ಮೀರತ್ (ಉತ್ತರ ಪ್ರದೇಶ): ಹತ್ತನೇ ತರಗತಿಯ ವಿದ್ಯಾರ್ಥಿನಿ ಟ್ಯೂಷನ್ಗೆ ತೆರಳುತ್ತಿದ್ದ ವೇಳೆ ಆಕೆಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಮೀರತ್‌ನ ಸರ್ಧಾನ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ನಾಲ್ವರು ಯುವಕರು ಬಳಿಕ ಆಕೆಗೆ ಬಲವಂತವಾಗಿ ವಿಷ ಕುಡಿಸಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
ಇದನ್ನೂ ಓದಿ: ಮಾವಿನ ತೋಪಿಗೆ ನುಗ್ಗಿದ ಬಾಲಕರಿಗೆ ಥಳಿಸಿ, ಸಗಣಿ ತಿನ್ನಿಸಿದ ಕೀಚಕರು: ವಿಡಿಯೋ ವೈರಲ್
ಈ ಸಂಬಂಧ ನಾಲ್ವರು ಆರೋಪಿಗಳ ವಿರುದ್ಧ ಕುಟುಂಬ ಸದಸ್ಯರು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ದೂರು ದಾಖಲಿಸಿದ್ದಾರೆ. ಅಲ್ಲದೇ ಪೋಕ್ಸೋ ಕಾಯ್ದೆಯಡಿಯೂ ಪ್ರಕರಣ ದಾಖಲಾಗಿದೆ.
ತನಿಖೆ ಕೈಗೊಂಡ ಪೊಲೀಸರು ದಬೀಶ್ ಜರಿಯಮಾಲಾ ಎಂಬಾತನನ್ನು ಬಂಧಿಸಿದ್ದು,ಇತರ ಮೂವರು ಆರೋಪಿಗಳಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ.