ವಿರುಧುನಗರ್ (ತಮಿಳುನಾಡು): ಫೆ.12 ರಂದು ತಮಿಳುನಾಡಿನ ವಿರುಧುನಗರ್ ಜಿಲ್ಲೆಯಲ್ಲಿ ಸಂಭವಿಸಿದ ಪಟಾಕಿ ಕಾರ್ಖಾನೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.
ವಿರುಧುನಗರದ ಸತೂರ್ ಪ್ರದೇಶದಲ್ಲಿನ ಅಚಂಕುಲಂ ಗ್ರಾಮದಲ್ಲಿರುವ ಮರಿಯಮ್ಮಲ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವಾಗಿತ್ತು. ಶುಕ್ರವಾರ 11 ಕಾರ್ಮಿಕರು, ಶನಿವಾರ 8 ಮಂದಿ ಸಾವನ್ನಪ್ಪಿದ್ದರು. ಗಂಭೀರವಾಗಿ ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರಲ್ಲಿ ಇಂದು ಒಬ್ಬರು ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ: ಅಕ್ಕನ ಜೊತೆ ಜಗಳ ತೆಗೆದಿದ್ದಕ್ಕೆ ಬಾವನ ಹೆಣ ಉರುಳಿಸಿದ ಬಾಮೈದ..!
ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಪಿಎಂ ನರೇಂದ್ರ ಮೋದಿ ಘೋಷಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಮೃತರ ಕುಟುಂಬಕ್ಕೆ 3 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.