ಹೈದರಾಬಾದ್: ಐದು ದಿನಗಳ ಹಿಂದೆ ಪಬ್‌ಗೆ ಭೇಟಿ ನೀಡಿದ್ದ ಹದಿಹರೆಯದ ಹುಡುಗಿಯ ಮೇಲೆ ಮೂವರು ಅಪ್ರಾಪ್ತರು ಸೇರಿದಂತೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಉಪ ಪೊಲೀಸ್ ಆಯುಕ್ತ ಜೋಯಲ್ ಡೇವಿಸ್, ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಸಂತ್ರಸ್ತೆ ತಂದೆ ದೂರು ನೀಡಿದ ನಂತರ ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಲಾಗಿದೆ.
ಸಂತ್ರಸ್ತೆ ಅಪ್ರಾಪ್ತ ವಯಸ್ಸಿನವಳಾಗಿರುವುದರಿಂದ ನಗರ ಪೊಲೀಸರು ಮಹಿಳೆಯರು ಮತ್ತು ಮಕ್ಕಳ 'ಭರೋಸಾ' ಬೆಂಬಲ ಕೇಂದ್ರಕ್ಕೆ ಕಳುಹಿಸಲಾಗಿದೆ. ಕೇಂದ್ರದ ಮಹಿಳಾ ಸಿಬ್ಬಂದಿ ಆಕೆಯನ್ನು ಸಮಾಧಾನಪಡಿಸಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ ಎಂದು ಡೇವಿಸ್ ತಿಳಿಸಿದ್ದಾರೆ. ಬಾಲಕಿಯ ಹೇಳಿಕೆಯ ಆಧಾರದ ಮೇಲೆ IPC ಸೆಕ್ಷನ್ 376D (ಸಾಮೂಹಿಕ ಅತ್ಯಾಚಾರ) ಮತ್ತು POCSO ಕಾಯಿದೆಯ ಇತರ ಸಂಬಂಧಿತ ಸೆಕ್ಷನ್‌ಗಳನ್ನು ಅನ್ವಯಿಸುವ ಮೂಲಕ ಪ್ರಕರಣವನ್ನು ದಾಖಲಿಸಲಾಗಿದೆ. ಆರೋಪಿಗಳು ಅಪರಿಚತರಾಗಿರುವ ಕಾರಣ ಅವರನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.
ಓದಿ: ಅಪ್ರಾಪ್ತೆ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ... ರಾಜಕೀಯ ಪಕ್ಷದ ಮುಖಂಡರ ಪುತ್ರ ಭಾಗಿ!?
ತನಿಖಾ ತಂಡಗಳು ಸಿಸಿಟಿವಿ ದೃಶ್ಯಾವಳಿ ಮತ್ತು ಇತರ ಸಾಕ್ಷ್ಯಗಳನ್ನು ಸಂಗ್ರಹಿಸಿ ಐದು ಜನರನ್ನು ಗುರುತಿಸಿದ್ದಾರೆ. 18 ವರ್ಷದ ಆರೋಪಿಯನ್ನು ಶುಕ್ರವಾರ ಬಂಧಿಸಲಾಗಿದೆ. ಪ್ರಾಥಮಿಕ ತನಿಖೆ ಮೂಲಕ ಪೊಲೀಸರು ಮೂವರು ಬಾಲಾಪರಾಧಿಗಳು ಮತ್ತು ಇನ್ನೊಬ್ಬ 18 ವರ್ಷದ ಯುವಕನ ವಿರುದ್ಧ ಸಾಕ್ಷ್ಯಾಧರಗಳನ್ನು ಸಂಗ್ರಹಿಸಲಾಗಿದೆ ಎಂದು ಡೇವಿಸ್ ಹೇಳಿದರು.
ಇನ್ನುಳಿದ ಆರೋಪಿಗಳನ್ನು ಬಂಧಿಸುವ ಕಾರ್ಯದಲ್ಲಿ ಪೊಲೀಸ್ ತಂಡಗಳು ನಿರತವಾಗಿದ್ದು, 48 ಗಂಟೆಯೊಳಗೆ ಅವರನ್ನು ಬಂಧಿಸಲಾಗುವುದು. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಬಾಲಾಪರಾಧಿಯನ್ನು ರಾತ್ರಿ ಆಗಿರುವುದರಿಂದ ಬಂಧಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಇಂದು ಬೆಳಗ್ಗೆ ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಬಾಲಾಪರಾಧಿಗಳಲ್ಲಿ ಒಬ್ಬರು ಪ್ರಮುಖ ವ್ಯಕ್ತಿಯ ಮಗ ಎಂದು ತಿಳಿದು ಬಂದಿದೆ. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಪೊಲೀಸ್ ಅಧಿಕಾರಿ, ಲಭ್ಯವಿರುವ ಪುರಾವೆಗಳ ಪ್ರಕಾರ ಐವರು ಆರೋಪಿಗಳಲ್ಲಿ ಶಾಸಕರೊಬ್ಬರ ಪುತ್ರ ಇಲ್ಲ. ತನಿಖೆ ಮುಂದುವರಿಯಲಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ವಿಷಯದಲ್ಲಿ ಆಡಳಿತಾರೂಢ ಟಿಆರ್‌ಎಸ್ ಮತ್ತು ಎಐಎಂಐಎಂ ನಾಯಕರ ಕೈವಾಡವಿದೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಆರೋಪಿಗಳನ್ನು ಬಂಧಿಸುವಲ್ಲಿ ವಿಳಂಬವಾಗುತ್ತಿರುವುದರಿಂದ ಈ ವಿಷಯವು ರಾಜಕೀಯ ತಿರುವು ಪಡೆದುಕೊಂಡಿದೆ. ಪೊಲೀಸರು ಹಾಗೂ ಇತರರ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರು, ಶೀಘ್ರ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ನಗರದ ಜುಬ್ಲಿ ಹಿಲ್ಸ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.
ಓದಿ: ರಾಮನಗರದಲ್ಲಿ ದೊಡ್ಡಪ್ಪನಿಂದಲೇ ಮಗುವಿನ ಮೇಲೆ ಅತ್ಯಾಚಾರ
ಟಿಆರ್‌ಎಸ್ ಕಾರ್ಯಾಧ್ಯಕ್ಷ ಮತ್ತು ರಾಜ್ಯ ಸಚಿವ ಕೆ.ಟಿ ರಾಮರಾವ್, ಬಾಲಕಿಯ ಅತ್ಯಾಚಾರದ ಸುದ್ದಿಗೆ ಆಘಾತ ವ್ಯಕ್ತಪಡಿಸಿದ್ದಾರೆ. ಗೃಹ ಸಚಿವ ಮೊಹಮ್ಮದ್ ಮಹಮ್ಮದ್ ಅಲಿ ಮತ್ತು ಪೊಲೀಸರು ಈ ವಿಷಯದಲ್ಲಿ ತಕ್ಷಣ ಮತ್ತು ಕಠಿಣ ಕ್ರಮ ಕೈಗೊಳ್ಳಬೇಕೆಂದು ಟ್ವೀಟ್ ಮೂಲಕ ಸೂಚಿಸಿದ್ದಾರೆ. ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಅಲಿ, ಅಪರಾಧಿಗಳ ಹಿನ್ನೆಲೆ ಲೆಕ್ಕಿಸದೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರತಿಕ್ರಿಯಿಸಿದ್ದಾರೆ.