ನವದೆಹಲಿ: ತೌಕ್ತೆ ಚಂಡಮಾರುತದ ಹಿನ್ನೆಲೆಯಲ್ಲಿ ಅಗತ್ಯವಿರುವವರಿಗೆ ಸಾಧ್ಯವಿರುವ ಎಲ್ಲ ರೀತಿಯ ಸಹಾಯವನ್ನು ಒದಗಿಸುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
"ಕೇರಳ, ಮಹಾರಾಷ್ಟ್ರ, ಗೋವಾ, ತಮಿಳುನಾಡು, ಗುಜರಾತ್ ಮತ್ತು ಕರ್ನಾಟಕದಲ್ಲಿ ಸೈಕ್ಲೋನ್ ಅಲರ್ಟ್ ನೀಡಲಾಗಿದೆ. ತೌಕ್ತೆ ಚಂಡಮಾರುತದಿಂದಾಗಿ ಈಗಾಗಲೇ ಅನೇಕ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅಗತ್ಯವಿರುವವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ನಾನು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. ದಯವಿಟ್ಟು ಸುರಕ್ಷಿತವಾಗಿರಿ" ಎಂದು ಕೇರಳದ ವಯನಾಡು ಕ್ಷೇತ್ರದ ಸಂಸದರೂ ಆಗಿರುವ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
-
#CycloneAlert has been issued in Kerala, Maharashtra, Goa, Tamil Nadu, Gujarat and Karnataka. Cyclone Tauktae is already causing heavy rains in many areas.
— Rahul Gandhi (@RahulGandhi) May 15, 2021 " class="align-text-top noRightClick twitterSection" data="
I appeal to Congress workers to provide all possible assistance to those in need.
Please stay safe.
">#CycloneAlert has been issued in Kerala, Maharashtra, Goa, Tamil Nadu, Gujarat and Karnataka. Cyclone Tauktae is already causing heavy rains in many areas.
— Rahul Gandhi (@RahulGandhi) May 15, 2021
I appeal to Congress workers to provide all possible assistance to those in need.
Please stay safe.#CycloneAlert has been issued in Kerala, Maharashtra, Goa, Tamil Nadu, Gujarat and Karnataka. Cyclone Tauktae is already causing heavy rains in many areas.
— Rahul Gandhi (@RahulGandhi) May 15, 2021
I appeal to Congress workers to provide all possible assistance to those in need.
Please stay safe.
ಇದನ್ನೂ ಓದಿ: ಕರಾವಳಿ ಭಾಗದಲ್ಲಿ ತೌಕ್ತೆ ಚಂಡಮಾರುತ; ಸಮುದ್ರದ ಅಲೆಗಳ ರೌದ್ರನರ್ತನ
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಮುಂದಿನ 24 ಗಂಟೆಯಲ್ಲಿ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿತ್ತು. ಕೇರಳ, ಕರ್ನಾಟಕ, ಲಕ್ಷದ್ವೀಪ, ಗೋವಾ ಮತ್ತು ಮಹಾರಾಷ್ಟ್ರ ಸೇರಿದಂತೆ ಕೆಲ ರಾಜ್ಯಗಳ ಕರಾವಳಿ ಪ್ರದೇಶಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಮೇ 17ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಐಎಂಡಿ ಎಚ್ಚರಿಕೆ ನೀಡಿದೆ.