ETV Bharat / bharat

Rape Case: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ.. ವಿಡಿಯೋ ತೆಗೆದು ನಿರಂತರ ದೌರ್ಜನ್ಯ ಎಸಗುತ್ತಿದ್ದ ಪಾತಕಿಗಳು ಅಂದರ್​! - ವಿಶಾಖಪಟ್ಟಣಂ ಅಪರಾಧ ಸುದ್ದಿ

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಶಾಲೆಯ ಅಟೆಂಡರ್ ವಿದ್ಯಾರ್ಥಿನಿಯ ಮೇಲೆ ತನ್ನ ಸ್ನೇಹಿತರೊಂದಿಗೆ ಸಾಮೂಹಿಕ ಅತ್ಯಾಚಾರ ಮಾಡಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಪಾತಕಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತೆ ಸಾಮೂಹಿಕ ಅತ್ಯಾಚಾರ
ಅಪ್ರಾಪ್ತೆ ಸಾಮೂಹಿಕ ಅತ್ಯಾಚಾರ
author img

By

Published : Jul 10, 2023, 4:18 PM IST

Updated : Jul 10, 2023, 4:58 PM IST

ವಿಶಾಖಪಟ್ಟಣಂ( ಆಂಧ್ರಪ್ರದೇಶ) : ಆತ ಬಾಲಕಿ ಓದುತ್ತಿದ್ದ ಶಾಲೆಯಲ್ಲಿ ಅಟೆಂಡರ್​. ಒಂದೇ ಅಪಾರ್ಟ್​ಮೆಂಟ್​ನ ನಿವಾಸಿ. ವಿದ್ಯಾರ್ಥಿನಿ ನೀಡಿದ ಸಲುಗೆಯನ್ನು ದುರುಪಯೋಗಪಡಿಸಿಕೊಂಡು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದನ್ನು ವಿಡಿಯೋ ಮಾಡಿ ತನ್ನೊಂದಿಗೆ ಸಹಕರಿಸದಿದ್ದರೆ, ಹರಿಬಿಡುವ ಬೆದರಿಕೆ ಹಾಕಿ ತನ್ನ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾನೆ. ಕೃತ್ಯ ಇದೀಗ ಬೆಳಕಿಗೆ ಬಂದಿದ್ದು, ಕೀಚಕ ಸತ್ಯರಾವ್​ ಮತ್ತು ಆತನ ನಾಲ್ವರು ಸ್ನೇಹಿತರನ್ನ ಬಂಧಿಸಲಾಗಿದೆ.

ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ಆರೋಪಿ ಸತ್ಯರಾವ್ ಕೂಡ ಅದೇ ಕಟ್ಟಡದಲ್ಲಿ ಉಳಿದುಕೊಂಡಿದ್ದ. ಅಲ್ಲದೇ, ಸಂತ್ರಸ್ತ ಬಾಲಕಿ ಓದುತ್ತಿರುವ ಶಾಲೆಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ. ಸತ್ಯರಾವ್ ಕೆಲ ದಿನಗಳಿಂದ ಬಾಲಕಿಯ ಸ್ನೇಹ ಬೆಳೆಸಿಕೊಂಡು ಅತ್ಯಾಚಾರ ನಡೆಸಿದ್ದಾನೆ.

ವಿಡಿಯೋ ಮಾಡಿ ನಿರಂತರ ಬೆದರಿಕೆ: ಇದರ ಬಳಿಕ ಆಕೆಯೊಂದಿಗಿನ ಆತ್ಮೀಯ ಕ್ಷಣಗಳನ್ನು ವಿಡಿಯೋ ಮಾಡಿ, ಫೋಟೋ ತೆಗೆದುಕೊಂಡಿದ್ದಾನೆ. ಇದಾದ ಬಳಿಕವೂ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಅಲ್ಲದೇ, ತನ್ನ ನಾಲ್ವರು ಸ್ನೇಹಿತರೊಂದಿಗೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ವಿಷಯ ಬಾಯ್ಬಿಟ್ಟರೆ, ವಿಡಿಯೋ, ಚಿತ್ರಗಳನ್ನು ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಬಾಲಕಿ ಯಾರಿಗೂ ತನ್ನ ಮೇಲಾಗುತ್ತಿರುವ ದೌರ್ಜನ್ಯದ ಬಗ್ಗೆ ಹೇಳಿಕೊಂಡಿರಲಿಲ್ಲ.

ದಿನದಿನವೂ ಬಾಲಕಿ ಮಾನಸಿಕವಾಗಿ ಖಿನ್ನತೆಗೆ ಒಳಗಾಗುತ್ತಿದ್ದಾಳೆ. ಶೈಕ್ಷಣಿಕವಾಗಿಯೂ ಹಿನ್ನಡೆ ಅನುಭವಿಸಿದ್ದಾಳೆ ಎಂದು ಆಕೆಯ ಸಾಧನೆಯ ಬಗ್ಗೆ ಶಾಲೆಯ ಪ್ರಾಂಶುಪಾಲರು ಪೋಷಕರಿಗೆ ದೂರು ನೀಡಿದ್ದಾರೆ. ಆಗ ತಾಯಿ ಬಾಲಕಿಯನ್ನು ವಿಚಾರಿಸಿದಾಗ ಈ ಎಲ್ಲ ಕರ್ಮಕಾಂಡದ ಬಗ್ಗೆ ಬಾಯಿ ಬಿಟ್ಟಿದ್ದಾಳೆ.

ಆಘಾತಕ್ಕೊಳಗಾದ ಪೋಷಕರು ವಿಮಾನ ನಿಲ್ದಾಣ ಪೊಲೀಸ್​ ಠಾಣೆಯಲ್ಲಿ ಆರೋಪಿ ಸತ್ಯರಾವ್​ ಮೇಲೆ ದೂರು ನೀಡಿದ್ದಾರೆ. ಬಾಲಕಿಯನ್ನು ಕೆಜಿಎಚ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಆಕೆ ನೀಡಿದ ಹೇಳಿಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಪೋಕ್ಸೊ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದೆ. ಸತ್ಯರಾವ್​ ಮತ್ತು ಆತನ ನಾಲ್ವರು ಸ್ನೇಹಿತರನ್ನು ಬಂಧಿಸಿ ವಿಚಾರಣೆ ಒಳಪಡಿಸಲಾಗಿದೆ.

ಅಪ್ರಾಪ್ತೆ ರೇಪ್​ ಮಾಡಿ ಕೊಲೆ: ಉತ್ತರಪ್ರದೇಶದಲ್ಲಿ ಈಚೆಗೆ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಘಟನೆ ಬೆಚ್ಚಿಬೀಳಿಸಿತ್ತು. ಮನೆ ಬಾಡಿಗೆಗಿದ್ದ ಯುವಕ, ತನ್ನ ಮಾಲೀಕನ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೇ, ವಿಷಯ ಬಯಲಿಗೆ ಬರದಂತೆ ಮುಚ್ಚಿಹಾಕಲು ಆಕೆಯನ್ನು ಕೊಂದು ಕಬೋರ್ಡ್​ನೊಳಗೆ ಹಾಸಿಗೆಯಲ್ಲಿ ಸುತ್ತಿಟ್ಟಿದ್ದ. ಪೊಲೀಸರ ತನಿಖೆಯಲ್ಲಿ ಇದು ಬಳಿಕ ಬಯಲಾಗಿತ್ತು. ಆರೋಪಿಯನ್ನು ಪೊಲೀಸರು ಬಂಧಿಸಿ, ಶಿಕ್ಷೆಗೆ ಗುರಿ ಮಾಡಿದ್ದರು.

ಇದನ್ನೂ ಓದಿ: ಉತ್ತರಪ್ರದೇಶದಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ: ಕೊಲೆ?

Last Updated : Jul 10, 2023, 4:58 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.