ಚೆನ್ನೈ (ತಮಿಳುನಾಡು): ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ತಮಿಳುನಾಡು, ಪುದುಚೇರಿಯಲ್ಲಿ ಚಂಡಮಾರುತದ ಭೀತಿ ಎದುರಾಗಿದೆ. ಕರಾವಳಿ ತೀರದಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.
ನೈರುತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಗಂಟೆಗೆ 100 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿದ್ದು, ತಮಿಳುನಾಡು ಹಾಗೂ ಪುದಚೇರಿಯ ಕಡಲ ತೀರಕ್ಕೆ ಬಂದು ಅಪ್ಪಳಿಸಲಿದೆಯಂತೆ. 24 ಗಂಟೆಯೊಳಗೆ ಇದು ಚಂಡಮಾರುತವಾಗಿ ಬದಲಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ತಮಿಳುನಾಡಿನ ಕರಾವಳಿ ಪ್ರದೇಶದಲ್ಲಿ ಭಾರೀ ಬಿರುಗಾಳಿ ಬೀಸಲು ಆರಂಭವಾಗಿದೆ. ಹವಾಮಾನ ತಜ್ಞರ ಪ್ರಕಾರ, ಚಂಡಮಾರುತವು ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ದಾಟಿ ಹೋಗಲಿದ್ದು, ನವೆಂಬರ್ 25ರವರೆಗೆ ಚಂಡಮಾರುತದ ಅಬ್ಬರ ಮುಂದುವರೆಯುವ ಸಾಧ್ಯತೆಗಳಿವೆ ಎಂದು ಐಎಂಡಿ ಚೆನ್ನೈನ ಎಸ್.ಬಾಲಚಂದ್ರನ್ ಹೇಳಿದ್ದಾರೆ.