ETV Bharat / bharat

BSF suspends Jawan: ಮಣಿಪುರ ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ; ಬಿಎಸ್‌ಎಫ್‌ ಯೋಧ​ ಸಸ್ಪೆಂಡ್‌ - etv bharat kannada

Manipur Violence: ಮಣಿಪುರದ ಕಿರಾಣಿ ಅಂಗಡಿಯೊಂದರಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪ ಪ್ರಕರಣದಲ್ಲಿ ಬಿಎಸ್​ಎಫ್ ಯೋಧನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಜವಾನ​ ಅಮಾನತ್ತು
ಜವಾನ​ ಅಮಾನತ್ತು
author img

By

Published : Jul 26, 2023, 8:17 AM IST

ನವದೆಹಲಿ: ಹಿಂಸಾಚಾರಪೀಡಿತ ದೇಶದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯೋಧನೊಬ್ಬನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಮಂಗಳವಾರ ಕರ್ತವ್ಯದಿಂದ ಅಮಾನತು ಮಾಡಿದೆ ಎಂದು ಸೇನಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕಳೆದ ವಾರ ಪಡಿತರ ಅಂಗಡಿಯಲ್ಲಿ ಸ್ಥಳೀಯ ಮಹಿಳೆಗೆ ಸತೀಶ್ ಪ್ರಸಾದ್ ಎಂಬಾತ ಸಮವಸ್ತ್ರ ಧರಿಸಿ ರೈಫಲ್ ಹಿಡಿದು ಮಹಿಳೆಯ ವಿರುದ್ಧ ದೌರ್ಜನ್ಯ ತೋರಿದ್ದರು. ಘಟನೆಯ ದೃಶ್ಯ ಅಂಗಡಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್​ ಆಗಿತ್ತು. ವಿಡಿಯೋ ನೋಡಿದ ಜನರು ಯೋಧನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಬಿಎಸ್​ಎಫ್​ ಅಧಿಕಾರಿಗಳು ಸತೀಶ್​ ಪ್ರಸಾದ್‌ನನ್ನು ಅಮಾನತು ಮಾಡಿ ಕ್ರಮ ಜರುಗಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಬಿಎಸ್​ಎಫ್​ ಅಧಿಕಾರಿಯೊಬ್ಬರು, "ಜುಲೈ 20ರಂದು ಇಂಫಾಲ್​ನಲ್ಲಿ ಈ ಘಟನೆ ನಡೆದ ಕುರಿತು ವರದಿಯಾಗಿದೆ. ನಮಗೆ ದೂರು ಬಂದ ನಂತರ, ಆರೋಪದ ಬಗ್ಗೆ ತನಿಖೆ ನಡೆಸಿ ಅದೇ ದಿನ ಅಮಾನತುಗೊಳಿಸಲಾಯಿತು" ಎಂದರು.

"ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಭದ್ರತಾ ಕರ್ತವ್ಯಕ್ಕೆಂದು ಯೋಧನನ್ನು ನಿಯೋಜಿಸಲಾಗಿತ್ತು. 100ನೇ ಬೆಟಾಲಿಯನ್​ಗೆ ಸೇರಿದ ಯೋಧನ ವಿರುದ್ಧ ಸೇನಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಇಂತಹ ಕೃತ್ಯಗಳನ್ನು ಬಿಎಸ್‌ಎಫ್ ಎಂದಿಗೂ ಸಹಿಸುವುದಿಲ್ಲ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು" ಎಂದು ಅವರು ಹೇಳಿದರು.

ಕಳೆದ ನಾಲ್ಕು ದಿನಗಳ ಹಿಂದಷ್ಟೇ ಇಬ್ಬರು ಮಹಿಳೆಯರನ್ನು ಅಪಹರಿಸಿ ನಗ್ನವಾಗಿ ಮೆರವಣಿಗೆ ಮಾಡಿದ ಅಮಾನವೀಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಶಸ್ತ್ರಸಜ್ಜಿತ ಗುಂಪು ಇಬ್ಬರು ಮಹಿಳೆಯರನ್ನು ಬೆತ್ತಲೆ ಮರವಣಿಗೆ ಮಾಡಿ, ಬಳಿಕ ಮನೆಗಳಿಗೂ ಬೆಂಕಿ ಹಚ್ಚಿ ಲೂಟಿ ಮಾಡಿದ್ದರು.

ಜನಾಂಗೀಯ ಹಿಂಸಾಚಾರದಲ್ಲಿ ಈವರೆಗೂ 160ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಶಾಂತಿ ಮರುಸ್ಥಾಪಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ. ಆದರೆ, ಸರ್ಕಾರದ ಪ್ರಯತ್ನಗಳು ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಿಲ್ಲ. ಮೈತೇಯಿ ಸಮುದಾಯವು ರಾಜ್ಯದ ಜನಸಂಖ್ಯೆಯ ಸುಮಾರು 53 ಪ್ರತಿಶತವನ್ನು ಹೊಂದಿದೆ. ಮುಖ್ಯವಾಗಿ ಇಂಫಾಲ್ ಕಣಿವೆಯಲ್ಲಿ ಇವರು ವಾಸಿಸುತ್ತಿದ್ದಾರೆ. ನಾಗಾ ಮತ್ತು ಕುಕಿ ಸಮುದಾಯದ ಬುಡಕಟ್ಟು ಜನಾಂಗದವರು 40 ಪ್ರತಿಶತದಷ್ಟು ಜನಸಂಖ್ಯೆ ಹೊಂದಿದ್ದು, ಗುಡ್ಡಗಾಡು ಜಿಲ್ಲೆಗಳಲ್ಲಿ ನೆಲೆಸಿದ್ದಾರೆ.

ಇದನ್ನೂ ಓದಿ: Manipur violence: ಮಹಿಳೆಯರ ಬೆತ್ತಲೆ ಮೆರವಣಿಗೆಗೂ ಮುನ್ನ ಜನರನ್ನು ಕೊಂದು ಮನೆಗಳಿಗೆ ಬೆಂಕಿ ಹಚ್ಚಲಾಗಿತ್ತು: ಎಫ್‌ಐಆರ್​ನಲ್ಲಿ ಉಲ್ಲೇಖ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.