ETV Bharat / bharat

ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ಸಹೋದರಿಯರ ಶವ ಪತ್ತೆ; ಅತ್ಯಾಚಾರವೆಸಗಿ ಕೊಲೆ ಶಂಕೆ

ಇಬ್ಬರು ದಲಿತ ಸಹೋದರಿಯರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಮ್ಮ ಮಕ್ಕಳ ಮೇಲೆ ಅತ್ಯಾಚಾರ ನಡೆದಿದೆ ಎಂದು ಪೋಷಕರು ಆರೋಪಿಸಿದ್ದಾರೆ.

Dalit Sisters Found Hanging From Tree
Dalit Sisters Found Hanging From Tree
author img

By

Published : Sep 15, 2022, 6:44 AM IST

Updated : Sep 15, 2022, 10:45 AM IST

ಲಖನೌ(ಉತ್ತರ ಪ್ರದೇಶ): ಉತ್ತರ ಪ್ರದೇಶದಲ್ಲಿ ಅಮಾನವೀಯ ಕೃತ್ಯಗಳು ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇದೀಗ ಲಖಿಂಪುರದಲ್ಲಿ 18 ವರ್ಷದೊಳಗಿನ ಇಬ್ಬರು ಸಹೋದರಿಯರ ಶವ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದೊರೆತಿದೆ. ಇವರ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಅಪ್ರಾಪ್ತೆಯರು ದಲಿತ ಕುಟುಂಬಕ್ಕೆ ಸೇರಿದವರು. ನಿನ್ನೆ ಮಧ್ಯಾಹ್ನ ಕೆಲವರು ಮೋಟಾರ್ ಸೈಕಲ್‌ನಲ್ಲಿ ನನ್ನ ಮಕ್ಕಳನ್ನು ಹೊರಗಡೆ ಕರೆದುಕೊಂಡು ಹೋಗಿದ್ದರು ಎಂದು ತಾಯಿ ತಿಳಿಸಿದ್ದಾರೆ.

  • Uttar Pradesh | Dead bodies of two girls were found hanging from a tree in a field outside a village in Lakhimpur Kheri. No injuries were found on the bodies. Other things to be ascertained after post-mortem. We'll try to expedite the probe: Laxmi Singh, IG, Lucknow Range (14.09) pic.twitter.com/Uj9O5m9ldU

    — ANI UP/Uttarakhand (@ANINewsUP) September 14, 2022 " class="align-text-top noRightClick twitterSection" data=" ">

ಘಟನೆ ನಡೆದ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಡುಗಿಯರು ತಮ್ಮ ದುಪಟ್ಟಾಗಳಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ ಎಂದು ಪೊಲೀಸ್ ಇನ್ಸ್​ಪೆಕ್ಟರ್​ ಲಕ್ಷ್ಮಿ ಸಿಂಗ್ ತಿಳಿಸಿದರು. ಮರಣೋತ್ತರ ಪರೀಕ್ಷೆಯ ವರದಿಗೋಸ್ಕರ ಕಾಯಲಾಗ್ತಿದೆ. ಕುಟುಂಬ ಸದಸ್ಯರು ನೀಡಿರುವ ಮಾಹಿತಿಯಂತೆ ಎಫ್​ಐಆರ್ ದಾಖಲಿಸಿರುವುದಾಗಿ ಅವರು ಮಾಹಿತಿ ನೀಡಿದರು.

ಇದನ್ನೂ ಓದಿ: ಮದುವೆ ನೆಪದಲ್ಲಿ ಅತ್ಯಾಚಾರ.. ಬಲವಂತವಾಗಿ ಗರ್ಭಪಾತ ಮಾಡಿಸಿದ ಕಾಮುಕ

ಯೋಗಿ ಸರ್ಕಾರದ ವಿರುದ್ಧ ಅಖಿಲೇಶ್‌, ಪ್ರಿಯಾಂಕಾ ಟೀಕೆ: ಘಟನೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರು,​​​ "ಉತ್ತರ ಪ್ರದೇಶ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯದಲ್ಲಿ ಮಹಿಳೆಯರಿಗೆ ಯಾವುದೇ ಸುರಕ್ಷತೆ ಇಲ್ಲ. ಯೋಗಿ ಸರ್ಕಾರದಲ್ಲಿ ಗೂಂಡಾಗಳು ಪ್ರತಿದಿನ ತಾಯಂದಿರು, ಸಹೋದರಿಯರಿಗೆ ಕಿರುಕುಳ ನೀಡ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ" ಎಂದು ಟೀಕಿಸಿದ್ದಾರೆ. ಘಟನಾ ಸ್ಥಳದಲ್ಲಿ ಜನರು ಪ್ರತಿಭಟನೆ ನಡೆಸುತ್ತಿರುವ ವಿಡಿಯೋಗಳನ್ನು ಅವರು ಟ್ವೀಟ್ ಮಾಡಿದ್ದಾರೆ. ಈ ಪ್ರಕರಣವನ್ನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಸಹ ಖಂಡಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿ, "ಅಷ್ಟಕ್ಕೂ, ಯುಪಿಯಲ್ಲಿ ಮಹಿಳೆಯರ ಮೇಲಿನ ಘೋರ ಅಪರಾಧಗಳು ಹೆಚ್ಚುತ್ತಿರುವುದೇಕೆ?" ಎಂದು ಕೇಳಿದ್ದಾರೆ.

6 ಮಂದಿ ಆರೋಪಿಗಳ ಬಂಧನ: ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಅವರ ವಿಚಾರಣೆ ಆರಂಭಗೊಂಡಿದೆ. ಜೊತೆಗೆ ಪೋಕ್ಸೊ ಕಾಯ್ದೆಯಡಿ ಅವರ ಮೇಲೆ ಅತ್ಯಾಚಾರ ಮತ್ತು ಕೊಲೆಯ ಸೆಕ್ಷನ್‌ಗಳನ್ನು ಹಾಕಲಾಗಿದೆ. ಓರ್ವ ಆರೋಪಿಯನ್ನು ಎನ್​ಕೌಂಟರ್ ಮಾಡಿ, ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಬಂಧಿತರನ್ನ ಚೋಟೂ, ಜುನೈದ್​, ಸುಹೈಲ್​, ಕರೀಮ್​ದ್ದೀನ್​, ಆರೀಫ್​ ಮತ್ತು ಹಫೀಜ್ ಎಂದು ಗುರುತಿಸಲಾಗಿದೆ.

ರಾಜ್ಯದಲ್ಲಿ ಹಿಂದೆ ನಡೆದ ದುಷ್ಕೃತ್ಯಗಳು..: ಕಳೆದ ವರ್ಷ ಸೆಪ್ಟೆಂಬರ್​ 14 ರಂದು ಹತ್ರಾಸ್​​ನಲ್ಲಿ 19ರ ದಲಿತ ಯುವತಿ ಮೇಲೆ ನಾಲ್ವರು ಅತ್ಯಾಚಾರವೆಸಗಿರುವ ಘಟನೆ ನಡೆದಿತ್ತು. ಯುವತಿ ದೆಹಲಿಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು. ಕಳೆದ ಕೆಲ ದಿನಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಸಹ ದುಷ್ಕೃತ್ಯ ನಡೆದಿತ್ತು.

Last Updated : Sep 15, 2022, 10:45 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.