ETV Bharat / bharat

ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆಗೊಳಿಸಿ ಮೆರವಣಿಗೆ, ತೀವ್ರ ಆಕ್ರೋಶ, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ - ಮಣಿಪುರ ಜನಾಂಗೀಯ ಸಂಘರ್ಷ

ಮಣಿಪುರದಲ್ಲಿ ನಡೆದ ಅತ್ಯಂತ ಅಮಾನವೀಯ ಕೃತ್ಯದ ವಿಡಿಯೋವೊಂದು ಬೆಳಕಿಗೆ ಬಂದಿದೆ. ಉದ್ರಿಕ್ತ ಗುಂಪೊಂದು ಮಹಿಳೆಯರಿಬ್ಬರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗುತ್ತಿದೆ.

Manipur violance ಮಣಿಪುರ ಹಿಂಸಾಚಾರ
Manipur violance ಮಣಿಪುರ ಹಿಂಸಾಚಾರ
author img

By

Published : Jul 20, 2023, 10:36 AM IST

Updated : Jul 20, 2023, 11:28 AM IST

ಇಂಫಾಲ: ಮಣಿಪುರದಲ್ಲಿ ಬುಡಕಟ್ಟು ಸಮುದಾಯಗಳ ನಡುವಿನ ಸಂಘರ್ಷ ದಿನಕ್ಕೊಂದು ಸ್ವರೂಪ ತಾಳುತ್ತಿದೆ. ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಹಳೆಯ ವಿಡಿಯೋ ಇದೀಗ ವೈರಲ್​ ಆಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅಮಾನವೀಯವಾಗಿ ನಡೆದುಕೊಂಡ ದುರುಳರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಕಾಂಗ್ರೆಸ್​, ಟಿಎಂಸಿ ಹಾಗು ಆಪ್​ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರವನ್ನು ಆಗ್ರಹಿಸಿವೆ.

ಮೇ 4ರಂದು ಈ ನಾಚಿಕೆಗೇಡಿನ ವಿದ್ಯಮಾನ ನಡೆದಿದೆ ಎನ್ನಲಾಗುತ್ತಿದೆ. ಶಸ್ತ್ರಸಜ್ಜಿತ ಜನರ ಗುಂಪೊಂದು ಮಹಿಳೆಯರಿಬ್ಬರನ್ನು ಬೆತ್ತಲೆಗೊಳಿಸಿ ಬಲವಂತವಾಗಿ ರಸ್ತೆಯುದ್ದಕ್ಕೂ ಎಳೆದೊಯ್ದಿದ್ದಾರೆ. ಆ ಬಳಿಕ ಅವರ ಮೇಲೆ ಗ್ಯಾಂಗ್‌ ರೇಪ್​ ಮಾಡಲಾಗಿದೆ ಎಂಬ ಗಂಭೀರ ಆರೋಪವಿದೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ದುಷ್ಕರ್ಮಿಗಳ ವಿರುದ್ಧ ಅಪಹರಣ, ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ್ದಾರೆ.

ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಹೇಯ ಕೃತ್ಯ ನಡೆದಿದೆ. ಪುರುಷರ ಗುಂಪೊಂದು ಅಸಹಾಯಕ ಹೆಣ್ಣು ಮಕ್ಕಳನ್ನು ದೈಹಿಕವಾಗಿ ಹಿಂಸಿಸಿ, ಬೆತ್ತಲೆ ಮಾಡಿ ಕರೆದುಕೊಂಡು ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಹೀಗೆ ಸೆರೆಯಾಳಾಗಿದ್ದ ಮಹಿಳೆಯರು ತಮ್ಮನ್ನು ಬಿಟ್ಟುಬಿಡಿ ಎಂದು ಪರಿಪರಿಯಾಗಿ ಬೇಡಿಕೊಳ್ಳುತ್ತಿರುವುದನ್ನು ನೋಡಬಹುದು. ಮಹಿಳೆಯರು ಅನುಭವಿಸಿದ ಯಾತನೆ, ಭಯಾನಕ ಅವಮಾನಕ್ಕೆ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಪರಿಶಿಷ್ಟ ಪಂಗಡಗಳ ರಾಷ್ಟ್ರೀಯ ಆಯೋಗ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದೆ.

ನಾಚಿಕೆಗೇಡಿನ ಸಂಗತಿ- ಕೇಜ್ರಿವಾಲ್: "ಜನಾಂಗೀಯ ಹಿಂಸಾಚಾರಪೀಡಿತ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದು, ಮಾನವ ಕುಲವೇ ನಾಚಿಕೆಪಡುವಂತಾಗಿದೆ" ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಂಡಿಸಿದ್ದಾರೆ. "ರಾಜ್ಯದಲ್ಲಿನ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಗಮನಹರಿಸಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಬೇಕು" ಎಂದು ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಇದೇ ವೇಳೆ ಒತ್ತಾಯಿಸಿದ್ದಾರೆ.

"ಮಣಿಪುರದಲ್ಲಿ ನಡೆಯುತ್ತಿರುವ ಘಟನೆಗಳು ಅತ್ಯಂತ ನಾಚಿಕೆಗೇಡು ಮತ್ತು ಖಂಡನೀಯ. ಸಮಾಜದಲ್ಲಿ ಈ ರೀತಿಯ ಹೇಯ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ಮಣಿಪುರ ಪರಿಸ್ಥಿತಿ ಚಿಂತಾಜನಕವಾಗುತ್ತಿದೆ. ಇತ್ತ ಕಡೆ ಗಮನ ಹರಿಸುವಂತೆ ಪ್ರಧಾನಿಗೆ ಮನವಿ ಮಾಡುತ್ತೇನೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿಷ್ಕ್ರಿಯತೆ ಜನರಿಗೆ ನೋವು ತಂದಿದೆ. ಪ್ರಧಾನಿ ಮಧ್ಯಸ್ಥಿಕೆಗೆ ವಹಿಸಿಕೊಂಡು, ಸಮಸ್ಯೆಯನ್ನು ಪರಿಹರಿಸಬೇಕು" ಎಂದು ಕೇಳಿಕೊಂಡಿದ್ದಾರೆ.

'ಮಣಿಪುರ ಕಿ ಬಾತ್ ನಡೆಸಿ': "ಮಣಿಪುರದ ಪರಿಸ್ಥಿತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನ ಉಭಯ ಸದನಗಳಲ್ಲಿ ಮಾತನಾಡಬೇಕು. ಮನ್ ಕಿ ಬಾತ್ ಬದಲಿಗೆ ಮಣಿಪುರ ಕಿ ಬಾತ್ ಮಾಡುವ ಸಮಯ ಬಂದಿದೆ" ಎಂದು ತೃಣಮೂಲ ಕಾಂಗ್ರೆಸ್​(ಟಿಎಂಸಿ) ಟೀಕಿಸಿದೆ.

ಜನಾಂಗೀಯ ಕಲಹದಿಂದ ನಲುಗುತ್ತಿರುವ ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಲು ಐವರು ಸದಸ್ಯರ ಟಿಎಂಸಿ ನಿಯೋಗ ಇಂಫಾಲಕ್ಕೆ ಬಂದಿಳಿದಿದೆ. ಇದೇ ವೇಳೆ, "ಪ್ರಧಾನಿ ಮೋದಿ ಅವರು, ದಯವಿಟ್ಟು ಸಂಸತ್ತಿಗೆ ಬಂದು ಉಭಯ ಸದನಗಳಲ್ಲಿ ಮಾತನಾಡಿ. ಮನ್ ಕಿ ಬಾತ್ ಇನ್ನು ಸಾಕು ಮಾಡಿ" ಎಂದು ಟಿಎಂಸಿ ಸಂಸದ ಡೆರೆಕ್ ಒಬ್ರೇನ್ ಟ್ವೀಟ್​ ಮಾಡಿದ್ದಾರೆ.

ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಜನಾಂಗಗಳ ನಡುವೆ ಮೇ 3 ರಿಂದ ಹಿಂಸಾಚಾರ ಶುರುವಾಗಿದೆ. ಇಲ್ಲಿಯವರೆಗೆ 160ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಮಣಿಪುರ ಸಂಘರ್ಷ ಕೊನೆಗೊಳಿಸುವಂತೆ ಪ್ರಧಾನಿ ಮೋದಿಗೆ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಮನವಿ

Last Updated : Jul 20, 2023, 11:28 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.