ETV Bharat / bharat

ಅಸಾನಿ ಚಂಡಮಾರುತದ ಅಬ್ಬರ: ಆಂಧ್ರ, ಒಡಿಶಾ -ಬಂಗಾಳ ಕರಾವಳಿ ತೀರದಲ್ಲಿ ಭಾರಿ ಮುನ್ನೆಚ್ಚರಿಕೆ - ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ

ಅಸಾನಿ ಅಬ್ಬರದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಆಂಧ್ರಪ್ರದೇಶ ಮತ್ತು ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಿದರು. ನಾಗರಿಕರ ಸಹಾಯಕ್ಕಾಗಿ ರಕ್ಷಣಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Cyclone Asani: Union home secy reviews cyclone preparedness; NDRF deployed in Andhra, Odisha, Bengal
ಅಸಾನಿ ಚಂಡಮಾರುತ ಅಬ್ಬರ: ಆಂಧ್ರ, ಒಡಿಶಾ- ಬಂಗಾಳ ಕರಾವಳಿ ತೀರದಲ್ಲಿ ಭಾರಿ ಮುನ್ನೆಚ್ಚರಿಕೆ
author img

By

Published : May 10, 2022, 8:56 PM IST

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಅಸಾನಿ ಚಂಡಮಾರುತ ನಾಳೆ ಮಧ್ಯಾಹ್ನದ ವೇಳೆಗೆ ಕಾಕಿನಾಡ - ವಿಶಾಖಪಟ್ಟಣಂ ತಲುಪುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಒಡಿಶಾ - ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳಗಳ ಕರಾವಳಿ ತೀರದಲ್ಲಿ ಮುನ್ನೆಚ್ಚರಿಕೆ ಘೋಷಿಸಲಾಗಿದೆ.

ಅಸಾನಿ ಅಬ್ಬರದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಆಂಧ್ರಪ್ರದೇಶ ಮತ್ತು ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಪರಿಶೀಲಿಸಿದರು. ನಾಗರಿಕರ ಸಹಾಯಕ್ಕಾಗಿ ರಕ್ಷಣಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್)ಯ ಒಂಬತ್ತು ತಂಡಗಳನ್ನು ಒಡಿಶಾ ಕರಾವಳಿ ತೀರದಲ್ಲಿ ನಿಯೋಜಿಸಲಾಗಿದ್ದರೆ, ಆಂಧ್ರಪ್ರದೇಶದಲ್ಲಿ ಏಳು ತಂಡಗಳನ್ನು ಸನ್ನದ್ಧತೆಯಲ್ಲಿ ಇಡಲಾಗಿದೆ. ಒಡಿಶಾದಲ್ಲಿ ಒಂದು ತಂಡ ಬೀಡು ಬಿಟ್ಟಿದ್ದು ಎನ್​ಡಿಎಫ್​ಆರ್​ನ 17 ಘಟಕಗಳು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ 12 ತಂಡಗಳನ್ನು ನಿಯೋಜಿಸಲಾಗಿದ್ದು, ಐದು ತಂಡಗಳನ್ನ ಯಾವುದೇ ಸಮಯದಲ್ಲಿ ಬಳಸಿಕೊಳ್ಳಲು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ಮಾಹಿತಿ ನೀಡಿದೆ.

ಗಂಟೆಗೆ 75- 85 ಕಿಮೀ ವೇಗದಲ್ಲಿ ಬೀಸಲಿದೆ ಗಾಳಿ: ಚಂಡಮಾರುತವು ಆಂಧ್ರಪ್ರದೇಶ ಕರಾವಳಿಯಲ್ಲಿ ಗಂಟೆಗೆ 75-85 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಆಳ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.

ಒಡಿಶಾದಲ್ಲಿ ಮಳೆ: ಚಂಡಮಾರುತದಿಂದಾಗಿ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಸೋಮವಾರ ಅಲ್ಲಲ್ಲಿ ಭಾರಿ ಪ್ರಮಾಣದ ಮಳೆಯಾಗಿದೆ. ಒಡಿಶಾದ ಖುರ್ದಾ, ಗಂಜಾಂ, ಪುರಿ, ಕಟಕ್ ಮತ್ತು ಭದ್ರಕ್ ಜಿಲ್ಲೆಗಳಲ್ಲಿ ಎರಡರಿಂದ ಮೂರು ಬಾರಿ ಮಳೆಯಾದ ವರದಿಯಾಗಿದೆ. ಇನ್ನು ಕೋಲ್ಕತ್ತಾ, ಹೌರಾ, ಮೇದಿನಿಪುರ, ಉತ್ತರ ಮತ್ತು ದಕ್ಷಿಣ 24 ಪರಗಣಗಳು ಮತ್ತು ನಾಡಿಯಾ ಜಿಲ್ಲೆಗಳಲ್ಲಿ ಸೋಮವಾರ ಮತ್ತು ಗುರುವಾರದ ನಡುವೆ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನು ಓದಿ:ಪಂಚಾಯಿತಿ ಕಟ್ಟಡವನ್ನೇ ಮಾರಾಟ ಮಾಡಿದ ಕಾರ್ಯದರ್ಶಿ: ತನಿಖೆಗೆ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.