ETV Bharat / bharat

ಸೈರಸ್ ಮಿಸ್ತ್ರಿ ರಸ್ತೆ ಅಪಘಾತ ಕೇಸ್​: ಕಾರು ಚಲಾಯಿಸುತ್ತಿದ್ದ ವೈದ್ಯೆ, ಆಕ್ಸಿಡೆಂಟ್​ಗೆ ಕಾರಣವೇನು ಗೊತ್ತಾ?

author img

By

Published : Sep 4, 2022, 10:29 PM IST

Updated : Sep 6, 2022, 12:06 PM IST

ಸೈರಸ್ ಮಿಸ್ತ್ರಿ ಸಾವಿಗೆ ಕಾರಣವಾದ ಮತ್ತು ಅಪಘಾತಕ್ಕೀಡಾದ ಕಾರನ್ನು ಮುಂಬೈನ ಖ್ಯಾತ ಸ್ತ್ರೀರೋಗ ತಜ್ಞೆ ಅನಾಹಿತಾ ಪಾಂಡೋಲೆ ಚಲಾಯಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

cyrus-mistry-dead-in-road-accident-mumbai-doctor-was-driving-car-tried-to-overtake
ಸೈರಸ್ ಮಿಸ್ತ್ರಿ ರಸ್ತೆ ಅಪಘಾತ ಕೇಸ್​: ಕಾರು ಚಲಾಯಿಸುತ್ತಿದ್ದ ವೈದ್ಯೆ, ಆಕ್ಸಿಡೆಂಟ್​ಗೆ ಕಾರಣವೇನು ಗೊತ್ತಾ?

ಮುಂಬೈ (ಮಹಾರಾಷ್ಟ್ರ): ಟಾಟಾ ಸಮೂಹದ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರ ಕಾರು ಅಪಘಾತ ಘಟನೆ ಕುರಿತಂತೆ ಪೊಲೀಸರು ಮಾಹಿತಿಯನ್ನು ಕಲೆ ಹಾಕಿದ್ದಾರೆ. ಮಿಸ್ತ್ರಿ ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಕಾರಿನಲ್ಲಿ ಒಟ್ಟಾರೆ ನಾಲ್ವರಿದ್ದರು ಮತ್ತು ಮುಂಬೈನ ವೈದ್ಯೆಯೊಬ್ಬರು ಕಾರು ಚಾಲನೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತ, ಘಟನೆ ಬಗ್ಗೆ ತನಿಖೆ ನಡೆಸುವಂತೆ ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವೀಸ್ ಆದೇಶಿಸಿದ್ದಾರೆ.

ಮಹಾರಾಷ್ಟ್ರದ ಪಾಲ್ಘರ್​ ಜಿಲ್ಲೆಯ ಸೂರ್ಯ ನದಿಯ ಸೇತುವೆ ಬಳಿ ಭಾನುವಾರ ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸೈರಸ್ ಮಿಸ್ತ್ರಿ (54) ನಿಧನರಾಗಿದ್ದರು. ಅಹಮದಾಬಾದ್‌ನಿಂದ ಮುಂಬೈಗೆ ಬರುತ್ತಿದ್ದಾಗ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ದುರಂತ ಸಂಭವಿಸಿತ್ತು. ಇದೀಗ ಈ ಘಟನೆಯಲ್ಲಿ ಸೈರಸ್ ಮಿಸ್ತ್ರಿ ಮತ್ತು ಕಾರಿನಲ್ಲಿದ್ದ ಮತ್ತೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಸೈರಸ್ ಮಿಸ್ತ್ರಿ ಸಾವಿಗೆ ಕಾರಣವಾದ ಮತ್ತು ಅಪಘಾತಕ್ಕೀಡಾದ ಕಾರನ್ನು ಮುಂಬೈನ ಖ್ಯಾತ ಸ್ತ್ರೀರೋಗ ತಜ್ಞೆ ಅನಾಹಿತಾ ಪಾಂಡೋಲೆ (55) ಚಲಾಯಿಸುತ್ತಿದ್ದರು. ಅಲ್ಲದೇ, ಕಾರಿನಲ್ಲಿ ಸೈರಸ್ ಮಿಸ್ತ್ರಿ ಅವರೊಂದಿಗೆ ಅನಾಹಿತಾ ಪತಿ ಡೇರಿಯಸ್ ಪಾಂಡೋಲೆ (60) ಹಾಗೂ ಡೇರಿಯಸ್ ಅವರ ಸಹೋದರ ಜಹಾಂಗೀರ್ ಪಾಂಡೋಲೆ ಕೂಡ ಇದ್ದರು. ಈ ಘಟನೆಯಲ್ಲಿ ಸೈರಸ್ ಮಿಸ್ತ್ರಿ ಹಾಗೂ ಜಹಾಂಗೀರ್ ಪಾಂಡೋಲೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಟಾಟಾ ಸಮೂಹದ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಸಾವು: ಈಟಿವಿ ಭಾರತ ಎಕ್ಸ್​ಕ್ಲೂಸಿವ್​ ವಿಡಿಯೋ

ಅಲ್ಲದೇ, ಪ್ರಾಥಮಿಕ ತನಿಖೆ ಪ್ರಕಾರ, ಕಾರನ್ನು ಅತಿವೇಗದಿಂದ ಚಲಾಯಿಸಲಾಗಿತ್ತು ಮತ್ತು ರಾಂಗ್ ಸೈಡ್‌ನಿಂದ (ಎಡದಿಂದ) ಮತ್ತೊಂದು ವಾಹನವನ್ನು ಓವರ್​ಟೇಕ್​ ಮಾಡಲು ಪ್ರಯತ್ನಿಸಲಾಗುತ್ತಿತ್ತು ಎಂಬುದಾಗಿಯೂ ತಿಳಿದು ಬಂದಿದೆ. ಅನಾಹಿತಾ ಅವರೊಂದಿಗೆ ಪತಿ ಡೇರಿಯಸ್ ಮುಂಭಾಗದ ಸೀಟಿನಲ್ಲಿ ಕುಳಿತಿದ್ದರು. ಸೈರಸ್ ಮಿಸ್ತ್ರಿ ಮತ್ತು ಜಹಾಂಗೀರ್ ಹಿಂಬದಿ ಸೀಟಿನಲ್ಲಿ ಇದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನಾ ಸ್ಥಳದ ಸಮೀಪದ ರಸ್ತೆಬದಿಯ ಗ್ಯಾರೇಜ್‌ನಲ್ಲಿ ಕೆಲಸ ಮಾಡುವ ಪ್ರತ್ಯಕ್ಷದರ್ಶಿಯೊಬ್ಬರು ಮಾತನಾಡಿ, ಮಹಿಳೆ ಕಾರನ್ನು ಚಲಾಯಿಸುತ್ತಿದ್ದರು ಮತ್ತು ಎಡಭಾಗದಿಂದ ಮತ್ತೊಂದು ವಾಹನವನ್ನು ಓವರ್​ಟೇಕ್​ಗೆ ಪ್ರಯತ್ನಿಸಿದರು. ಆದರೆ, ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆಯಿತು. ಇದನ್ನು ಕಂಡು ನಾವು ಅಪಘಾತ ಸ್ಥಳಕ್ಕೆ ಓಡಿದೆವು ಎಂದು ತಿಳಿಸಿದ್ದಾರೆ.

ಸೈರಸ್ ಮಿಸ್ತ್ರಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳಸ ಗ್ರಾಮಾಂತರ ಆಸ್ಪತ್ರೆಗೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು. ಅವರ ಪಾರ್ಥಿವ ಶರೀರವನ್ನು ನವಿ ಮುಂಬೈನಿಂದ ಮುಂಬೈಗೆ ತರಲು ಉದ್ಯಮಿ ಗೌತಮ್ ಅದಾನಿ ಅವರ ಹೆಲಿಕಾಪ್ಟರ್ ಬಳಸಲಾಗುವುದು ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವೀಸ್ ಅವರು ರಸ್ತೆ ಅಪಘಾತದ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಸೈರಸ್ ಮಿಸ್ತ್ರಿ ನಿಧನಕ್ಕೆ ಪ್ರಧಾನಿ ಸೇರಿ ಗಣ್ಯರ ಸಂತಾಪ: ಖ್ಯಾತ ಉದ್ಯಮಿ ಬಗ್ಗೆ ತಿಳಿಯಬೇಕಾದ ಐದು ಸಂಗತಿಗಳಿವು

Last Updated : Sep 6, 2022, 12:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.