ETV Bharat / bharat

ಕಿವುಡ, ಮೂಕ ಮಹಿಳೆ ಮೇಲೆ ಕಾಮುಕನಿಂದ ನಿರಂತರ ಅತ್ಯಾಚಾರ

ಕಿವುಡ ಮತ್ತು ಮೂಕ ಮಹಿಳೆಯೊಬ್ಬಳ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Deaf-mute woman raped in Delhi
ಮೂಕ ಮಹಿಳೆ ಮೇಲೆ ಅತ್ಯಾಚಾರ
author img

By

Published : Dec 7, 2021, 2:37 AM IST

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕಿವುಡ ಮತ್ತು ಮೂಕ ಮಹಿಳೆಯೊಬ್ಬಳ ಮೇಲೆ ಪದೇ ಪದೇ ಅತ್ಯಾಚಾರ ನಡೆಸಿದ ಘೋರ ಪ್ರಕರಣ ಬೆಳಕಿಗೆ ಬಂದಿದ್ದು, ಕೃತ್ಯ ಎಸಗಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವೆಂಬರ್ 21ರಿಂದ ಮಹಿಳೆ ಮೇಲೆ 34 ವರ್ಷದ ಆರೋಪಿಯು ನಿರಂತರ ಅತ್ಯಾಚಾರ ನಡೆಸಿದ್ದಾನೆ. ಸಂತ್ರಸ್ತೆಯು ತನ್ನ ತಾಯಿಯೊಂದಿಗೆ ತೆರಳಿ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಳು. ಸಂತ್ರಸ್ತೆಯು ಕಿವುಡ ಮತ್ತು ಮೂಕಳಾದ ಕಾರಣ ವ್ಯಾಖ್ಯಾನಕಾರರ ನೆರವಿನೊಂದಿಗೆ ಭಾಜನಪುರ ಪೊಲೀಸರು ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದರು.

ಭಾರತೀಯ ದಂಡ ಸಂಹಿತೆಯ ಕಲಂ 376(2)(n) ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕೋರ್ಟ್​ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣದ ಹೆಚ್ಚಿನ ತನಿಖೆ ಮುಂದುವರೆದಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಏರುಗತಿಯಲ್ಲೇ ಸಾಗುತ್ತಿವೆ. ದೆಹಲಿ ಪೊಲೀಸರ ಅಂಕಿಅಂಶಗಳ ಪ್ರಕಾರ, ನಗರದಲ್ಲಿ ಪ್ರಸಕ್ತ ವರ್ಷದ ಅಕ್ಟೋಬರ್ 31ರವರೆಗೆ 1,725 ​​ಮಹಿಳೆಯರು ಅತ್ಯಾಚಾರಕ್ಕೊಳಗಾಗಿದ್ದಾರೆ. 2020ರಲ್ಲಿ ಇದೇ ಅವಧಿಯಲ್ಲಿ 1,429 ಕೇಸ್​ ದಾಖಲಾಗಿದ್ದು, ಶೇ 20ರಷ್ಟು ಹೆಚ್ಚಳವಾದಂತಾಗಿದೆ.

ಇದನ್ನೂ ಓದಿ: ರಾತ್ರೋರಾತ್ರಿ ಅಪಾರ್ಟ್​​​ಮೆಂಟ್‌ಗೆ ನುಗ್ಗಿ ಶೂ,ಚಪ್ಪಲಿ ಕಳ್ಳತನ : ಕೃತ್ಯ ಸಿಸಿಟಿವಿಯಲ್ಲಿ ಸೆರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.