ಮೀರತ್(ಉತ್ತರ ಪ್ರದೇಶ): ಬಿಎ ಓದುತ್ತಿರುವ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮೀರತ್ನಲ್ಲಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ತನ್ನ ಕುಟುಂಬ ಸದಸ್ಯರೊಂದಿಗೆ ಸರೂರ್‌ಪುರ ಪೊಲೀಸ್ ಠಾಣೆಗೆ ಬಂದು ತನ್ನ ನೆರೆಹೊರೆಯ ಇಬ್ಬರು ಯುವಕರ ವಿರುದ್ಧ ದೂರು ದಾಖಲಿಸಿದ್ದಾರೆ. ಸಂತ್ರಸ್ತೆಯ ಮನೆಯ ನೆರೆಹೊರೆಯವರಾಗಿರುವ ಇಬ್ಬರು ಯುವಕರು ಆಕೆಗೆ ಲಿಫ್ಟ್ ನೀಡುವುದಾಗಿ ಹೇಳಿ ಕಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಎಂದಿನಂತೆ ನಾನು ಕಾಲೇಜಿಗೆ ಹೋಗಲು ಬಸ್ ಗಾಗಿ ಕಾಯುತ್ತಿದ್ದೆ. ಈ ವೇಳೆ ನಮ್ಮ ಅಕ್ಕಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದ ಇಬ್ಬರು ಅಲ್ಲಿಗೆ ಬಂದಿದ್ದರು. ನಂತರ ಅವರು ಕಾಲೇಜಿಗೆ ಲಿಫ್ಟ್ ನೀಡುವುದಾಗಿ ಹೇಳಿದರು. ನಾನು ಅವರ ಬೈಕಿನಲ್ಲಿ ಕುಳಿತೆ, ಸ್ವಲ್ಪ ಸಮಯದ ನಂತರ ಇಬ್ಬರು ಯುವಕರು ನನ್ನನ್ನು ಮೈನಪೌತಿ ಗ್ರಾಮದ ಕಾಡಿಗೆ ಕರೆದುಕೊಂಡು ಹೋದರು. ನಾನು ಅವರಿಗೆ ಬೈಕ್ ನಿಲ್ಲಿಸಲು ಕೇಳಿದಾಗ, ಅವರು ನನ್ನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ನಂತರ ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ವಿದ್ಯಾರ್ಥಿನಿ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಸಂತ್ರಸ್ತೆಗೆ ಅತ್ಯಾಚಾರದ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಆರೋಪಿಗಳು ಪರಾರಿಯಾಗಿದ್ದಾರೆ. ಸಂತ್ರಸ್ತೆ ಮನೆಗೆ ತಲುಪಿ ಘಟನೆಯ ಬಗ್ಗೆ ತನ್ನ ಕುಟುಂಬಕ್ಕೆ ತಿಳಿಸಿದ್ದಾಳೆ. ಸಂತ್ರಸ್ತೆ ಮತ್ತು ಆಕೆಯ ಕುಟುಂಬ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಬಿಎ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಗಳು ತುಂಬಾ ಗಂಭೀರವಾಗಿವೆ ಎಂದು ಸರೂರ್‌ಪುರ ಪೊಲೀಸ್ ಠಾಣೆಯ ಠಾಣಾಧಿಕಾರಿ ದೇವ್ ಸಿಂಗ್ ರಾವತ್ ತಿಳಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು: ಅಕ್ರಮವಾಗಿ ಮನೆ ಪ್ರವೇಶಿಸಿ ಮಲಗಿದ್ದ ಮಹಿಳೆಗೆ ಕಿರುಕುಳ, ಆರೋಪಿ ಬಂಧನ
ಆ್ಯಸಿಡ್ ಹಾಕುವುದಾಗಿ ವಿದ್ಯಾರ್ಥಿನಿಗೆ ಬೆದರಿಕೆ(ಲಖನೌ): ಮತ್ತೊಂದೆಡೆ, ಕಳೆದ ಎರಡು ವರ್ಷಗಳಿಂದ ಯುವಕನೊಬ್ಬ ವಿದ್ಯಾರ್ಥಿನಿ ಮೇಲೆ ಮದುವೆಯಾಗುವಂತೆ ನಿರಂತರವಾಗಿ ಒತ್ತಡ ಹೇರುತ್ತಿದ್ದು, ನಿರಾಕರಿಸಿದರೆ ಆ್ಯಸಿಡ್ ಹಾಕುವುದಾಗಿ ಬೆದರಿಕೆ ಹಾಕಿದ್ದ ಘಟನೆ ಉತ್ತರ ಪ್ರದೇಶದ ಲಖನೌ ನಲ್ಲಿ ನಡೆದಿತ್ತು. ಪಾಗಲ್ ಪ್ರೇಮಿಯ ಕಾಟಕ್ಕೆ ಬೇಸತ್ತ ವಿದ್ಯಾರ್ಥಿನಿ ತನ್ನ ಓದನ್ನು ಬಿಟ್ಟು ಮನೆಗೆ ಬಂದಿಳಿದಿದ್ದಳು. ಯುವಕನ ವಿರುದ್ಧ ವಿದ್ಯಾರ್ಥಿನಿ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಳು.
ಸಂತ್ರಸ್ತ ವಿದ್ಯಾರ್ಥಿನಿ ಅಲಿಗಂಜ್ ನಿವಾಸಿಯಾಗಿದ್ದು NEETಗೆ ತಯಾರಿ ಮಾಡುತ್ತಿದ್ದರು. ಈ ವೇಳೆ ಯುವಕನೊಬ್ಬನಿಂದ ತಮಗೆ ಕಿರುಕುಳ ಆಗುತ್ತಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿನಿ ತನ್ನ ತಂದೆಯೊಂದಿಗೆ ಠಾಣೆಗೆ ಬಂದು ವಿದ್ಯಾರ್ಥಿ ಸೈಯದ್ ಸಿಜಾನ್ ವಿರುದ್ಧ ಲಿಖಿತ ದೂರು ನೀಡಿದ್ದಳು. ಸೈಯದ್ ಸಿಜಾನ್ ಎರಡು ವರ್ಷಗಳ ಹಿಂದೆ 10ನೇ ತರಗತಿಯಲ್ಲಿ ಓದುತ್ತಿದ್ದಾಗ, ಈ ದೂರುದಾರೆ 12ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು ಎನ್ನಲಾಗಿದೆ. ಅಂದಿನಿಂದ ಸೈಯದ್ ಆಕೆಗೆ ಸ್ನೇಹಿತರಾಗುವಂತೆ ಒತ್ತಡ ಹೇರುತ್ತಿದ್ದ ಎಂದು ಆರೋಪಿಸಲಾಗಿದೆ.