ರಾಂಚಿ (ಜಾರ್ಖಂಡ್ ): ಇಲ್ಲಿನ ರಾಂಚಿ ಇನ್‌ಸ್ಟಿಟ್ಯೂಟ್ ಆಫ್ ನ್ಯೂರೋ ಸೈಕಿಯಾಟ್ರಿ ಆ್ಯಂಡ್ ಅಲೈಡ್ ಸೈನ್ಸಸ್ (RINPAS) ಸರ್ಕಾರಿ ಆಸ್ಪತ್ರೆಯಲ್ಲಿ ಇಲ್ಲಿನ ರೋಗಿಗಳ ಆಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಮೂಲಗಳ ಪ್ರಕಾರ, ಆಸ್ಪತ್ರೆಯಲ್ಲಿ ರೋಗಿಗಳಿಗೆ ನೀಡುವ ಆಹಾರದಲ್ಲಿ ಸತ್ತ ಇಲಿಯೊಂದು ಪತ್ತೆಯಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ RINPAS ನ ನಿರ್ದೇಶಕರಾದ ಜಯತಿ ಸಿಮ್ಲಾಯಿ, ಇದು ಸಂಸ್ಥೆಯ ಹೆಸರನ್ನು ಕೆಡಿಸಲು ಮಾಡಿರುವ ಕೆಲಸವಾಗಿದೆ. ಈ ಬಗ್ಗೆ ಕಂಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಪತ್ತೆ ಹಚ್ಚಲಾಗಿದೆ. ಜೊತೆಗೆ ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರರನ್ನು ಬಂಧಿಸಲು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ ಎಂದು ಹೇಳಿದರು.
RINPAS ಮಾನಸಿಕ ಅಸ್ವಸ್ಥ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಯಾಗಿದ್ದು, ಇವರಿಗೆ ನೀಡುವ ಆಹಾರದ ಗುಣಮಟ್ಟದ ಬಗ್ಗೆ ವಿಶೇಷ ಗಮನ ವಹಿಸಬೇಕಾಗುತ್ತದೆ. ಆದರೆ, ಮಾನಸಿಕ ಅಸ್ವಸ್ಥ ರೋಗಿಗಳ ಆಹಾರದಲ್ಲಿ ಇಲಿ ಕಂಡು ಬಂದಿದ್ದು, ರೋಗಿಗಳ ಜೀವವ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಇದಕ್ಕೆಲ್ಲ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ರೋಗಿಯ ಸಂಬಂಧಿಕರು ದೂರಿದ್ದಾರೆ.
ಓದಿ : ಮುಂಬೈ: ₹1,400 ಕೋಟಿ ಮೌಲ್ಯದ ಮೆಫೆಡ್ರೊನ್ ಡ್ರಗ್ಸ್ ವಶ, ಐವರ ಬಂಧನ