ETV Bharat / bharat

ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಮುಕ್ತ ಮಾರುಕಟ್ಟೆಗೆ ಡಿಜಿಸಿಐ ಶಿಫಾರಸು - ಭಾರತ್ ಬಯೋಟೆಕ್

ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳು ಶೀಘ್ರದಲ್ಲೇ ಮುಕ್ತ ಮಾರುಕಟ್ಟೆಗೆ ಬರುವ ಸಾಧ್ಯತೆಯಿದ್ದು, ಡಿಜಿಸಿಐ ಕೋವಿಡ್ ಲಸಿಕೆಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ನೀಡಲು ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಮುಕ್ತ ಮಾರುಕಟ್ಟೆಗೆ ಡಿಜಿಸಿಐ ಶಿಫಾರಸು
dcgi-expert-committee-recommended-open-market-sale-of-covaxin-and-covishield
author img

By

Published : Jan 20, 2022, 10:32 AM IST

ನವದೆಹಲಿ: ಕೊರೊನಾ ವಿರುದ್ಧ ಹೋರಾಡಲು ಜನತೆಗೆ ಉಚಿತವಾಗಿ ಒದಗಿಸಲಾಗುತ್ತಿರುವ ಕೋವಿಡ್ ಲಸಿಕೆಗಳಾದ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್​ ಲಸಿಕೆಯನ್ನು ಮುಕ್ತ ಮಾರುಕಟ್ಟೆ ಮೂಲಕ ಒದಗಿಸಲು ಅವಕಾಶ ನೀಡುವಂತೆ ಕೇಂದ್ರ ಔಷಧ ನಿಯಂತ್ರಣ ಸಮಿತಿ (DGCI) ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಗಳನ್ನು ಮಾರುಕಟ್ಟೆಗೆ ತರಲು ಭಾರತ್ ಬಯೋಟೆಕ್ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಗಳು ಅರ್ಜಿಯನ್ನು ಸಲ್ಲಿಸಿದ್ದವು. ಈ ಅರ್ಜಿಗಳನ್ನು ಹಿಂದಿನ ಶುಕ್ರವಾರ ಪರಿಶೀಲನೆ ನಡೆಸಿದ ಡಿಸಿಜಿಐ ಕೋವಿಡ್ ಲಸಿಕೆಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಲು ಈಗ ಶಿಫಾರಸು ಮಾಡಿದೆ.

ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಶನ್ (CDSCO) ಅಡಿಯಲ್ಲಿ ಬರುವ ತಜ್ಞರ ಸಮಿತಿ ಕೂಡಾ ಕೇಂದ್ರ ಔಷಧ ನಿಯಂತ್ರಣ ಸಮಿತಿಗೆ ಕೋವಿಡ್ ಲಸಿಕೆಗಳಿಗೆ ಸಂಬಂಧಿಸಿದಂತೆ ನಿಯಮಗಳನ್ನು ಪರಿಷ್ಕರಿಸುವಂತೆ ಮನವಿ ಮಾಡಿತ್ತು.

ಈ ಮೂಲಕ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳು ಶೀಘ್ರದಲ್ಲೆ ಮುಕ್ತ ಮಾರುಕಟ್ಟೆಗೆ ಬರುವ ಸಾಧ್ಯತೆಯಿದೆ. ಹಿಂದಿನ ವರ್ಷ ಜನವರಿ 23ರಿಂದ ಈ ಕೋವಿಡ್ ಲಸಿಕೆಗಳನ್ನು ತುರ್ತು ಬಳಕೆ ಮಾಡಲು ಮಾತ್ರ ಅವಕಾಶ ನೀಡಲಾಗಿತ್ತು. ಮುಕ್ತ ಮಾರುಕಟ್ಟೆಗೆ ಬರುವ ಮೂಲಕ ಕೋವಿಡ್ ಸೋಂಕಿನ ಅಪಾಯ ಸ್ವಲ್ಪ ಮಟ್ಟಿಗೆ ಕಡಿಮೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಜನವರಿ 23ರಿಂದ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಉತ್ತುಂಗಕ್ಕೆ: ಐಐಟಿ ಕಾನ್ಪುರ ತಜ್ಞ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.