ETV Bharat / bharat

ದಲಿತ ಯುವಕನ ಮೇಲೆ ಹಲ್ಲೆ: ಆ್ಯಸಿಡ್​​ನಿಂದ ಹಣೆ ಮೇಲೆ ತ್ರಿಶೂಲ ಬಿಡಿಸಿ, ಚಿತ್ರಹಿಂಸೆ - ಉತ್ತರ ಪ್ರದೇಶದಲ್ಲಿ ದಲಿತ ಯುವಕನ ಮೇಲೆ ಹಲ್ಲೆ

ಉತ್ತರ ಪ್ರದೇಶದ ಸಹರಾನ್ಪುರ್​ದಲ್ಲಿ ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಕೆಲವರು, ಆತನ ಮುಖದ ಮೇಲೆ ಆ್ಯಸಿಡ್ ಹಾಕಿ ಚಿತ್ರಹಿಂಸೆ ನೀಡಿದ್ದಾರೆ.

attack Dalit youth with acid in sharanpur

author img

By

Published : Mar 22, 2022, 9:54 PM IST

ಸಹರಾನ್ಪುರ (ಉತ್ತರಪ್ರದೇಶ): ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಕೆಲ ದುಷ್ಕರ್ಮಿಗಳು ಆತನ ಹಣೆ ಮೇಲೆ ಆ್ಯಸಿಡ್​​ನಿಂದ ತ್ರಿಶೂಲ​ ಬಿಡಿಸಿ, ಚಿತ್ರಹಿಂಸೆ ನೀಡಿರುವ ಘಟನೆ ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿರುವ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, ನ್ಯಾಯಕ್ಕಾಗಿ ಮೊರೆ ಇಟ್ಟಿದ್ದಾನೆ.

ಲಭ್ಯವಾಗಿರುವ ಮಾಹಿತಿ ಪ್ರಕಾರ, ಸಹರಾನ್ಪುರ್ ಜಿಲ್ಲೆಯ ಆದೇಶ್ ಎಂಬ ದಲಿತ ಯುವಕನಿಗೆ ಹೋಳಿ ಹಬ್ಬದ ದಿನ ವಿಶಾಲ್ ರಾಣಾ ಎಂಬ ಮೇಲ್ಜಾತಿ ವ್ಯಕ್ತಿ ಫೋನ್ ಮಾಡಿ ಕರೆಯಿಸಿಕೊಂಡಿದ್ದು, ತಾನು ಮದ್ಯಪಾನ ಮಾಡ್ತಿದ್ದ ಗ್ಲಾಸ್ ಕ್ಲೀನ್ ಮಾಡುವಂತೆ ಒತ್ತಾಯಿಸಿದ್ದಾನೆ. ಈ ವೇಳೆ ಗ್ಲಾಸ್​ ಆದೇಶ್ ಕಾಲಿನ ಮೇಲೆ ಬಿದ್ದಿದೆ. ಇದರಿಂದ ಆಕ್ರೋಶಗೊಂಡಿರುವ ಆತ ತನ್ನ ಸಹಚರರೊಂದಿಗೆ ಸೇರಿಕೊಂಡು ಥಳಿಸಿದ್ದಾನೆ.

attack Dalit youth with acid in sharanpur

ಇದರ ಬೆನ್ನಲ್ಲೇ ಆತನ ಕೈ-ಕಾಲು ಹಿಡಿದುಕೊಂಡು ಹಣೆಯ ಮೇಲೆ ಆ್ಯಸಿಡ್​ ಎರಚಿದ್ದು, ತದನಂತರ ತ್ರಿಶೂಲ ಬಿಡಿಸಿದ್ದಾರೆ. ಈ ವೇಳೆ ಹಲ್ಲೆ ಮಾಡದಂತೆ ಮನವಿ ಮಾಡಿದ್ರೂ ಆತನ ಮಾತು ಯಾರೂ ಕೇಳಿಲ್ಲ. ಅವರ ಕೈಯಿಂದ ತಪ್ಪಿಸಿಕೊಂಡು ಬಂದಿರುವ ವ್ಯಕ್ತಿ ಮನೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾನೆ. ಇದರ ಬೆನ್ನಲ್ಲೇ ಪೊಲೀಸ್ ಠಾಣೆಗೆ ತೆರಳಿರುವ ಕುಟುಂಬಸ್ಥರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.

ಇದನ್ನೂ ಓದಿ: 45 ವರ್ಷದ ವ್ಯಕ್ತಿ ಜೊತೆ 16ರ ಬಾಲೆಯ ಮದುವೆ, ಹೆಣ್ಣು ಮಗುವಿಗೆ ಜನ್ಮ; 22 ವರ್ಷದ ಯುವಕನೊಂದಿಗೆ ಪರಾರಿ!

ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿರುವ ಬೆನ್ನಲ್ಲೇ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಲಾಗಿದ್ದು, ದೂರು ವಾಪಸ್ ಪಡೆದುಕೊಳ್ಳದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿದ್ದಾರೆಂದು ಸಂತ್ರಸ್ತ ಹೇಳಿಕೊಂಡಿದ್ದಾನೆ.

ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಎಸ್​ಎಸ್​ಪಿ ಆಕಾಶ್​ ತೋಮರ್, ಹೋಳಿ ಹಬ್ಬದಿಂದ ಆದೇಶ್ ಮತ್ತು ವಿಶಾಲ್​ ಒಟ್ಟಿಗೆ ಸೇರಿ ಮದ್ಯಪಾನ ಸೇವಿಸಿದ್ದಾರೆ. ಹಣದ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ಉಂಟಾಗಿದ್ದು, ಈ ವೇಳೆ ಆ್ಯಸಿಡ್​ ಎರಚಲಾಗಿದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.