ETV Bharat / bharat

Cyclone Yaas: ಒಡಿಶಾ, ಪ. ಬಂಗಾಳದಲ್ಲಿ ಪ್ರಧಾನಿ ಮೋದಿ ಇಂದು ವೈಮಾನಿಕ ಸಮೀಕ್ಷೆ

ಯಾಸ್​ ಚಂಡಮಾರುತದಿಂದಾಗಿ ತತ್ತರಿಸಿ ಹೋಗಿರುವ ಒಡಿಶಾ ಹಾಗೂ ಪಶ್ಚಿಮ ಬಂಗಾಳದ ಕೆಲವೊಂದು ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

PM Modi to visit west Bengal
PM Modi to visit west Bengal
author img

By

Published : May 28, 2021, 5:58 AM IST

ನವದೆಹಲಿ: ತೌಕ್ತೆ ಚಂಡಮಾರುತದ ಬೆನ್ನಲ್ಲೇ ಇದೀಗ ಯಾಸ್​ ಸೈಕ್ಲೋನ್​ನಿಂದಾಗಿ ಓಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಅಪಾರ ಪ್ರಮಾಣ ಹಾನಿ ಉಂಟಾಗಿದೆ. ಈ ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಯಾಸ್​ ಚಂಡಮಾರುತದಿಂದಾಗಿ ಬಂಗಾಳದಲ್ಲಿ 3ಲಕ್ಷಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದ್ದು, ಅನೇಕ ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಇದರ ಮಧ್ಯೆ ಒಡಿಶಾ ಕೂಡ ಸೈಕ್ಲೋನ್​​ದಿಂದಾಗಿ ನಲುಗಿ ಹೋಗಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಬಾಲಸೂರ್​, ಭದ್ರಾಕ್​, ಪುರ್ಬಾ ಮೆದಿನಪುರ್​ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಇದನ್ನೂ ಓದಿ: ಸಿಎಂ ಬದಲಾವಣೆ ವಿಚಾರ ಗೊತ್ತಿಲ್ಲ; ನನ್ನ ಜನ್ರ ಜೀವ ಉಳಿಸಿಕೊಳ್ಳಬೇಕಿದೆ ಎಂದ ರೇವಣ್ಣ

ಪಶ್ಚಿಮ ಬಂಗಾಳದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜೊತೆ ಸಭೆ ನಡೆಸುವ ಸಾಧ್ಯತೆ ಇದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾತನಾಡಿರುವ ಮಮತಾ ಬ್ಯಾನರ್ಜಿ ಮದಿನಿಪುರ ಜಿಲ್ಲೆಯ ಕಲೈಕುಂಡದಲ್ಲಿ ಸಭೆ ನಡೆಯಲಿದ್ದು, ಪರಿಶೀಲನಾ ಸಭೆ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಗುಜರಾತ್​, ಮಹಾರಾಷ್ಟ್ರದಲ್ಲಿ ತೌಕ್ತೆ ಚಂಡಮಾರುತದಿಂದ ತೊಂದರೆಗೊಳಗಾಗಿದ್ದ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದ ಪ್ರಧಾನಿ ಮೋದಿ, ಪರಿಹಾರ ಘೋಷಣೆ ಮಾಡಿದ್ದರು. ಇದೀಗ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ನಮೋ ವಿಶೇಷ ಪ್ಯಾಕೇಜ್​ ಘೋಷಣೆ ಮಾಡುವ ಸಾಧ್ಯತೆ ಇದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.