ETV Bharat / bharat

ಮುಂಬೈ ಸಿಲಿಂಡರ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ

author img

By

Published : Dec 26, 2020, 10:40 AM IST

ಮುಂಬೈನ ಲಾಲ್‌ಬಾಗ್​ ಪ್ರದೇಶದಲ್ಲಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಓರ್ವ ವ್ಯಕ್ತಿ ಇಂದು ಮೃತಪಟ್ಟಿದ್ದು, ಘಟನೆಯಲ್ಲಿ ಒಟ್ಟು 9 ಮಂದಿ ಬಲಿಯಾದಂತಾಗಿದೆ.

Death toll rises to 9 in the cylinder blast
ಮುಂಬೈ ಸಿಲಿಂಡರ್ ದುರಂತ

ಮುಂಬೈ: ಡಿಸೆಂಬರ್​ 6 ರಂದು ಮಹಾರಾಷ್ಟ್ರದ ಮುಂಬೈನ ಲಾಲ್‌ಬಾಗ್​ ಪ್ರದೇಶದಲ್ಲಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ಬಲಿಯಾದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದು, 9 ಮಂದಿಯ ಸ್ಥಿತಿ ಚಿಂತಾಜನಕವಾಗಿತ್ತು. ಅವಘಡ ನಡೆದ ದಿನದಂದೇ ಇಬ್ಬರು ಸಾವನ್ನಪ್ಪಿದ್ದರು. ಗಾಯಾಳುಗಳನ್ನು ಮುಂಬೈನ ಮಸಿನಾ ಆಸ್ಪತ್ರೆ ಹಾಗೂ ಕೆಇಎಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಓದಿ: ಮುಂಬೈನಲ್ಲಿ ಸಿಲಿಂಡರ್​ ಸ್ಫೋಟ ಪ್ರಕರಣ: ಓರ್ವ ಮಹಿಳೆ ಸಾವು, 9 ಜನರ ಸ್ಥಿತಿ ಚಿಂತಾಜನಕ

ಕೆಇಎಂ ಆಸ್ಪತ್ರೆಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಮೂವರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು. ಮಸಿನಾ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 50 ವರ್ಷದ ಬಿಪಿನ್​ ಎಂಬವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾದಂತಾಗಿದೆ ಎಂದು ಬೃಹನ್​ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಮಾಹಿತಿ ನೀಡಿದೆ. ಸದ್ಯಕ್ಕೆ ಓರ್ವನ ಸ್ಥಿತಿ ಗಂಭೀರವಾಗಿದ್ದು, ಮೂವರ ಆರೋಗ್ಯ ಸ್ಥಿರವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.