ಬಲ್ಲಿಯಾ(ಉತ್ತರ ಪ್ರದೇಶ): ಕೊರೊನಾ ಮಹಾಮಾರಿಗೆ ಇಡೀ ದೇಶವೇ ತತ್ತರಿಸಿ ಹೋಗಿದೆ. ಇದರ ಮಧ್ಯೆ ಕೆಲವೊಂದು ಕೋವಿಡ್ ಸೋಂಕಿತ ಮೃತದೇಹಗಳು ಪವಿತ್ರ ಗಂಗಾ ನದಿಯಲ್ಲಿ ತೇಲಿ ಬರುತ್ತಿವೆ.
ತೇಲಿ ಬಂದ ಶವಗಳನ್ನ ಬೀದಿ ನಾಯಿಗಳು ತಿನ್ನುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಗಂಗಾ ನದಿಯಲ್ಲಿ ಎರಡು ಶವಗಳು ಪತ್ತೆಯಾಗಿದ್ದು, ಇವುಗಳನ್ನ ನಾಯಿಗಳು ತಿನ್ನುತ್ತಿರುವ ವಿಡಿಯೋ ಮಾಡಿ ಕೆಲವರು ವೈರಲ್ ಮಾಡಿದ್ದಾರೆ. ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಪೊಲೀಸರು ಅಂತ್ಯಸಂಸ್ಕಾರ ನಡೆಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಇನ್ಸ್ಪೆಕ್ಟರ್ ಸಂಜಯ್ ಕುಮಾರ್ ತ್ರಿಪಾಠಿ ಮೃತದೇಹಗಳ ಅಂತ್ಯಕ್ರಿಯೆ ನಡೆಸಲಾಗಿದ್ದು, ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.
ಇದನ್ನೂ ಓದಿ: ಗ್ರಾಮೀಣ ಭಾಗದಲ್ಲಿ ಕೊರೊನಾ ಮಹಾಸ್ಫೋಟ.. ಹೊಸ ಮಾರ್ಗಸೂಚಿ ಹೊರಡಿಸಿದ ಕೇಂದ್ರ
ಕಳೆದ ಕೆಲ ದಿನಗಳಿಂದ ಗಂಗಾ ನದಿಯಲ್ಲಿ ಮೇಲಿಂದ ಮೇಲೆ ಮೃತದೇಹಗಳು ಪತ್ತೆಯಾಗುತ್ತಿದ್ದು, ಅವುಗಳ ಅಂತ್ಯಕ್ರಿಯೆ ಸಹ ನಡೆಸಲಾಗುತ್ತಿದೆ. ಈ ಮಧ್ಯೆ ಈ ವಿಡಿಯೋ ವೈರಲ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ವೈರಲ್ ಆಗಿದೆ. ಕೋವಿಡ್ನಿಂದ ಸಾವನ್ನಪ್ಪುತ್ತಿರುವವರ ಮೃತದೇಹ ಗಂಗಾ ನದಿಯಲ್ಲಿ ತೇಲಿ ಬಿಡಲಾಗುತ್ತಿದ್ದು, ಈಗಾಗಲೇ 200ಕ್ಕೂ ಹೆಚ್ಚು ಮೃತದೇಹಗಳು ಸಿಕ್ಕಿವೆ.