ಕೊಯಮತ್ತೂರು(ತಮಿಳುನಾಡು): ಕಾರಿಗೆ ಅಳವಡಿಸಿದ್ದ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಯಮತ್ತೂರಿನ ಉಕ್ಕಡಂ ಪ್ರದೇಶದಲ್ಲಿಂದು ನಡೆದಿದೆ. ಸಾವಿಗೀಡಾದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಪ್ರಾಥಮಿಕ ತನಿಖೆಯ ಪ್ರಕಾರ, ರಸ್ತೆಯಲ್ಲಿ ಹಾಕಲಾಗಿರುವ ಸ್ಪೀಡ್ ಬ್ರೇಕರ್ ದಾಟುವಾಗ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ. ನತದೃಷ್ಟ ಕಾರು ಪೊಲ್ಲಾಚಿ ಎಂಬಲ್ಲಿ ನೋಂದಣಿ ಆಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಘಟನೆ ನಡೆದ ಪ್ರದೇಶ ಕೋಮು ಸೂಕ್ಷ್ಮ ಸ್ಥಳವಾಗಿದ್ದು ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಿದ್ದಾರೆ. ಎಡಿಜಿಪಿ ಪಿ ತಾಮರೈ ಕಣ್ಣನ್ ಭೇಟಿ ನೀಡಿ ಪರಿಶೀಲಿಸಿದರು. ಪ್ರಕರಣದ ತನಿಖೆಗೆ ಆರು ತಂಡಗಳನ್ನು ರಚಿಸಲಾಗಿದೆ. ಸುತ್ತಮುತ್ತಲಿನ ಸಿಸಿಟಿವಿ ವಿಡಿಯೋಗಳನ್ನು ತರಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ವಿಧಿವಿಜ್ಞಾನ ತಜ್ಞರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಮನೆಯಲ್ಲಿ ಅಗ್ನಿ ಅವಘಡ: ನಿವೃತ್ತ IPS ಅಧಿಕಾರಿ ಸಾವು, ಪತ್ನಿ-ಪುತ್ರನಿಗೆ ಗಾಯ