ಸಹರಾನ್‌ಪುರ(ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹರಾನ್ಪುರದ ಮೊಹದ್ ಅರಣ್ಯ ಪ್ರದೇಶದಲ್ಲಿ ಜೋಡಿಯ ಶವಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಪತ್ತೆಯಾಗಿವೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೋಸ್ಕರ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸುಮಾರು 10 ದಿನಗಳ ಹಿಂದೆ ಈ ಜೋಡಿ ಮನೆಯಿಂದ ಓಡಿ ಹೋಗಿದ್ದರು ಎಂದು ತಿಳಿದು ಬಂದಿದೆ.
ನೂರ್ಪುರ ಗ್ರಾಮದ ವಿದ್ಯಾರ್ಥಿನಿಯೋರ್ವಳು 12ನೇ ತರಗತಿ ವ್ಯಾಸಂಗ ಮಾಡ್ತಿದ್ದು, ಪಕ್ಕದ ಗ್ರಾಮದ 45 ವರ್ಷದ ವ್ಯಕ್ತಿಯನ್ನು ಪ್ರೀತಿಸುತ್ತಿದ್ದಳಂತೆ. ಇಬ್ಬರೂ ಕಳೆದ ಕೆಲವು ದಿನಗಳ ಹಿಂದೆ ಮನೆಯಿಂದ ಓಡಿಹೋಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸೆ. 4ರಂದು ನಾಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಇದನ್ನೂ ಓದಿ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕ, ಬಾಲಕಿಯ ಶವ ಪತ್ತೆ!
ಪೊಲೀಸರು ಇಬ್ಬರಿಗೆ ಶೋಧ ನಡೆಸುತ್ತಿದ್ದ ಸಂದರ್ಭದಲ್ಲೇ ಇಬ್ಬರ ಮೃತದೇಹಗಳು ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿವೆ. ಮೂರು ದಿನಗಳ ಹಿಂದಷ್ಟೇ ಸಂತ್ ಕಬೀರ್ ನಗರದ ರಾಂಪುರ ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ 18 ವರ್ಷದ ಯುವಕ ಹಾಗೂ 15 ವರ್ಷದ ಬಾಲಕಿಯ ಮೃತದೇಹಗಳು ದೊರೆತಿದ್ದವು.