಟನೆ ಹೋಲಿಸಿ ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್​​ ಸರ್ಕಾರದ ವಿರುದ್ಧ ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ರಾಜಸ್ಥಾನದಲ್ಲಿಯೂ ಅಂತಹ ಘಟನೆಗಳೇ ನಡೆಯುತ್ತಿವೆ, ಹೆಣ್ಣು ಮಕ್ಕಳಿಗೆ ಭದ್ರತೆ ಇಲ್ಲವೆಂದು ರಾಜ್ಯದ ಮಾನವನ್ನು ಕಳೆಯುವ ಪ್ರಯತ್ನ ನಡೆಸಿದ್ದಾರೆ. ರಾಜಸ್ಥಾನ ಶಾಂತಿಪ್ರಿಯ ರಾಜ್ಯ. ಮಧ್ಯಪ್ರದೇಶ ಮತ್ತು ಇತರೆ ರಾಜ್ಯಗಳಲ್ಲಿ ನಡೆಯುವ ಘಟನೆಗಳು ಇವರಿಗೆ ಕಾಣುತ್ತಿಲ್ಲವೇ? ಹಲವು ಅಪರಾಧ ಕೃತ್ಯಗಳಲ್ಲಿ ಶಾಸಕರ ಪುತ್ರರೇ ಭಾಗಿಯಾಗಿದ್ದಾರೆ. ಇದನ್ನು ಪ್ರಶ್ನೆ ಮಾಡುವರಾರು ಎಂದು ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಾಗ್ದಾಳಿ ನಡೆಸಿದರು.

ಉತ್ತಮ ಸಮಾಜ ನಿರ್ಮಾಣ ಮಾಡುವ ಕುರಿತು ಜನರಲ್ಲಿ ಅರಿವು ಮೂಡಿಸುವಂತಹ ಶಿಕ್ಷಣ ನೀಡಬೇಕಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಿಎಸ್, ಡಿಜಿಪಿ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವೆ. ತಪ್ಪಿತಸ್ಥರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಲು ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಆದಷ್ಟು ಬೇಗ ಆರೋಪಿಗಳಿಗೆ ನ್ಯಾಯಾಲಯದಿಂದ ಕಠಿಣ ಶಿಕ್ಷೆಯಾಗುವಂತೆ ರಾಜ್ಯ ಸರ್ಕಾರ ನೋಡಿಕೊಳ್ಳುತ್ತದೆ ಎಂದು ಸಹ ಅವರು ಹೇಳಿದ್ದಾರೆ.

ಭಿಲ್ವಾರಾ ಎಸ್ಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಜ್ಮೇರ್ ರೇಂಜ್ ಪೊಲೀಸ್ ಮಹಾನಿರೀಕ್ಷಕರಾದ ಲತಾ ಮನೋಜ್ ಕುಮಾರ್, ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ನಾಲ್ವರನ್ನು ಬಂಧಿಸಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಅನುಮಾನದ ಹಿನ್ನೆಲೆ ಇಬ್ಬರು ಮಹಿಳೆಯರನ್ನು ಕೂಡ ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಕರಣದ ವಿಚಾರಣೆಗಾಗಿ ನಾವು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅನ್ನು ತೊಡಗಿಸಿಕೊಳ್ಳುತ್ತೇವೆ.

ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈಗಾಗಲೇ ಮೌಖಿಕ, ದೈಹಿಕ ಮತ್ತು ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಿದ್ದೇವೆ. ಹೆಚ್ಚುವರಿಯಾಗಿ, ಜೈಪುರದ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯ ತಂಡವು ಘಟನೆಯ ಬಗ್ಗೆ ತನಿಖೆ ನಡೆಸಲಿದೆ. 15 ದಿನಗಳಲ್ಲಿ ತನಿಖೆಯನ್ನು ಪೂರ್ಣಗೊಳಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ನಿವಾಸದ ಬಳಿ ಭಿಲ್ವಾರಾ ಘಟನೆ ಖಂಡಿಸಿ ನಡೆಸುತ್ತಿರುವ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.

ಭಿಲ್ವಾರ ಜಿಲ್ಲೆಯ ಹಳ್ಳಿಯೊಂದರ ಹೊರವಲಯದಲ್ಲಿ ಕಲ್ಲಿದ್ದಲು ಗಣಿಯೊಳಗೆ ಬುಧವಾರ ಅಪ್ರಾಪ್ತ ಬಾಲಕಿಯ ಶವವೊಂದು ಸುಟ್ಟು ಹಾಕಲಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪ್ರಕರಣ ಖಂಡಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಗ್ರಾಮಸ್ಥರು ಪ್ರತಿಭಟನೆಯಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿಯನ್ನು ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದರು. ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಬಳಿಕ ಆಕೆಯನ್ನು ಕಲ್ಲಿದ್ದಲು ಗಣಿಯಲ್ಲಿ ಎಸೆಯಲಾಗಿದೆ ಎಂಬ ಶಂಕೆ ಹಿನ್ನೆಲೆ ಪೊಲೀಸರು ಅಂದೇ ಕೆಲವರನ್ನು ಬಂಧಿಸಿದ್ದರು. ಆದರೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಗ್ರಾಮಸ್ಥರು ಮುಖ್ಯಮಂತ್ರಿ ಮನೆಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಕಲ್ಲಿದ್ದಲು ಭಟ್ಟಿಯಲ್ಲಿ ಸುಟ್ಟು ಹಾಕಲಾದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.