ನವದೆಹಲಿ : ಭಾರತದಲ್ಲಿ ತುರ್ತು ಪರಿಸ್ಥಿತಿ ಹೇರಿ ಇಂದಿಗೆ 46 ವರ್ಷಗಳೇ ಕಳೆದಿದೆ. ತುರ್ತು ಪರಿಸ್ಥಿತಿಯ 46ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, "ಕರಾಳ ದಿನಗಳನ್ನು" ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ವೇಳೆ ಭಾರತದ ಪ್ರಜಾಪ್ರಭುತ್ವ ಮನೋಭಾವವನ್ನು ಬಲಪಡಿಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳುವಂತೆ ಕರೆ ನೀಡಿದ್ದಾರೆ.
"ನಮ್ಮ ಪ್ರಜಾಪ್ರಭುತ್ವದ ನೀತಿಗಳನ್ನು ಕಾಂಗ್ರೆಸ್ ಮೆಟ್ಟಿ ನಿಂತಿತ್ತು. ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಭಾರತೀಯ ಪ್ರಜಾಪ್ರಭುತ್ವವನ್ನು ರಕ್ಷಿಸಿದ ಎಲ್ಲ ಶ್ರೇಷ್ಠರನ್ನು ನಾವು ನೆನಪಿಸಿಕೊಳ್ಳುತ್ತೇವೆ" ಎಂದು ಅಂದಿನ ಕಾಂಗ್ರೆಸ್ ಸರ್ಕಾರ ಕೈಗೊಂಡ ಹಲವಾರು ಕಠಿಣ ಕ್ರಮಗಳ ಬಗ್ಗೆ ಲಿಂಕ್ ಹಂಚಿಕೊಂಡು ಟ್ವೀಟ್ ಮಾಡಿದ್ದಾರೆ.
-
The #DarkDaysOfEmergency can never be forgotten. The period from 1975 to 1977 witnessed a systematic destruction of institutions.
— Narendra Modi (@narendramodi) June 25, 2021 " class="align-text-top noRightClick twitterSection" data="
Let us pledge to do everything possible to strengthen India’s democratic spirit, and live up to the values enshrined in our Constitution.
">The #DarkDaysOfEmergency can never be forgotten. The period from 1975 to 1977 witnessed a systematic destruction of institutions.
— Narendra Modi (@narendramodi) June 25, 2021
Let us pledge to do everything possible to strengthen India’s democratic spirit, and live up to the values enshrined in our Constitution.The #DarkDaysOfEmergency can never be forgotten. The period from 1975 to 1977 witnessed a systematic destruction of institutions.
— Narendra Modi (@narendramodi) June 25, 2021
Let us pledge to do everything possible to strengthen India’s democratic spirit, and live up to the values enshrined in our Constitution.
"ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. 1975 ರಿಂದ 1977 ರವರೆಗಿನ ಅವಧಿಯು ಸಂಸ್ಥೆಗಳ ವ್ಯವಸ್ಥಿತ ನಾಶಕ್ಕೆ ಸಾಕ್ಷಿಯಾಯಿತು. ಭಾರತದ ಪ್ರಜಾಪ್ರಭುತ್ವ ಮನೋಭಾವವನ್ನು ಬಲಪಡಿಸಲು ಮತ್ತು ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೌಲ್ಯಗಳಿಗೆ ತಕ್ಕಂತೆ ಬದುಕಲು ಸಾಧ್ಯವಿರುವ ಎಲ್ಲ ಅಂಶಗಳನ್ನು ಮಾಡುವುದಾಗಿ ಪ್ರತಿಜ್ಞೆ ಮಾಡೋಣ" ಎಂದು ಹೇಳಿದರು.
ಗೃಹ ಸಚಿವ ಅಮಿತ್ ಶಾ ಸಹ ಈ ಬಗ್ಗೆ ಮಾತನಾಡಿದ್ದು, ಕಾಂಗ್ರೆಸ್ನಲ್ಲಿ 1975ರಲ್ಲಿ ಪ್ರಜಾಪ್ರಭುತ್ವವನ್ನು "ಕೊಲೆ ಮಾಡಿದ್ದಾರೆ". ಒಂದು ಕುಟುಂಬದ ವಿರುದ್ಧ ಎದ್ದಿರುವ ಧ್ವನಿಯನ್ನು ಮೆಟ್ಟಲು ತುರ್ತು ಪರಿಸ್ಥಿತಿ ಹೇರಲಾಯಿತು. ಇದನ್ನು ಭಾರತದ ಪ್ರಜಾಪ್ರಭುತ್ವದ ಕರಾಳ ಅಧ್ಯಾಯ ಎಂದು ಕರೆಯಬಹುದು ಎಂದರು.
1975 ರಿಂದ 1977 ರವರೆಗೆ 21 ತಿಂಗಳ ಅವಧಿಗೆ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಜನರ ಮೂಲಭೂತ ಹಕ್ಕುಗಳ ಮೇಲೆ ನಿರ್ಬಂಧ ಹೇರಿಸಿ ತುರ್ತು ಪರಿಸ್ಥಿತಿಯನ್ನು ವಿಧಿಸಲಾಯಿತು. ಬಳಿಕ 1977ರಲ್ಲಿ ತುರ್ತು ಪರಿಸ್ಥಿತಿಯನ್ನು ತೆಗೆದು ಹಾಕಿ, ಲೋಕಸಭಾ ಚುನಾವಣೆಗೆ ಕರೆ ನೀಡಿದರು. ಇದರಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲನ್ನು ಅನುಭವಿಸಿತು.