ಸಹರಾನ್‌ಪುರ (ಉತ್ತರ ಪ್ರದೇಶ): ಭೀಮ್ ಆರ್ಮಿ ಮುಖ್ಯಸ್ಥ ಹಾಗೂ ಆಜಾದ್ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಚಂದ್ರಶೇಖರ್ ಆಜಾದ್ ಅವರ ಮೇಲೆ ಬುಧವಾರ ಅಪರಿಚಿತ ದುಷ್ಕರ್ಮಿಗಳು ಗುಂಡಿ ದಾಳಿ ನಡೆಸಿ ಪರಾರಿಯಾಗಿದ್ದಾರೆ. ದಾಳಿ ದಿಯೋಬಂದ್‌ನಲ್ಲಿ ಸಂಚಲನ ಮೂಡಿಸಿದೆ. ಆಜಾದ್ ಅವರ ಹೊಟ್ಟೆಗೆ ತಾಗಿ ಗುಂಡುಗಳು ಹೊರ ಬಂದಿವೆ. ಬೆಂಬಲಿಗರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದೀಗ ದೇವಬಂದ್ ಸಿಎಚ್‌ಸಿಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಬುಧವಾರ ಸಂಜೆ 5.30ಕ್ಕೆ ಗಾಂಧಿ ಕಾಲೋನಿಯಲ್ಲಿ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದ ಆಜಾದ್ ಫಾರ್ಚೂನರ್ ಕಾರಿನ ಮೇಲೆ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದಿದ್ದ ಇಬ್ಬರು ಗುಂಡಿನ ದಾಳಿ ನಡೆಸಿದ್ದಾರೆ. ತೀವ್ರ ರಕ್ತಸ್ರಾವವಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ದುಷ್ಕರ್ಮಿಗಳು 4 ಸುತ್ತು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Honeytrap: ಮಂಗಳೂರಿನಲ್ಲಿ ಕೇರಳ ಉದ್ಯಮಿಯ ಹನಿಟ್ರ್ಯಾಪ್: ಯುವತಿ ಸಹಿತ 8 ಮಂದಿ ಬಂಧನ
ತನಿಖೆ ನಡೆಯುತ್ತಿದೆ- ಎಸ್‌ಎಸ್‌ಪಿ: ಜಿಲ್ಲೆಯ ಉನ್ನತ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಎಸ್‌ಎಸ್‌ಪಿ ಸೇರಿದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಸ್ಥಳದಲ್ಲಿದೆ. ಘಟನೆಯ ಬಗ್ಗೆ ಮಾಹಿತಿ ನೀಡಿದ ಎಸ್‌ಎಸ್‌ಪಿ ಡಾ.ವಿಪಿನ್ ತಾಡಾ, ''ಕಾರಿನಲ್ಲಿ ಬಂದ ಶಸ್ತ್ರಸಜ್ಜಿತ ವ್ಯಕ್ತಿಗಳು ಚಂದ್ರಶೇಖರ್ ಆಜಾದ್ ಮೇಲೆ ಗುಂಡು ಹಾರಿಸಿದ್ದಾರೆ. ಚಿಕಿತ್ಸೆಗಾಗಿ ಅವರನ್ನು ಸಿಎಚ್‌ಸಿಗೆ ಕರೆದೊಯ್ಯಲಾಗಿದೆ. ಆರೋಗ್ಯವಾಗಿದ್ದಾರೆ'' ಎಂದು ತಿಳಿಸಿದರು.
ಇದನ್ನೂ ಓದಿ: ಮದುವೆ ದಿನದಂದೇ ವಧುವಿನ ತಂದೆ ಕೊಂದ ಮಾಜಿ ಪ್ರಿಯಕರ: ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆದ ಪೊಲೀಸರು
ದಾಳಿಕೋರರ ಪತ್ತೆಗಾಗಿ ಪೊಲೀಸರು ಇಡೀ ಜಿಲ್ಲೆಯಲ್ಲಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. ಆಜಾದ್ ಸಮಾಜ ಪಕ್ಷದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆ ಹೊರಗೆ ಜಮಾಯಿಸಿದ್ದಾರೆ. ಹೀಗಾಗಿ ಸಿಎಚ್‌ಸಿ ಹೊರಭಾಗದಲ್ಲಿಯೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇದನ್ನೂ ಓದಿ: ಮಂಗಳೂರು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ
ಪ್ರೀತಿಯ ಹೆಸರಲ್ಲಿ ಪ್ರೇಮಿ- ಇಬ್ಬರು ಸ್ನೇಹಿತರಿಂದ ಬಾಲಕಿ ಮೇಲೆ ಅತ್ಯಾಚಾರ... ಐವರು ಬಾಲಕರು ಸೇರಿ ಆರು ಜನರ ಬಂಧನ!